AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥೆಕದ್ದ ಆರೋಪದ ಬೆನ್ನಲ್ಲೇ ‘ಧುರಂಧರ್ 2’ ಚಿತ್ರಕ್ಕೆ ಮತ್ತೊಂದು ಶಾಕ್; ಪ್ರಮುಖ ಹಾಡು ಡಿಲೀಟ್?

'ಧುರಂಧರ್ 2' ಚಿತ್ರ ಕಥೆ ಕಳ್ಳತನದ ಆರೋಪದ ಬೆನ್ನಲ್ಲೇ ಮತ್ತೊಂದು ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದ ಪ್ರಮುಖ ಹಾಡಾದ 'ರಂಗ್ ದೆ ಲಾಲ್' ಕೃತಿಸ್ವಾಮ್ಯ ಉಲ್ಲಂಘಿಸಿದೆ ಎಂದು 'ತ್ರಿಮೂರ್ತಿ ಫಿಲ್ಮ್ಸ್' ಆರೋಪಿಸಿದೆ. ಹಾಡಿನ ಬಳಕೆಗೆ ಸರಿಯಾದ ಒಪ್ಪಿಗೆ ಪಡೆದಿಲ್ಲ ಎಂದು ಆಕ್ಷೇಪಿಸಿದ್ದು, ಹಾಡನ್ನು ಡಿಲೀಟ್ ಮಾಡಲು ಅಥವಾ ದೊಡ್ಡ ಮೊತ್ತ ಪಾವತಿಸಲು ನ್ಯಾಯಾಲಯದ ಮೊರೆ ಹೋಗಿದೆ.

ಕಥೆಕದ್ದ ಆರೋಪದ ಬೆನ್ನಲ್ಲೇ ‘ಧುರಂಧರ್ 2’ ಚಿತ್ರಕ್ಕೆ ಮತ್ತೊಂದು ಶಾಕ್; ಪ್ರಮುಖ ಹಾಡು ಡಿಲೀಟ್?
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on:Apr 09, 2026 | 1:10 PM

Share

‘ಧುರಂಧರ್ 2’ (Dhurandhar 2) ರಿಲೀಸ್ ಆಗಿ ತಿಂಗಳು ಕಳೆಯುತ್ತಾ ಬರುತ್ತಿರುವಾಗ ಚಿತ್ರಕ್ಕೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸಿನಿಮಾದ ಹಾಡೊಂದಕ್ಕೆ ಕತ್ತರಿ ಬೀಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಆ ಹಾಡನ್ನು ಉಳಿಸಿಕೊಳ್ಳಬೇಕು ಎಂದಾದರೆ ಇವರು ದೊಡ್ಡ ಮೊತ್ತ ಪಾವತಿಸಬೇಕಾಗಿ ಬರಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ಧುರಂಧರ್ 2’ ಸಿನಿಮಾನ ಆದಿತ್ಯ ಧಾರ್ ಹಾಗೂ ಜಿಯೋ ಸ್ಟುಡಿಯೋ ಒಟ್ಟಾಗಿ ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಅನೇಕ ಹಳೆಯ ಹಾಡುಗಳನ್ನು ಬಳಕೆ ಮಾಡಲಾಗಿದೆ. ಈ ಸಿನಿಮಾದಲ್ಲಿ ‘ರಂಗ್ ದೆ ಲಾಲ್’ ಎಂಬ ಹಾಡಿದೆ. ಈ ಚಿತ್ರದ ಮೂಲ ಹಾಡು ‘ತ್ರಿದೇವ್’ನಲ್ಲಿ ಬಳಕೆ ಆಗಿತ್ತು ಎನ್ನಲಾಗಿದೆ. ಈ ಹಾಡನ್ನು ಆನಂದ್ ಭಕ್ಷಿ, ಕಲ್ಯಾಣ್​, ಆನಂದ್ ಕಂಪೋಸ್ ಮಾಡಿದ್ದರು. ಈ ಹಾಡನ್ನು ಅಮಿತ್ ಕುಮಾರ್ ಹಾಗೂ ಸಪ್ನಾ ಮುಖರ್ಜಿ ಹಾಡಿದ್ದರು.

ಈಗ ತ್ರಿಮೂರ್ತಿ ಫಿಲ್ಮ್ಸ್ ಅವರು ಈ ಹಾಡಿನ ಹಕ್ಕು ತಮ್ಮದು ಎಂದು ಪ್ರತಿಪಾದಿಸಿದ್ದಾರೆ. ‘ರಂಗ್ ದೇ ಲಾಲ್’ ಹಾಡು ನಮ್ಮ ಹಾಡಿಗೆ ಹೋಲಿಕೆ ಆಗುತ್ತದೆ ಎಂಬುದು ಕಂಪನಿಯ ಆರೋಪ. ಸರಿಯಾದ ಒಪ್ಪಿಗೆ ಪಡೆಯದೇ ಈ ಹಾಡನ್ನು ಬಳಕೆ ಮಾಡಲಾಗಿದೆ ಎಂಬುದು ತ್ರಿಮೂರ್ತಿ ಫಿಲ್ಮ್ಸ್ ಆರೋಪ.

ತ್ರಿಮೂರ್ತಿ ಫಿಲ್ಮ್ಸ್ ಸದ್ಯ ಈ ಹಾಡನ್ನು ಬಳಕೆ ಮಾಡದಂತೆ ಆದೇಶ ನೀಡಬೇಕು ಎಂದು ಕೋರ್ಟ್ ಬಳಿ ಕೋರಿದೆ ಎನ್ನಲಾಗಿದೆ. ಜೊತೆಗೆ ಈ ಹಾಡನ್ನು ಒಪ್ಪಿಗೆ ಇಲ್ಲದೆ ಬಳಸಿದ್ದಕ್ಕೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದೆ. ಒಂದೊಮ್ಮೆ ‘ಧುರಂಧರ್ 2’ ತಂಡದ ತಪ್ಪು ಕಂಡು ಬಂದು ಈ ಬಗ್ಗೆ ಆದೇಶ ಹೊರಡಿಸಿದರೆ ಸಿನಿಮಾಗೆ ಸಾಕಷ್ಟು ನಷ್ಟ ಉಂಟಾಗಲಿದೆ.

ಇದನ್ನೂ ಓದಿ: ಧುರಂಧರ್ ರಣವೀರ್ ಸಿಂಗ್ ಸಿನಿಮಾ ಎಂದು ಹೇಳಲು ಸಾಧ್ಯವಿಲ್ಲ; ಕರೀನಾ ಕಪೂರ್

ಈ ಮೊದಲು ‘ಧುರಂಧರ್ 2’ ವಿರುದ್ಧ ಕಥೆ ಕದ್ದ ಆರೋಪ ಬಂದಾಗ ಇದನ್ನು ನಿರ್ದೇಶಕ ಆದಿತ್ಯ ಧಾರ್ ಅವರು ನಿರಾಕರಿಸಿದ್ದರು. ಈಗ ಈ ಆರೋಪವನ್ನು ತಂಡ ಯಾವ ರೀತಿಯಲ್ಲಿ ಸಮರ್ಥಿಸಿಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:10 pm, Thu, 9 April 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ