AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರವೂ ಅಬ್ಬರಿಸಿದ ‘ಧುರಂಧರ್ 2’ ಸಿನಿಮಾ; ಕನ್ನಡದಲ್ಲಿ ಗಳಿಕೆ ಎಷ್ಟು?

‘ಧುರಂಧರ್ 2’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಈಗಾಗಲೇ ಭಾರತದಲ್ಲಿ 226 ಕೋಟಿ ರೂ. ಮಾಡಿದೆ. ವಾರಾಂತ್ಯದಲ್ಲಿ ಇನ್ನಷ್ಟು ಗಳಿಕೆ ನಿರೀಕ್ಷೆಯಿದ್ದು, ಒಟ್ಟಾರೆ 2000 ಕೋಟಿ ರೂ. ತಲುಪುವ ಗುರಿ ಹೊಂದಿದೆ. ಕನ್ನಡದಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಪ್ರೇಕ್ಷಕರ ಮನ ಗೆದ್ದಿದೆ.

ಶುಕ್ರವಾರವೂ ಅಬ್ಬರಿಸಿದ ‘ಧುರಂಧರ್ 2’ ಸಿನಿಮಾ; ಕನ್ನಡದಲ್ಲಿ ಗಳಿಕೆ ಎಷ್ಟು?
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Mar 21, 2026 | 6:59 AM

Share

‘ಧುರಂಧರ್ 2’ ಸಿನಿಮಾ (Dhurandhar 2) ದಿನವೂ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಈ ಸಿನಿಮಾ ನಿರೀಕ್ಷೆಯನ್ನು ಹುಸಿ ಮಾಡಿಲ್ಲ. ಸಿನಿಮಾ ಅಬ್ಬರಿಸುತ್ತಿದೆ. ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಒಟ್ಟಾರೆ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ಇನ್ನೂ ಎರಡು ತಿಂಗಳ ಕಾಲ ಸಿನಿಮಾ ಪ್ರಸಾರ ಕಾಣುವ ನಿರೀಕ್ಷೆ ಇದೆ. ವಿಕೇಂಡ್​​ ಶೋಗಳು ಹೌಸ್​​ಫುಲ್ ಆಗಿವೆ.

ಮಾರ್ಚ್ 19ರಂದು ‘ಧುರಂಧರ್ 2’ ರಿಲೀಸ್ ಆಯಿತು. 18ರಂದು ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಇದರಿಂದ ಸಿನಿಮಾಗೆ 43 ಕೋಟಿ ರೂಪಾಯಿ ಹರಿದು ಬಂದಿದೆ. ಗುರುವಾರ ಸಿನಿಮಾ ಭಾರತದಲ್ಲಿ 102 ಕೋಟಿ ರೂಪಾಯಿ ಗಳಿಸಿದೆ. ಶುಕ್ರವಾರ ಸಿನಿಮಾ 80 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೊದಲ ದಿನ ಈ ಚಿತ್ರಕ್ಕೆ 21,663 ಶೋಗಳನ್ನು ನೀಡಲಾಗಿತ್ತು. ಎರಡನೇ ದಿನ 20,125 ಶೋಗಳನ್ನು ಭಾರತದಾದ್ಯಂತ ನೀಡಲಾಗಿದೆ. ಸದ್ಯ ಭಾರತಾದ್ಯಂತದ ಕಲೆಕ್ಷನ್ 226 ಕೋಟಿ ರೂಪಾಯಿ ಆಗಿದೆ. ಗ್ರಾಸ್ ಕಲೆಕ್ಷನ್ 269 ಕೋಟಿ ರೂಪಾಯಿ ಆಗಿದೆ.

‘ಧುರಂಧರ್’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿರಲಿಲ್ಲ. ಆದರೆ, ‘ಧುರಂಧರ್ 2’ ಚಿತ್ರವನ್ನು ಕನ್ನಡದಲ್ಲೂ ಬಿಡುಗಡೆ ಮಾಡಲಾಯಿತು. ಚಿತ್ರಕ್ಕೆ ಗುರುವಾರ ಕನ್ನಡದಲ್ಲಿ 20 ಶೋ ನೀಡಲಾಗಿದ್ದು, 3 ಲಕ್ಷ ರೂಪಾಯಿ ಗಳಿಕೆ ಆಗಿದೆ. ಹಿಂದಿ ಭಾಷೆಯಲ್ಲೇ ಸಿನಿಮಾ ಅಬ್ಬರಿಸುತ್ತಿದೆ.

ಇದನ್ನೂ ಓದಿ: ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಚಿತ್ರಕ್ಕೆ ಇಂದು ಹಾಗೂ ನಾಳೆ ಪ್ರಮುಖವಾಗಲಿದೆ. ಶನಿವಾರ ಹಾಗೂ ಭಾನುವಾರ ಸಿನಿಮಾ ಒಳ್ಳೆಯ ಗಳಿಕೆ ಮಾಡುವ ನಿರೀಕ್ಷೆ ಇದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ ತಲುಪೋ ನಿರೀಕ್ಷೆ ಇದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರಕ್ಕೆ, ಆದಿತ್ಯ ಧಾರ್ ನಿರ್ದೇಶನ ಇದೆ. ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ