ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರೆದಿದ್ದು, ಮೊದಲ ದಿನವೇ ಅದ್ಭುತ ಯಶಸ್ಸು ಕಂಡಿದೆ. ಒಟ್ಟು 250 ಕೋಟಿ ಸನಿಹ ತಲುಪಿದ ಗಳಿಕೆ ಚಿತ್ರದ ಅಬ್ಬರಕ್ಕೆ ಸಾಕ್ಷಿ. ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗುವತ್ತ ಹೆಜ್ಜೆ ಹಾಕಿದೆ. ಇದರ ಒಟ್ಟಾರೆ ಕಲೆಕ್ಷನ್ 2000 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ.

ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ
ಧುರಂಧರ್ 2

Updated on: Mar 20, 2026 | 7:01 AM

‘ಧುರಂಧರ್ 2’ ಸಿನಿಮಾ (Dhurandhar 2 Movie) ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ. ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ.

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದುದ್ದಕ್ಕೂ ಅವರೇ ಹೈಲೈಟ್ ಆಗುತ್ತಾರೆ. ಸಂಜಯ್ ದತ್ ಅರ್ಜುನ್ ರಾಮ್​​ಪಾಲ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕ ವಿವರ ಸಿಕ್ಕಿದೆ.

‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಹಾಗೂ ಮೊದಲ ದಿನದ ಕಲೆಕ್ಷನ್ ಸೇರಿದರೆ 236 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರಲ್ಲಿ ಭಾರತದಿಂದ 172 ಕೋಟಿ ರೂಪಾಯಿ ಹಾಗೂ ವಿದೇಶದಿಂದ 64 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಭಾರತದ ನೆಟ್ ಕಲೆಕ್ಷನ್ 140 ಕೋಟಿ ರೂಪಾಯಿ ಇದೆ ಎಂದು sacnilk ವರದಿ ಮಾಡಿದೆ.

ಈ ಸಿನಿಮಾ ಮಾರ್ಚ್ 19ರಂದು ಸಿನಿಮಾ ಹಿಂದಿಯಲ್ಲಿ 103 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಅತಿ ದೊಡ್ಡ ಓಪನಿಂಗ್ ಪಡೆದ ಹಿಂದಿ ಚಿತ್ರ ಎಂಬ ಹೆಗ್ಗಳಿಕೆ ಈ ಸಿನಿಮಾಗೆ ಬಂದಿದೆ. ‘ಧುರಂಧರ್ 2’ ಪ್ರೀಮಿಯರ್ ಶೋನಿಂದ 40 ಕೋಟಿ ರೂಪಾಯಿ ಗಳಿಸುತ್ತು. ಈ ಸಿನಿಮಾ ಅನಾಯಾಸವಾಗಿ 2000 ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಲಲಕ್ಷಣ ಗೋಚರವಾಗಿದೆ. ಈ ಸಿನಿಮಾಗೆ ಬರೋಬ್ಬರಿ 34 ಸಾವಿರ ಶೋಗಳು ಸಿಕ್ಕಿದ್ದವು ಎಂಬುದು ವಿಶೇಷ.

ಇದನ್ನೂ ಓದಿ: ಅಬ್ಬಬ್ಬಾ, ಪೇಯ್ಡ್​ ಪ್ರೀಮೀಯರ್​ನಿಂದ ‘ಧುರಂಧರ್ 2’ ಸಿನಿಮಾ ಗಳಿಸಿದ್ದು ಇಷ್ಟೊಂದಾ?

‘ಧುರಂಧರ್’ ಸಿನಿಮಾ ಹಲವು ದಾಖಲೆಗಳನ್ನು ಮಾಡಿತ್ತು. ಇದು ಸೀಕ್ವಲ್​​ಗೆ ಸಹಕಾರಿ ಆಗುತ್ತಿದೆ. ಈ ಕಾರಣದಿಂದಲೇ ಚಿತ್ರದ ಕಲೆಕ್ಷನ್ ಜೋರಾಗಿದೆ. ಈ ಚಿತ್ರದ ಮೂಲಕ ನಿರ್ಮಾಪಕರು ದೊಡ್ಡ ಮಟ್ಟದಲ್ಲಿ ಲಾಭ ಮಾಡುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us