ಆರು ದಿನಕ್ಕೆ 900 ಕೋಟಿ ಗಳಿಸಿದ ‘ಧುರಂಧರ್ 2’; ಆದರೂ, ಒಂದು ವಿಷಯದಲ್ಲಿ ಚಿತ್ರಕ್ಕೆ ಸೋಲು

'ಧುರಂಧರ್ 2' ಕೇವಲ ಆರು ದಿನಗಳಲ್ಲಿ ಜಾಗತಿಕವಾಗಿ 900 ಕೋಟಿ ರೂಪಾಯಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಈ ಭರ್ಜರಿ ಯಶಸ್ಸು ಬಾಲಿವುಡ್‌ಗೆ ದೊಡ್ಡ ಚೇತರಿಕೆ ನೀಡಿದೆ. ಆದರೆ, ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಿಗೆ ಡಬ್ ಆದ ಆವೃತ್ತಿಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿವೆ. ಕನ್ನಡ ವರ್ಷನ್ ತಡವಾಗಿ ಬಿಡುಗಡೆಯಾದ ಕಾರಣ ಪ್ರೇಕ್ಷಕರನ್ನು ತಲುಪಲು ಹೆಣಗಾಡಿದೆ.

ಆರು ದಿನಕ್ಕೆ 900 ಕೋಟಿ ಗಳಿಸಿದ ‘ಧುರಂಧರ್ 2’; ಆದರೂ, ಒಂದು ವಿಷಯದಲ್ಲಿ ಚಿತ್ರಕ್ಕೆ ಸೋಲು
ಧುರಂಧರ್ 2
Image Credit source: Dhurandhar Movie

Updated on: Mar 25, 2026 | 7:07 AM

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಾಕ್ಸ್ ಆಫೀಸ್​​ನಲ್ಲಿ ಊಹೆಗೂ ಮೀರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ವಿಶ್ವಮಟ್ಟದಲ್ಲಿ ಬರೋಬ್ಬರಿ 900 ಕೋಟಿ ರೂಪಾಯಿ ಆಗಿದೆ. ಅದು ಕೂಡ ಕೇವಲ ಆರು ದಿನಗಳಲ್ಲಿ. ಈ ಸಿನಿಮಾ ಅರಬ್ ರಾಷ್ಟ್ರಗಳಲ್ಲಿ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾದ ಗಳಿಕೆಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಒಂದು ವಿಷಯದಲ್ಲಿ ‘ಧುರಂಧರ್ 2’ ಸೋತು ಹೋಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದರೆ ಅದು ಯಾವ ವಿಷಯದಲ್ಲಿ? ಆ ಬಗ್ಗೆ ಇಲ್ಲಿದೆ ವಿವರ.

‘ಧುರಂಧರ್ 2’ ಸಿನಿಮಾನ ಆದಿತ್ಯಧಾರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ರಣವೀರ್ ಸಿಂಗ್ ಹೀರೋ. ಸಾರಾ ಅರ್ಜುನ್ ಚಿತ್ರದ ನಾಯಕಿ. ‘ಧುರಂಧರ್’ ಸಿನಿಮಾ ರಿಲೀಸ್​​ಗೂ ಮೊದಲೇ ಸಾಕಷ್ಟು ನೆಗೆಟಿವ್ ಪಡೆದುಕೊಂಡಿತು. ಆದರೆ, ಸಿನಿಮಾ ಗೆಲ್ಲುವಲ್ಲಿ ಯಶಸ್ವಿ ಆಯಿತು. ಮೊದಲ ಭಾಗದ ಕಲೆಕ್ಷನ್ 1300 ಕೋಟಿ ರೂಪಾಯಿ. ಈಗ ಚಿತ್ರದ ಸೀಕ್ವೆಲ್ ಆರೇ ದಿನಕ್ಕೆ 900 ಕೋಟಿ ರೂಪಾಯಿ ತಲುಪಿದೆ. ಇನ್ನು ಕೆಲವೇ ದಿನಗಳಲ್ಲಿ ಮೊದಲ ಭಾಗದ ಕಲೆಕ್ಷನ್ ಹಿಂದಿಕ್ಕಲಿದೆ.

‘ಧುರಂಧರ್ 2’ ಸಿನಿಮಾದ ಭಾರತದ ಗ್ರಾಸ್ ಕಲೆಕ್ಷನ್ 600 ಕೋಟಿ ರೂಪಾಯಿ ದಾಟಿದೆ. ಹಿಂದಿ ಚಿತ್ರವೊಂದು ಈ ಮಟ್ಟದಲ್ಲಿ ಗಳಿಕೆ ಮಾಡುತ್ತಿರುವುದು ಇದೇ ಮೊದಲು. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಸತತ ಸೋಲುಗಳಿಂದ ಕಂಗಾಲಾಗಿದ್ದ ಬಾಲಿವುಡ್​​ಗೆ ಈ ಸಿನಿಮಾ ಮೂಲಕ ಒಂದು ದೊಡ್ಡ ಚೇತರಿಕೆ ಸಿಕ್ಕಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರಕ್ಕೆ ಸಂಕಷ್ಟ: ಆ ಒಂದು ದೃಶ್ಯದಿಂದ ಸಿಖ್ ಧರ್ಮದ ಭಾವನೆಗೆ ಧಕ್ಕೆ

ಆದರೆ, ‘ಧುರಂಧರ್ 2’ ಸಿನಿಮಾ ಒಂದು ವಿಷಯದಲ್ಲಿ ಸೋತಿದೆ. ಅದು ಯಾವ ವಿಷಯ ಅನ್ನುತ್ತೀರಾ? ಸ್ಥಳೀಯ ಭಾಷೆಗಳಲ್ಲಿ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿಲ್ಲ. ಹೌದು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗೆ ಡಬ್ ಆದ ವರ್ಷನ್​​ಗಳು ಪ್ರಭಾವ ಬೀರಲು ವಿಫಲವಾಗಿವೆ. ಕನ್ನಡ ವರ್ಷನ್ ರಿಲೀಸ್ ನಾನಾಕಾರಣದಿಂದ ಮುಂದಕ್ಕೆ ಹೋಗಿತ್ತು. ಇತ್ತೀಚೆಗಷ್ಟೇ ಸಿನಿಮಾ ರಿಲೀಸ್ ಆಗಿದೆ. ಇದು ಕೂಡ ಹೆಚ್ಚು ಜನರನ್ನು ತಲುಪದೆ ಇರಲು ಕಾರಣ ಆಗಿರಬಹುದು ಎಂದು ಊಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us