AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್

‘ಧುರಂಧರ್ 2’ ಸಿನಿಮಾ ಭಾರತದಲ್ಲಿ 11 ದಿನಗಳಲ್ಲಿ ₹1011 ಕೋಟಿ ಗಳಿಸಿ, ವಿಶ್ವದಾದ್ಯಂತ ₹1361 ಕೋಟಿ ತಲುಪಿ ಅಬ್ಬರಿಸಿದೆ. ಎರಡನೇ ಭಾನುವಾರ 68 ಕೋಟಿ ರೂಪಾಯಿ ಕಲೆಕ್ಷನ್ ಮೂಲಕ ‘KGF 2’ ಲೈಫ್ ಟೈಮ್ ದಾಖಲೆಯನ್ನು ಮುರಿದಿದೆ. ರಣವೀರ್ ಸಿಂಗ್ ನಟನೆ ಮತ್ತು ಆದಿತ್ಯ ಧಾರ್ ನಿರ್ದೇಶನದಿಂದ ಸೃಷ್ಟಿಯಾದ ಈ ಇತಿಹಾಸ, ಭಾರತದಲ್ಲಿ 1500 ಕೋಟಿ ತಲುಪುವ ಸಾಧ್ಯತೆ ಇದೆ.

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on: Mar 30, 2026 | 6:59 AM

Share

‘ಧುರಂಧರ್ 2’ ಸಿನಿಮಾ (Dhurandhar 2) ಎರಡನೇ ಭಾನುವಾರವೂ ತನ್ನ ಅಬ್ಬರವನ್ನು ಮುಂದುವರಿಸಿದೆ. ಈ ಚಿತ್ರ ಮೊದಲ ವಾರದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅದನ್ನು ಎರಡನೇ ವಾರವೂ ಮುಂದುವರಿಸಿದೆ. ಎರಡನೇ ಭಾನುವಾರ ಸಿನಿಮಾ 68 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಡಿಸೆಂಬರ್ 5ರಂದು ಬಂದ ‘ಧುರಂಧರ್’ ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ನಿರ್ದೇಶಕ ಆದಿತ್ಯ ಧಾರ್ ಅವರು ಹುಸಿ ಮಾಡಿಲ್ಲ. ಅವರು ಸಿನಿಮಾನ ಜನರು ಗೆಲ್ಲಿಸಿದ್ದಾರೆ. ರಣವೀರ್ ಸಿಂಗ್ ಅವರ ಅದ್ಭುತ ನಟನೆ ಕೂಡ ಗಮನ ಸೆಳೆದಿದೆ. ಇದು ಸಿನಿಮಾ ಗೆಲುವಿಗೆ ಸಹಕಾರಿ ಆಗಿದೆ.

‘ಧುರಂಧರ್ 2’ ಸಿನಿಮಾ 11ನೇ ದಿನಕ್ಕೆ ಭಾರತದಲ್ಲಿ 1,011 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ಚಿತ್ರದ ನೆಟ್ ಕಲೆಕ್ಷನ್ 846 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾದ ವಿಶ್ವ ಮಟ್ಟದ ಗ್ರಾಸ್ ಕಲೆಕ್ಷನ್ 1,361 ಕೋಟಿ ರೂಪಾಯಿ ಆಗಿದೆ. ‘ಧುರಂಧರ್ 2’ ಸಿನಿಮಾ ಈಗಾಗಲೇ ‘ಕೆಜಿಎಫ್ 2’ ದಾಖಲೆಯನ್ನು ಮುರಿದಿದೆ. ‘ಕೆಜಿಎಫ್ 2’ ಚಿತ್ರದ ಲೈಫ್​ ಟೈಮ್ ಕಲೆಕ್ಷನ್ 1,250 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ. ಅದನ್ನು ಕೇವಲ 11 ದಿನಕ್ಕೆ ‘ಧುರಂಧರ್ 2’ ಸಿನಿಮಾ ಮುರಿದು ಹಾಕಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿದೆ. ಈ ಚಿತ್ರ ಭಾರತದಲ್ಲೇ 1500 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ. ಹಾಗಾದಲ್ಲಿ ಹೊಸ ಇತಿಹಾಸ ಸೃಷ್ಟಿ ಆಗಲಿದೆ.

ಇದನ್ನೂ ಓದಿ: ‘ಧುರಂಧರ್ 2’ ಎದುರು ತೆರೆಕಂಡರೂ ಸೂಪರ್ ಹಿಟ್ ಆದ ‘ಲವ್ ಮಾಕ್ಟೇಲ್ 3’

‘ಧುರಂಧರ್ 2’ ಚಿತ್ರವನ್ನು ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಸಿಂಗ್ ಹೀರೋ. ಸಾರಾ ಅರ್ಜುನ್ ನಾಯಕಿ. ಇನ್ನೂ ಹಲವು ಸೆಲೆಬ್ರಿಟಿಗಳು ಚಿತ್ರದ ಭಾಗ ಆಗಿದ್ದಾರೆ. ಈ ಚಿತ್ರವನ್ನು ಕೆಲವರು ಪ್ರೊಪೊಗಾಂಡ ಸಿನಿಮಾ ಎಂದು ಟೀಕೆ ಮಾಡಿದ್ದೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ