ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಧರ್ಮೇಂದ್ರ; ಮನೆಯಲ್ಲಿ ಮುಂದುವರಿಯಲಿದೆ ಚಿಕಿತ್ಸೆ
Dharmendra Health: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ನಿಧನದ ವದಂತಿಗಳು ಹರಡಿದ್ದವು. ಆದರೆ, ಕುಟುಂಬವು ಸ್ಪಷ್ಟಪಡಿಸಿ, ಈಗ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಮನೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ ಎಂದು ಕುಟುಂಬ ತಿಳಿಸಿದೆ.

ಕೆಲ ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (Dharmendra Health) ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಅವರನ್ನು ವೆಂಟಿಲೇಟರ್ನಲ್ಲಿಯೇ ಇಡಲಾಗಿತ್ತು. ಅವರು ನಿಧನ ಹೊಂದಿದ್ದಾರೆ ಎಂಬ ವದಂತಿಯೂ ಹಬ್ಬಿತ್ತು. ಆದರೆ, ಕುಟುಂಬದವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಈಗ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಮನೆಗೆ ಕರೆದುಕೊಂಡು ಹೊಗಲಾಗಿದೆ. ಮನೆಯಲ್ಲಿ ಚಿಕಿತ್ಸೆ ಮುಂದುವರಿಯಲಿದೆಯಂತೆ.
ಧರ್ಮೇಂದ್ರ ಆರೋಗ್ಯ ತೀವ್ರ ತರದಲ್ಲಿ ಹದಗೆಟ್ಟಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, ಧರ್ಮೇಂದ್ರ ಅವರ ಕುಟುಂಬದವರಾದ ಇಶಾ, ಬಾಬಿ, ಸನ್ನಿ, ಹೇಮಾ ಮಾಲಿನಿ ಭೇಟಿ ನೀಡಿದರು. ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಆತಂಕ ಮೂಡಿಸಿತ್ತು. ಆದರೆ, ಹೇಮಾ ಮಾಲಿನಿ ಈ ವಿಚಾರವನ್ನು ತಳ್ಳಿ ಹಾಕಿದ್ದರು. ಈಗ ಕುಟುಂಬದ ಕಡೆಯಿಂದ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ.
ಸದ್ಯ ಧರ್ಮೇಂದ್ರ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗಿದೆ. ಮನೆಯಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ. ‘ಧರ್ಮೇಂದ್ರ ಅವರು ಇಂದು (ನವೆಂಬರ್ 12) ಬೆಳಿಗ್ಗೆ 7.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಮನೆಯಲ್ಲೇ ಟ್ರೀಟ್ಮೆಂಟ್ ನೀಡಲು ಕುಟುಂಬ ನಿರ್ಧರಿಸಿದೆ ಎಂದು ಡಾಕ್ಟರ್ ಪ್ರತೀತ್ ಮಾಹಿತಿ ನೀಡಿದ್ದಾರೆ.
‘ಧರ್ಮೇಂದ್ರ ಅವರು ಚೇತರಿಕೆ ಕಾಣಲಿ ಹಾಗೂ ಆರೋಗ್ಯ ವೃದ್ಧಿಸಲಿ ಎಂದು ಪ್ರಾರ್ಥಿಸಿದ ಎಲ್ಲರಿಗೂ ನಾವು ಕೃತಜ್ಞರಾಗಿರುತ್ತೇವೆ. ಕುಟುಂಬದ ಖಾಸಗಿತನವನ್ನು ಗೌರವಿಸಿ’ ಎಂದು ವೈದ್ಯರು ಕೋರಿದ್ದಾರೆ.
ಇದನ್ನೂ ಓದಿ: ಧರ್ಮೇಂದ್ರ ಹಾಗೂ ಹೇಮಾ ಮಾಲಿನ ನಡುವಿನ ವಯಸ್ಸಿನ ಅಂತರ ಇಷ್ಟೊಂದಾ?
ಧರ್ಮೇಂದ್ರ ಸಾವಿನ ಬಗ್ಗೆ ವದಂತಿ ಹಬ್ಬಿತ್ತು. ಅನೇಕ ರಾಜಕಾರಣಿಗಳು ಈ ಬಗ್ಗೆ ಪೋಸ್ಟ್ ಕೂಡ ಮಾಡಿದ್ದರು. ಆ ಬಳಿಕ ಹೇಮಾ ಮಾಲಿನಿ ಈ ಬಗ್ಗೆ ಸ್ಪಷ್ಟನೆ ನೀಡಿದರು. ಪತಿ ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




