ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ

Dhurandhar 2 movie: ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ.

ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ
ಧುರಂಧರ್ 2

Updated on: Mar 24, 2026 | 12:50 PM

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ.

ಪಾಕಿಸ್ತಾನದಲ್ಲಿ ಈಗಾಗಲೇ ಸಿನಿಮಾದ ಪೈರಸಿ ಆಗಿದ್ದು, ಗಲ್ಲಿ-ಗಲ್ಲಿಗಳಲ್ಲಿ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾದ ಪೈರಸಿ ಸಿಡಿಗಳು ಸಿಗುತ್ತಿವೆ. ಸಾಮಾನ್ಯ ಜನರು ಮಾತ್ರವೇ ಅಲ್ಲದೆ ಪಾಕಿಸ್ತಾನದ ರಾಜಕಾರಣಿಗಳು ಸಹ ಪೈರಸಿಯಲ್ಲಿ ‘ಧುರಂಧರ್’ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಭಾರತದಲ್ಲಿಯೂ ಸಹ ‘ಧುರಂಧರ್ 2’ ಸಿನಿಮಾಕ್ಕೆ ಪೈರಸಿ ಸಮಸ್ಯೆ ಎದುರಾಗಿದೆ. ಚಿತ್ರತಂಡ ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರೂ ಸಹ ‘ಧುರಂಧರ್ 2’ ಸಿನಿಮಾಕ್ಕೆ ಪೈರಸಿ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ:‘ಧುರಂಧರ್ 2’ ಮೂಲಕ ಪ್ರತೀಕಾರ ತೀರಿಸಿಕೊಂಡ ಅರ್ಜುನ್ ರಾಂಪಾಲ್

ಭಾರತದಲ್ಲಿ ಸಕ್ರಿಯವಾಗಿರುವ ಕ್ಯಾಸ್ಟಲ್, ಮೂವಿರೂಲ್ಜ್ ಇನ್ನೂ ಹಲವಾರು ಪೈರಸಿ ವೆಬ್​​ಸೈಟ್ ಮತ್ತು ಅಪ್ಲಿಕೇಶನ್​​ಗಳಲ್ಲಿ ‘ಧುರಂಧರ್ 2’ ಸಿನಿಮಾ ಅಕ್ರಮವಾಗಿ ಪ್ರದರ್ಶನವಾಗುತ್ತಿದೆ. ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ‘ಧುರಂಧರ್ 2’ ಸಿನಿಮಾದ ಪೈರಸಿ ಕಾಪಿಯ ವರ್ಗಾವಣೆ ಜೋರಾಗಿ ನಡೆಯುತ್ತಿದೆ. ಥಿಯೇಟರ್ ಪ್ರಿಂಟ್ ಅನ್ನೇ ಜನ ಮೊಬೈಲ್​​ಗಳಲ್ಲಿ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಇದರಿಂದಾಗಿ ಸಿನಿಮಾ ತಂಡಕ್ಕೆ ದೊಡ್ಡ ನಷ್ಟವೇ ಆಗುತ್ತಿದೆ. ಆದರೆ ಈಗಾಗಲೇ ಭಾರಿ ಲಾಭದಲ್ಲಿರುವ ಕಾರಣ ಸಿನಿಮಾ ತಂಡ ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಂತಿಲ್ಲ.

ಸಿನಿಮಾ ಬಿಡುಗಡೆಗೆ ಮುಂಚೆಯೇ ಚಿತ್ರತಂಡವು ಸುಮಾರು 12 ಸಾವಿರ ಲಿಂಕ್​​ಗಳನ್ನು ಡಿಲೀಟ್ ಮಾಡಿಸಿತ್ತು. ಅಲ್ಲದೆ ಮದ್ರಾಸ್ ಹೈಕೋರ್ಟ್ ಇಂಜೆಕ್ಷನ್ ಆರ್ಡಸ್ ಸಹ ನೀಡಿ, ಸಿನಿಮಾದ ಅಕ್ರಮ ಪ್ರದರ್ಶನಕ್ಕೆ ತಡೆ ಹಾಕಿತ್ತು. ಇದೆಲ್ಲದರ ನಡುವೆಯೂ ಸಹ ಸಿನಿಮಾದ ಪೈರಸಿ ಕಾಪಿಗಳು ಯೆಥೇಚ್ಛವಾಗಿ ಹರಿದಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us