AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದ ಪರೀಕ್ಷೆಯಲ್ಲಿ ಗೆದ್ದ ‘ಧಮಾಲ್ 4’; ನಾಲ್ಕು ದಿನಕ್ಕೆ 100 ಕೋಟಿ ಕಲೆಕ್ಷನ್

ಬಾಲಿವುಡ್‌ನ ಬಹುನಿರೀಕ್ಷಿತ ಕಾಮಿಡಿ ಸಿನಿಮಾ 'ಧಮಾಲ್ 4' ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂಪಾಯಿ ಗಳಿಕೆಯ ಮಹತ್ವದ ಮೈಲಿಗಲ್ಲು ತಲುಪಿದೆ. ಅತ್ಯಂತ ನಿರ್ಣಾಯಕವಾಗಿದ್ದ ಸೋಮವಾರದ ಪರೀಕ್ಷೆಯಲ್ಲೂ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಮುನ್ನುಗ್ಗುತ್ತಿದೆ.

ಸೋಮವಾರದ ಪರೀಕ್ಷೆಯಲ್ಲಿ ಗೆದ್ದ 'ಧಮಾಲ್ 4'; ನಾಲ್ಕು ದಿನಕ್ಕೆ 100 ಕೋಟಿ ಕಲೆಕ್ಷನ್
ಧಮಾಲ್ 4
ರಾಜೇಶ್ ದುಗ್ಗುಮನೆ
|

Updated on: Jul 14, 2026 | 7:30 AM

Share

ಮುಖ್ಯಾಂಶಗಳು

  • ಸೋಮವಾರದ ಪರೀಕ್ಷೆಯಲ್ಲೂ ಗೆದ್ದ ಧಮಾಲ್ 4
  • ಬಾಕ್ಸ್ ಆಫೀಸ್‌ನಲ್ಲಿ ಧಮಾಲ್ 4 ಅಬ್ಬರ
  • ನಾಲ್ಕೇ ದಿನಕ್ಕೆ ವಿಶ್ವದಾದ್ಯಂತ 100 ಕೋಟಿ ಕ್ಲಬ್

ಸಾಮಾನ್ಯವಾಗಿ ವಾರಾಂತ್ಯದ ಭರ್ಜರಿ ಗಳಿಕೆಯ ನಂತರ ದೊಡ್ಡ ಸಿನಿಮಾಗಳಿಗೆ ಸೋಮವಾರದ ದಿನ ಅತ್ಯಂತ ನಿರ್ಣಾಯಕವಾಗಿರುತ್ತದೆ. ಬಾಲಿವುಡ್‌ನ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಚಿತ್ರ ‘ಧಮಾಲ್ 4’ ಸೋಮವಾರವೂ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ವಾರದ ದಿನಗಳಲ್ಲೂ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ಜಾಗತಿಕವಾಗಿ 100 ಕೋಟಿ ರೂಪಾಯಿ ಗಳಿಕೆಯ ಗಡಿಯನ್ನು ದಾಟಿ ಹೊಸ ದಾಖಲೆ ಬರೆದಿದೆ.

ಸೋಮವಾರದ ಗಳಿಕೆ ಎಷ್ಟು?

ನಾಲ್ಕನೇ ದಿನವಾದ ಸೋಮವಾರ ಭಾರತದಾದ್ಯಂತ ಒಟ್ಟು 10,598 ಶೋಗಳಿಂದ ಈ ಚಿತ್ರ ಬರೋಬ್ಬರಿ 8.35 ಕೋಟಿ ನೆಟ್ ಕಲೆಕ್ಷನ್ ಮಾಡಿದೆ. ವೀಕ್‌ಡೇಸ್‌ನಲ್ಲಿ ಈ ಮಟ್ಟದ ಕಲೆಕ್ಷನ್ ಮಾಡಿರುವುದು ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸುದೀರ್ಘ ಕಾಲ ಓಡುವ ಮುನ್ಸೂಚನೆಯನ್ನು ನೀಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

4 ದಿನಗಳ ಒಟ್ಟು ಕಲೆಕ್ಷನ್ ವಿವರ

ಭಾರತದಲ್ಲಿ ಈ ಚಿತ್ರ 73.35 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಹಾಗೂ 87.85 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ವಿದೇಶಿ ಮಾರುಕಟ್ಟೆಯ ಗಳಿಕೆ 14.50 ಕೋಟಿ ರೂಪಾಯಿ ಆಗಿದ್ದು, ವಿಶ್ವದಾದ್ಯಂತ ಒಟ್ಟು ಗಳಿಕೆ 102.35 ಕೋಟಿ ರೂಪಾಯಿ ಗಳಿಸಿದೆ.

ಧಮಾಲ್ ಸಿನಿಮಾದಲ್ಲಿ ಫೇಮಸ್ ಎಂದರೆ ಮೈಂಡ್​​ಲೆಸ್ ಕಾಮಿಡಿ. ಅದು ಈ ಚಿತ್ರದಲ್ಲೂ ಮುಂದುವರಿದಿದೆ. ನಿಧಿ ಹುಡುಕುವ ಥೀಮ್​​ನೊಂದಿಗೆ ಸಿನಿಮಾ ಸಾಗಿದೆ. ಈ ರೀತಿಯ ಮೈಂಡ್​​ಲೆಸ್ ಕಾಮಿಡಿಯನ್ನು ಕೆಲವರು ಇಷ್ಟಪಟ್ಟಿಲ್ಲ. ಹೀಗಾಗಿ, ಚಿತ್ರವನ್ನು ಟೀಕಿಸುವ ಕೆಲಸ ಮಾಡಿದ್ದಾರೆ. ಇನ್ನೂ ಕೆಲವರು ಚಿತ್ರವನ್ನು ಬಹುವಾಗಿ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ‘ಧಮಾಲ್ 4’ ಟ್ರೇಲರ್ : ಅಜಯ್ ದೇವಗನ್ ಗ್ಯಾಂಗ್‌ನಿಂದ ಮತ್ತೆ ಕಾಮಿಡಿ ಹಂಗಾಮಾ

ಅಜಯ್ ದೇವಗನ್, ರಿತೇಶ್​ ದೇಶ್​​ಮುಖ್​, ಅರ್ಷದ್ ವಾರ್ಸಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ರವಿ ಕಿಶನ್ ಪಾತ್ರಕ್ಕೆ ಸಾಕಷ್ಟು ಮೆಚ್ಚುಗೆ ಸಿಕ್ಕಿದೆ. ಅಂಜಲಿ ಆನಂದ್ ಸೇರಿದಂತೆ ಮೊದಲಾದವರು ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ