AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಡಿಯೋಲ್ ನಟನೆಯ ‘ಸೂರ್ಯ’ ಸಿನಿಮಾ ಬಿಡುಗಡೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ

ಸೆನ್ಸಾರ್ ಮಂಡಳಿ ಪರ ವಕೀಲರು ವಾದ ಮಂಡಿಸಿ, ‘ಇಲ್ಲಿಯವರೆಗೆ ಈ ಚಿತ್ರಕ್ಕೆ ಯಾವುದೇ ಸೆನ್ಸಾರ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ. ಅದು ಪರಿಶೀಲನಾ ಹಂತದಲ್ಲಿದೆ. ಅಲ್ಲದೆ, ಈ ಹಿಂದಿ ಚಿತ್ರವು ಸಂಪೂರ್ಣವಾಗಿ ಹೊಸ ಕಥೆಯಲ್ಲ. ಈಗಾಗಲೇ ಸಾರ್ವಜನಿಕವಾಗಿ ಲಭ್ಯವಿರುವ ದಕ್ಷಿಣ ಭಾರತದ ಸಿನಿಮಾವೊಂದರ ರಿಮೇಕ್ ಆಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸನ್ನಿ ಡಿಯೋಲ್ ನಟನೆಯ ‘ಸೂರ್ಯ’ ಸಿನಿಮಾ ಬಿಡುಗಡೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ
Sunny Deol
ಮದನ್​ ಕುಮಾರ್​
|

Updated on: Nov 05, 2026 | 6:45 PM

Share

ನವದೆಹಲಿ: ಬಾಲಿವುಡ್ ನಟ ಸನ್ನಿ ಡಿಯೋಲ್ ಅಭಿನಯದ ‘ಸೂರ್ಯ: ಅಂತ್ ಸೆ ಆರಂಭ್ ತಕ್’ ಹಿಂದಿ ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಬುಧವಾರ (ಅಕ್ಟೋಬರ್ 4) ನಿರಾಕರಿಸಿದೆ. ಈ ಚಿತ್ರವು ನವೆಂಬರ್ 20ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ತಾತ್ಕಾಲಿಕ ಮುಖ್ಯ ನ್ಯಾಯಮೂರ್ತಿ ನಿತಿನ್ ವಾಸುದೇವ್ ಸಾಂಬ್ರೆ ಮತ್ತು ನ್ಯಾಯಮೂರ್ತಿ ಸಂಜಯ್ ಶರ್ಮಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆಗೆ ನಿರಾಕರಿಸಿದೆ. ವೈದ್ಯರ ಸಂಘಟನೆಯೊಂದು ಈಗಾಗಲೇ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಏಕಸದಸ್ಯ ಪೀಠದ ಮುಂದೆ ಮತ್ತೊಂದು ರಿಟ್ ಅರ್ಜಿಯನ್ನು ಸಲ್ಲಿಸಿದ್ದು, ಅದು ವಿಚಾರಣೆ ಹಂತದಲ್ಲಿದೆ. ಹೀಗಾಗಿ ಒಂದೇ ವಿಷಯಕ್ಕೆ ಹಲವು ಅರ್ಜಿಗಳ ಅಗತ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಡಾ. ನಚಿಕೇತ್ ಭಾಟಿಯಾ ಮತ್ತು ಡಾ. ಧ್ರುವ್ ಚೌಹಾಣ್ ಎಂಬ ವೈದ್ಯರು ಈ ಪಿಐಎಲ್ ಸಲ್ಲಿಸಿದ್ದರು. ಸಿನಿಮಾದ ಅಧಿಕೃತ ಟ್ರೇಲರ್‌ನಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರನ್ನು ಭ್ರಷ್ಟರೆಂದು ಬಿಂಬಿಸಲಾಗಿದೆ ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲಿನ ಭೌತಿಕ ದೌರ್ಜನ್ಯ ಮತ್ತು ಹಿಂಸೆಯನ್ನು ನಾಯಕತ್ವದ ಸಂಕೇತದಂತೆ ವೈಭವೀಕರಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಲು ಸಿನಿಮಾದ ಟೀಸರ್‌ನಲ್ಲಿ ಬಳಸಿರುವ ಭಾಷೆಯು ಪ್ರಚೋದನೆ ನೀಡುವಂತಿದೆ. ಇದು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರಬಹುದು. ಆದ್ದರಿಂದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಸೆನ್ಸಾರ್ ಮಂಡಳಿಯು ಚಿತ್ರದಲ್ಲಿರುವ ಆಕ್ಷೇಪಾರ್ಹ ದೃಶ್ಯಗಳು ಮತ್ತು ಸಂಭಾಷಣೆಗಳನ್ನು ತೆಗೆದುಹಾಕಬೇಕು ಅಥವಾ ಮಾರ್ಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಇದನ್ನೂ ಓದಿ: ಸನ್ನಿ ಡಿಯೋಲ್ ‘ಸೂರ್ಯ’ ಚಿತ್ರದಲ್ಲಿ ವೈದ್ಯರ ನಿಂದನೆ; ವೈದ್ಯಕೀಯ ಸಂಘ ಅಸಮಾಧಾನ

ಇದೇ ವಿಚಾರವಾಗಿ ನವೆಂಬರ್ 2ರಂದು ಏಕಸದಸ್ಯ ಪೀಠವು ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 16ರಂದು ವಿಚಾರಣೆ ನಿಗದಿಪಡಿಸಿದೆ. ಹೀಗಾಗಿ ‘ಪ್ರಸ್ತುತ ಅರ್ಜಿದಾರರೂ ವೈದ್ಯರಾಗಿದ್ದರೂ, ಒಂದೇ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಗಳನ್ನು ವಿಭಜಿಸುವ ಅಗತ್ಯ ನಮಗ ಕಾಣಿಸುತ್ತಿಲ್ಲ. ಅರ್ಜಿದಾರರು ಬೇಕಿದ್ದಲ್ಲಿ ಏಕಸದಸ್ಯ ಪೀಠದ ಮುಂದಿರುವ ವಿಚಾರಣೆಯಲ್ಲಿ ಭಾಗವಹಿಸಬಹುದು ಅಥವಾ ಅಧಿಕಾರಿಗಳಿಗೆ ತಮ್ಮ ಮನವಿಯನ್ನು ಸಲ್ಲಿಸಬಹುದು’ ಎಂದು ವಿಭಾಗೀಯ ಪೀಠ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ