AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’

ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2' ಸಿನಿಮಾ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ 450 ಕೋಟಿ ರೂಪಾಯಿ ಗಳಿಸಿ, ಹಲವು ದಾಖಲೆಗಳನ್ನು ಮುರಿದಿದೆ. ವಿಶ್ವದಾದ್ಯಂತ ಇದರ ಸಂಗ್ರಹ 700 ಕೋಟಿ ರೂಪಾಯಿ ಸಮೀಪಿಸಿದೆ. 92 ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ಈ ಚಿತ್ರ, ಸದ್ಯ 2000 ಕೋಟಿ ರೂಪಾಯಿ ಗಳಿಕೆಯತ್ತ ಮುನ್ನುಗ್ಗುತ್ತಿದ್ದು, ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on:Mar 23, 2026 | 7:08 AM

Share

ರಣವೀರ್ ಸಿಂಗ್ ನಟನೆಯ ‘ಧುರಂದರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಆಗಿದೆ. ಹೀಗೆ ಮುಂದುವರಿದರೆ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಗಳಿಕೆ 700 ಕೋಟಿ ರೂಪಾಯಿ ಸಮೀಪಿಸಿದೆ.

‘ಧುರಂಧರ್ 2’ ಚಿತ್ರ ಮಾರ್ಚ್ 19ರಂದು ರಿಲೀಸ್ ಆಯಿತು. ಈ ಸಿನಿಮಾ ಎದುರು ‘ಟಾಕ್ಸಿಕ್’ ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ತನ್ನ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿತು. ಇದು ‘ಧುರಂಧರ್ 2’ ಮತ್ತಷ್ಟು ಅಬ್ಬರಿಸಲು ಸಹಕಾರಿ ಆಗಿದೆ. ಈ ಚಿತ್ರದ ಪ್ರೀಮಿಯರ್ ಶೋಗೆ 11 ಸಾವಿರ ಶೋ ಸಿಕ್ಕಿತ್ತು. ಆ ಬಳಿಕ ಪ್ರತಿ ದಿನ ಸರಾಸರಿ 20 ಸಾವಿರ ಶೋಗಳು ಸಿಗುತ್ತಿವೆ. ಪ್ರೀಮಿಯರ್ ಶೋ ದಿನವನ್ನು ಲೆಕ್ಕಕ್ಕೆ ಹಿಡಿದರೆ ಚಿತ್ರ 92 ಸಾವಿರ ಶೋಗಳನ್ನು ಪ್ರಸಾರ ಮಾಡಿದೆ.

ಪ್ರೀಮಿಯರ್ ಶೋನಿಂದ ಚಿತ್ರಕ್ಕೆ 43 ಕೋಟಿ ರೂಪಾಯಿ, ಗುರುವಾರ 102 ಕೋಟಿ ರೂಪಾಯಿ, ಶುಕ್ರವಾರ 80 ಕೋಟಿ ರೂಪಾಯಿ, ಶನಿವಾರ 113 ಕೋಟಿ ರೂಪಾಯಿ ಹಾಗೂ ಭಾನುವಾರ 114 ಕೋಟಿ ರೂಪಾಯಿ ಚಿತ್ರ ಗಳಿಕೆ ಮಾಡಿದೆ. ಇದು ಚಿತ್ರತಂಡದ ಹೆಚ್ಚುಗಾರಿಕೆ.

ಇದನ್ನೂ ಓದಿ: ‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

‘ಧುರಂಧರ್’ ಚಿತ್ರ 1300 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ‘ಧುರಂಧರ್ 2’ ಚಿತ್ರವು ವಾರದ ಗಳಿಕೆಯೇ ಸಾವಿರ ಕೋಟಿ ರೂಪಾಯಿ ತಲುಪುವು ನಿರೀಕ್ಷೆ ಇದೆ. ವಿಶ್ವ ಮಟ್ಟದಲ್ಲಿ ಸಿನಿಮಾದ ಕಲೆಕ್ಷನ್ 2000 ಕೋಟಿ ರೂಪಾಯಿ ತಲುಪುವ ನಿರೀಕ್ಷೆ ಇದೆ. ವಿಶ್ವ ಮಟ್ಟದಲ್ಲಿ ಸಿನಿಮಾ ಅಬ್ಬರಿಸುತ್ತಿದೆ. ಅನೇಕ ರಾಷ್ಟ್ರಗಳಲ್ಲಿ ಸಿನಿಮಾ ಬ್ಯಾನ್ ಆದ ಹೊರತಾಗಿಯೂ ಸಿನಿಮಾದ ಗಳಿಕೆ ಮೇಲೆ ಯಾವುದೇ ಪ್ರಭಾವ ಬೀರಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:08 am, Mon, 23 March 26

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್