ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’
Dhurandhar 2 movie: ಡಿಸೆಂಬರ್ 5 ರಂದು ಬಿಡುಗಡೆ ಆದ ‘ಧರುಂಧರ್’ ಸಿನಿಮಾ, ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ವೀಕ್ಷಣೆಗೆ ಲಭ್ಯವಿದೆ. ಕೇವಲ ಹಿಂದಿ ಆವೃತ್ತಿ ಒಂದರಿಂದಲೇ ಈ ಸಿನಿಮಾ ಈ ವರೆಗೆ 900 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್ನಲ್ಲಿ ಗಳಿಕೆ ಮಾಡಿದೆ. ಸಿನಿಮಾದ ಸೀಕ್ವೆಲ್ ಮುಂದಿನ ವರ್ಷ ಬಿಡುಗಡೆ ಆಗಲಿದ್ದು, ಸೀಕ್ವೆಲ್, ದಕ್ಷಿಣ ಭಾಷೆಗಳಲ್ಲಿಯೂ ಬಿಡುಗಡೆ ಆಗಲಿದೆ.

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ.
ಡಿಸೆಂಬರ್ 5 ರಂದು ಬಿಡುಗಡೆ ಆದ ‘ಧರುಂಧರ್’ ಸಿನಿಮಾ, ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ವೀಕ್ಷಣೆಗೆ ಲಭ್ಯವಿದೆ. ಕೇವಲ ಹಿಂದಿ ಆವೃತ್ತಿ ಒಂದರಿಂದಲೇ ಈ ಸಿನಿಮಾ ಈ ವರೆಗೆ 900 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್ನಲ್ಲಿ ಗಳಿಕೆ ಮಾಡಿದೆ. ಬೆಂಗಳೂರಿನಲ್ಲಿ ಈಗಲೂ (ಡಿಸೆಂಬರ್ 24) ಸಿನಿಮಾದ ಬಹುತೇಕ 90% ಶೋಗಳು ಸೋಲ್ಡ್ ಔಟ್ ಆಗಿವೆ. ಮಾತ್ರವಲ್ಲದೆ ಮುಂದಿನ ಮೂರು ನಾಲ್ಕು ದಿನಗಳ ಶೋಗಳು ಸಹ ಬಹುತೇಕ ಮುಂಗಡವಾಗಿ ಬುಕ್ ಆಗಿವೆ.
‘ಧುರಂಧರ್’ ಸಿನಿಮಾದ ಸೀಕ್ವೆಲ್ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾಗುತ್ತಲೇ ಸಿನಿಮಾವನ್ನು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಮಾಡಲಾಗಿದ್ದು, ದಕ್ಷಿಣ ಭಾರತದಲ್ಲಿ ಆಯಾ ಭಾಷೆಗಳಲ್ಲಿಯೇ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಗಳಿಕೆ ಇನ್ನಷ್ಟು ಹೆಚ್ಚಾಗುವುದು ಪಕ್ಕಾ ಎನ್ನಲಾಗುತ್ತಿದೆ.
ಇದನ್ನೂ ಓದಿ:‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?
ಹಿಂದಿ ಸಿನಿಮಾಗಳು ದಕ್ಷಿಣ ಭಾರತದಲ್ಲಿ ಒಳ್ಳೆಯ ಪ್ರದರ್ಶನ ಕಾಣುವುದಿಲ್ಲ ಎಂಬ ಮಾತು ಚಾಲ್ತಿಯಲ್ಲಿದೆ. ಉತ್ತರ ಭಾರತದಲ್ಲಿ ಸೂಪರ್ ಹಿಟ್ ಆದ ‘ಬ್ರಹ್ಮಾಸ್ತ್ರ’, ‘ಪಠಾಣ್’ ಇನ್ನಿತರೆ ಕೆಲವು ಸಿನಿಮಾಗಳು ಸಹ ದಕ್ಷಿಣ ಭಾರತದಲ್ಲಿ ದೊಡ್ಡ ಕಲೆಕ್ಷನ್ ಮಾಡಿರಲಿಲ್ಲ. ಆದರೆ ‘ಧುರಂಧರ್’ ಹಾಗಿಲ್ಲ, ದಕ್ಷಿಣ ಭಾರತದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದೇ ಕಾರಣಕ್ಕೆ ‘ಧುರಂಧರ್ 2’ ಸಿನಿಮಾವನ್ನು ದಕ್ಷಿಣ ಭಾರತದ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
‘ಧುರಂಧರ್’ ಸಿನಿಮಾ ಸ್ಪೈ ಥ್ರಿಲ್ಲರ್ ಆಗಿದ್ದು, ರಣ್ವೀರ್ ಸಿಂಗ್ ಗೂಢಚಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಅಕ್ಷನ್ ಖನ್ನ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾನಲ್ಲಿ ಮಾಧವನ್ ಸಹ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧಾರ್.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




