AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan: ‘ಜವಾನ್​’ ವಿಡಿಯೋ ಲೀಕ್​; ಶಾರುಖ್​ ಖಾನ್​ ಪರವಾಗಿ ಕಟ್ಟುನಿಟ್ಟಿನ ಆದೇಶ ನೀಡಿದ ದೆಹಲಿ ಹೈಕೋರ್ಟ್​

Shah Rukh Khan: ಕೆಲವು ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ‘ಜವಾನ್​’ ಸಿನಿಮಾದ ದೃಶ್ಯಗಳನ್ನು ಲೀಕ್​ ಮಾಡಲಾಗಿದೆ. ಇದರಿಂದ ಶಾರುಖ್​ ಖಾನ್​ ಗರಂ ಆಗಿದ್ದಾರೆ.

Jawan: ‘ಜವಾನ್​’ ವಿಡಿಯೋ ಲೀಕ್​; ಶಾರುಖ್​ ಖಾನ್​ ಪರವಾಗಿ ಕಟ್ಟುನಿಟ್ಟಿನ ಆದೇಶ ನೀಡಿದ ದೆಹಲಿ ಹೈಕೋರ್ಟ್​
ಶಾರುಖ್ ಖಾನ್
ಮದನ್​ ಕುಮಾರ್​
|

Updated on:Apr 26, 2023 | 11:33 AM

Share

​ನಟ ಶಾರುಖ್​ ಖಾನ್​ (Shah Rukh Khan) ಅವರು ‘ಜವಾನ್​’ ಮತ್ತು ‘ಡಂಕಿ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಪಠಾಣ್​’ ಸಕ್ಸಸ್​ ಬಳಿಕ ಅವರು ಸುಮ್ಮನೆ ಕುಳಿತಿಲ್ಲ. ಮುಂದಿನ ಸಿನಿಮಾಗಳ ಮೇಲೆ ಗಮನ ಹರಿಸಿದ್ದಾರೆ. ಅಟ್ಲಿ ಕುಮಾರ್​ ನಿರ್ದೇಶನದಲ್ಲಿ ಶಾರುಖ್​ ಖಾನ್​ ನಟಿಸುತ್ತಿರುವ ಜವಾನ್​’ ಸಿನಿಮಾದ (Jawan Movie) ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆದರೆ ಈ ಸಿನಿಮಾದ ಕೆಲವು ದೃಶ್ಯಗಳನ್ನು ಕಿಡಿಗೇಡಿಗಳು ಲೀಕ್​ ಮಾಡಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಬೇಸರ ಆಗಿದೆ. ಸ್ವತಃ ಶಾರುಖ್​ ಖಾನ್​ ಅವರ ಒಡೆತನದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸಿನಿಮಾದ ದೃಶ್ಯಗಳು ಇಂಟರ್​ನೆಟ್​ನಲ್ಲಿ ಸೋರಿಕೆಯಾದರೆ ನಿರ್ಮಾಪಕರಿಗೆ ನಷ್ಟ ಆಗುತ್ತದೆ. ಹಾಗಾಗಿ ಶಾರುಖ್​ ಖಾನ್​ ಅವರು ದೆಹಲಿ ಹೈಕೋರ್ಟ್​ (Delhi High Court) ಮೆಟ್ಟಿಲೇರಿದ್ದಾರೆ. ಅಲ್ಲಿ ಅವರಿಗೆ ಜಯ ಸಿಕ್ಕಿದೆ.

ಕೆಲವು ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ‘ಜವಾನ್​’ ಸಿನಿಮಾದ ದೃಶ್ಯಗಳನ್ನು ಲೀಕ್​ ಮಾಡಲಾಗಿದೆ. ಇದರಿಂದ ಶಾರುಖ್​ ಖಾನ್​ ಗರಂ ಆಗಿದ್ದಾರೆ. ತಮ್ಮ ಸಿನಿಮಾದ ಕಾಂಟೆಂಟ್​ ಸೋರಿಕೆ ಮಾಡಿದ ಕಿಡಿಗೇಡಿಗಳ ವಿರುದ್ಧ ಅವರು ಕಾನೂನಿನ ಸಮರ ಸಾರಿದ್ದಾರೆ. ಸೋಶಿಯಲ್​ ಮೀಡಿಯಾ ಖಾತೆ​, ಯೂಟ್ಯೂಬ್​, ವೆಬ್​ಸೈಟ್​ ಮುಂತಾದ ಕಡೆಗಳಲ್ಲಿ ಈ ದೃಶ್ಯಗಳನ್ನು ಅಪ್​ಲೋಡ್​ ಮಾಡಿರುವವರು ಕೂಡಲೇ ಡಿಲೀಟ್​ ಮಾಡಬೇಕು ಅಂತ ದೆಹಲಿ ಹೈಕೋರ್ಟ್​ ಆದೇಶ ನೀಡಿದೆ ಎಂದು ‘ಬಾರ್​ ಆ್ಯಂಡ್​ ಬೆಂಚ್​’ ವರದಿ ಮಾಡಿದೆ.

ಇದನ್ನೂ ಓದಿ: Jawan: ಶಾರುಖ್​ ಖಾನ್​ ವಿಷಯದಲ್ಲಿ ಮನಸ್ಸು ಬದಲಾಯಿಸಿದ ಅಲ್ಲು ಅರ್ಜುನ್​? ‘ಜವಾನ್​’ ಬಗ್ಗೆ ಹಬ್ಬಿದೆ ಗಾಸಿಪ್​

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಸಿನಿಮಾದ ಪ್ರತಿ ಕಾಂಟೆಂಟ್​ ಕೂಡ ಪ್ರಚಾರಕ್ಕೆ ಸಹಕಾರಿ ಆಗುತ್ತದೆ. ಸೂಕ್ತ ಸಂದರ್ಭದಲ್ಲಿ ಕಲಾವಿದರ ಫಸ್ಟ್​ ಲುಕ್​, ಥೀಮ್​ ಮ್ಯೂಸಿಕ್​, ಡ್ಯಾನ್ಸ್​ ತುಣುಕು ಮುಂತಾದ ಕಾಂಟೆಂಟ್​ ಬಿಡುಗಡೆ ಮಾಡುವ ಮೂಲಕ ಪ್ರಚಾರ ಮಾಡಬೇಕು ಎಂದು ಚಿತ್ರತಂಡದವರು ಪ್ಲ್ಯಾನ್​ ರೂಪಿಸಿರುತ್ತಾರೆ. ಅದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಲಾಗುತ್ತದೆ. ಹೀಗಿರುವಾಗ ಕಿಡಿಗೇಡಿಗಳು ದೃಶ್ಯ ಲೀಕ್​ ಮಾಡಿದರೆ ಚಿತ್ರತಂಡಕ್ಕೆ ನಷ್ಟ ಆಗುತ್ತದೆ. ಹಾಗಾಗಿ ‘ಜವಾನ್​’ ತಂಡದವರು ಕೋರ್ಟ್​ ಮೆಟ್ಟಿಲು ಏರಿದ್ದರು.

ಇದನ್ನೂ ಓದಿ: Jawan: ಶಾರುಖ್​ ಖಾನ್​-ಸಂಜಯ್​ ದತ್​ ಮುಖಾಮುಖಿ; ‘ಜವಾನ್​’ ಚಿತ್ರದಲ್ಲಿ ಭರ್ಜರಿ ಫೈಟ್​

‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ ಮುಂತಾದವರು ನಟಿಸಿದ್ದಾರೆ. ಜೂನ್​ 2ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅಟ್ಲಿ ಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿರುವುದರಿಂದ ಹೆಚ್ಚು ಹೈಪ್​ ಸೃಷ್ಟಿ ಆಗಿದೆ. ‘ಪಠಾಣ್​’ ಚಿತ್ರದಿಂದ ಭರ್ಜರಿಯಾಗಿ ಗೆದ್ದಿರುವ ಶಾರುಖ್​ ಖಾನ್​ ಅವರು ಮತ್ತೊಂದು ಗೆಲುವಿಗಾಗಿ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:32 am, Wed, 26 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ