AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ

ಕೋವಿಡ್ ನಂತರ 100 ದಿನ ಪೂರೈಸಿದ ಏಕೈಕ ಚಿತ್ರ 'ಧುರಂಧರ್' ಹೊಸ ದಾಖಲೆ ಬರೆದಿದೆ. ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಮುಂದುವರೆಸಿರುವ ಇದರ ಸೀಕ್ವೆಲ್ 'ಧುರಂಧರ್ 2' ಇದೇ ಮಾರ್ಚ್ 19ಕ್ಕೆ ತೆರೆ ಕಾಣಲಿದೆ. ಮೊದಲ ಭಾಗ ಒಟಿಟಿಯಲ್ಲಿದ್ದರೂ ಥಿಯೇಟರ್‌ಗಳಲ್ಲಿ ಶತದಿನೋತ್ಸವ ಆಚರಿಸಿ, ಸೀಕ್ವೆಲ್ ಜೊತೆಗೇ ಪ್ರದರ್ಶನಗೊಳ್ಳುತ್ತಿರುವುದು ಒಂದು ಅಪರೂಪದ ವಿದ್ಯಮಾನ.

ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on: Mar 13, 2026 | 11:56 AM

Share

‘ಧುರಂಧರ್ 2’ ಸಿನಿಮಾ ರಿಲೀಸ್​​​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಮಾರ್ಚ್ 18ರಂದು ಸಂಜೆ 5 ಗಂಟೆಗೆ ಪ್ರೀಮಿಯರ್ ಶೋಗಳು ಆರಂಭ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ಅಧಿಕೃತವಾಗಿ ತೆರೆಗೆ ಬರುತ್ತಿದೆ. ಈ ಚಿತ್ರದ ಟಿಕೆಟ್​​​ಗಳು ಸುಮಾನಿ ರೀತಿಯಲ್ಲಿ ಬುಕ್ ಆಗುತ್ತಿದೆ. ಮಾರ್ಚ್ 12ರಂದು ‘ಧುರಂಧರ್’ ರೀ-ರಿಲೀಸ್ ಆಗಿದೆ ಎಂಬುದು ಮತ್ತೊಂದು ವಿಶೇಷ. ಈ ಮಧ್ಯೆ ‘ಧುರಂಧರ್’ ಸಿನಿಮಾ (Dhurandhar) ಹೊಸ ದಾಖಲೆ ಒಂದನ್ನು ಬರೆದಿದೆ. ಥಿಯೇಟರ್​​ ಅಲ್ಲಿ ಸಿನಿಮಾ 100 ದಿನವನ್ನು ಪೂರ್ಣಗೊಳಿಸುತ್ತಿದೆ. ಕೊವಿಡ್ ಬಳಿಕ ನೂರು ದಿನ ಪೂರೈಸಿದ ಏಕೈಕ ಸಿನಿಮಾ ಇದು ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದೆ.

ಡಿಸೆಂಬರ್ 5ರಂದು ‘ಧುರಂಧರ್’ ರಿಲೀಸ್ ಆಯಿತು. ಮಾರ್ಚ್ 14ರಂದು ಸಿನಿಮಾ 100ನೇ ದಿನ ಪೂರೈಸುತ್ತಿದೆ. ಥಿಯೇಟರ್​​​ನಲ್ಲಿ ಚಿತ್ರ ಗ್ರ್ಯಾಂಡ್ ಆಗಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಸಿನಿಮಾ ಒಟಿಟಿಗೆ ಕಾಲಿಟ್ಟ ಹೊರತಾಗಿಯೂ ಅನೇಕ ಥಿಯೇಟರ್​​​ಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಾ ಇತ್ತು. ಈಗ ಬ್ಲಾಕ್​​ಬಸ್ಟರ್ ಚಿತ್ರ ಹೊಸ ದಾಖಲೆ ಬರೆಯಲು ರೆಡಿ ಆಗಿದೆ. ಬಾಲಿವುಡ್ ಚಿತ್ರ ಮಾಡಿದ ಈ ಸಾಧನೆಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಸಾಮಾನ್ಯವಾಗಿ ಸಿನಿಮಾ ಒಟಿಟಿಗೆ ಕಾಲಿಟ್ಟ ಬಳಿಕ ಚಿತ್ರ ಥಿಯೇಟರ್​​​ನಿಂದ ಕಾಲ್ಕೀಳುತ್ತವೆ. ಆದರೆ ‘ಧುರಂಧರ್’ ಸಿನಿಮಾ ವಿಷಯದಲ್ಲಿ ಆ ರೀತಿ ಆಗಿಲ್ಲ. ಈ ಚಿತ್ರವನ್ನು ಒಟಿಟಿ ಜೊತೆಗೆ ಥಿಯೇಟರ್​​​​​ನಲ್ಲೂ ವೀಕ್ಷಿಸಿದ್ದಾರೆ ಅನ್ನೋದು ವಿಶೇಷ. ಅಚ್ಚರಿಯ ವಿಷಯ ಎಂದರೆ ವಿಶ್ವಾದ್ಯಂತ ಸಾವಿರ ಪರದೆಗಳಲ್ಲಿ ಈ ಚಿತ್ರ ರನ್ ಆಗುತ್ತಿದ್ದು, 1250 ಶೋಗಳನ್ನು ಚಿತ್ರಕ್ಕೆ ನೀಡಲಾಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಬಿಡುಗಡೆಗೆ ಮುಂಚೆ ಮರು ಬಿಡುಗಡೆ ಆಯ್ತು ‘ಧುರಂಧರ್’

ಇನ್ನು, ಸೀಕ್ವೆಲ್ ರಿಲೀಸ್ ಸಂದರ್ಭದಲ್ಲಿ ಮೊದಲ ಪಾರ್ಟ್ ರನ್ ಆಗುತ್ತಿರುವುದು ಇದೇ ಮೊದಲು ಎಂದು ಹೇಳಲಾಗಿದೆ. ‘ಧುರಂಧರ್’ ರಿಲೀಸ್ ಆದ ಬಳಿಕ ‘ಧುರಂಧರ್ 2’ ತುಂಬಾನೇ ಕಡಿಮೆ ಅವಧಿಯಲ್ಲಿ ರಿಲೀಸ್ ಆಗುತ್ತಿದೆ. ಇದು ಕೂಡ ಈ ಹೊಸ ದಾಖಲೆ ನಿರ್ಮಿಸಲು ಕಾರಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು