AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಟೀಸರ್ ನೋಡಿದವರಿಗೆ ಭಾರೀ ನಿರಾಸೆ; ರಿಲೀಸ್ ದಿನಾಂಕವೂ ರಿವೀಲ್

'ಧುರಂಧರ್ 2' ಟೀಸರ್ ನಿರೀಕ್ಷೆಗಳನ್ನು ತಲುಪುವಲ್ಲಿ ವಿಫಲವಾಗಿದೆ. ರಣವೀರ್ ಸಿಂಗ್ ನಟನೆಯ ಈ ಬಹುನಿರೀಕ್ಷಿತ ಸೀಕ್ವೆಲ್‌ನ ಟೀಸರ್, ಹಿಂದಿನ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳನ್ನೇ ಮರುಬಳಕೆ ಮಾಡಿಕೊಂಡಿರುವುದು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ. ಚಿತ್ರದ ಬಿಡುಗಡೆ ದಿನಾಂಕ ಬಹಿರಂಗವಾಗಿದ್ದರೂ, ಹೊಸತನದ ಕೊರತೆಯಿಂದಾಗಿ "ಟಾಕ್ಸಿಕ್" ಚಿತ್ರಕ್ಕೆ ಲಾಭವಾಗುವ ಸಾಧ್ಯತೆಯಿದೆ.

‘ಧುರಂಧರ್ 2’ ಟೀಸರ್ ನೋಡಿದವರಿಗೆ ಭಾರೀ ನಿರಾಸೆ; ರಿಲೀಸ್ ದಿನಾಂಕವೂ ರಿವೀಲ್
ಧುರಂಧರ್ 2
ರಾಜೇಶ್ ದುಗ್ಗುಮನೆ
|

Updated on: Feb 03, 2026 | 12:42 PM

Share

ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ (Dhurandhar Movie) ಮಾಡಿದ ದಾಖಲೆಗಳು ಹಲವು. ಕಳೆದ ವರ್ಷ ಡಿಸೆಂಬರ್​​ನಲ್ಲಿ ‘ಧುರಂಧರ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಸಾಮಾನ್ಯವಾಗಿ ಸೀಕ್ವೆಲ್ ಎಂದಾಗ ಒಂದಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ. ಆದರೆ ಆದಿತ್ಯ ಧಾರ್ ಹಾಗಲ್ಲ. ಕೇವಲ ಮೂರೇ ತಿಂಗಳಿಗೆ ಸೀಕ್ವೆಲ್ ತರುತ್ತಿದ್ದಾರೆ. ಮೊದಲೇ ಶೂಟಿಂಗ್ ಮುಗಿದಿರುವುದರಿಂದ, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಸಲಾಗುತ್ತಿದೆ. ಈಗ ಸಿನಿಮಾದ ರಿಲೀಸ್ ದಿನಾಂಕವನ್ನು ಟೀಸರ್ ಮೂಲಕ ಖಚಿತಪಡಿಸಿಯಾಗಿದೆ. ಆದರೆ, ಟೀಸರ್ ನೋಡಿದ ಅನೇಕರಿಗೆ ನಿರಾಸೆ ಆಗಿದೆ.

ರಣವೀರ್ ಸಿಂಗ್ ಅವರು ‘ಧುರಂಧರ್’ ಸಿನಿಮಾದಲ್ಲಿ ಸ್ಪೈ ಆಗಿ ಕಾಣಿಸಿಕೊಳ್ಳುತ್ತಾರೆ. ಪಾಕಿಸ್ತಾನಕ್ಕೆ ತೆರಳೋ ಈ ವ್ಯಕ್ತಿ ಅಲ್ಲಿ ಉಗ್ರಗಾಮಿಗಳ ಜೊತೆ ಬೆರೆತು ಭಾರತಕ್ಕೆ ಸಹಾಯ ಮಾಡುತ್ತಾರೆ. ಇದರಿಂದ ಸಾಕಷ್ಟು ಉಪಯೋಗ ಆಗುತ್ತದೆ. ‘ಧುರಂಧರ್’ ಕ್ಲೈಮ್ಯಾಕ್ಸ್ ಅಲ್ಲಿ ಎರಡನೇ ಪಾರ್ಟ್​ ಹೇಗಿರಲಿದೆ ಎಂಬುದನ್ನು ತೋರಿಸಿದ್ದರು. ಈಗ ಅದನ್ನೇ ಟೀಸರ್ ಎಂದು ಬಿಡಲಾಗಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಇದನ್ನೂ ಓದಿ: ‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ

‘ಧುರಂಧರ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಸೃಷ್ಟಿಸಿದೆ. ಆ ನಿರೀಕ್ಷೆ ತಲುಪಬೇಕು ಎಂದರೆ ಅದಕ್ಕೆ ತಕ್ಕಂತೆ ಟೀಸರ್ ಬಿಡುಗಡೆ ಮಾಡಬೇಕು. ಆದರೆ, ಹಳೆಯ ವಿಷಯವನ್ನೇ ಮತ್ತೆ ತೋರಿಸಿದರೆ ಸಹಜವಾಗಿಯೇ ಬೇಸರ ಆಗಿಯೇ ಆಗುತ್ತದೆ. ಕನ್ನಡ ಟೀಸರ್ ಕೊನೆಯಲ್ಲಿ, ‘ಇದು ಹೊಸ ಭಾರತ, ಇದು ಮನೆಯ ಒಳಗೆ ನುಗ್ಗಿ ಹೊಡೆಯುತ್ತದೆ, ಕೊಲ್ಲುತ್ತದೆ’ ಎಂಬ ಸಾಲುಗಳು ಇವೆ. ಇದು ಸರಿ ಹೊಂದುತ್ತಿಲ್ಲ. ಈ ಬೆಳವಣಿಗೆಯಿಂದ ‘ಟಾಕ್ಸಿಕ್’ ಚಿತ್ರಕ್ಕೆ ಲಾಭ ಆಗೋ ಸಾಧ್ಯತೆ ಹೆಚ್ಚು.

‘ಧುರಂಧರ್’ ಸಿನಿಮಾದಲ್ಲಿ ರಣವೀರ್ ಅವರು ಹಮ್ಜಾ ಅಲಿ ಮಜಾರಿ ಪಾತ್ರ ಮಾಡಿದ್ದಾರೆ. ಜಸ್ಕಿರತ್ ಸಿಂಗ್ ರಂಗಿ ಹೇಗೆ ಹಮ್ಜಾ ಆದರು ಎಂಬ ಜರ್ನಿಯನ್ನು ‘ಧುರಂಧರ್ 2’ ಸಿನಿಮಾದಲ್ಲಿ ಹೇಳಲಾಗುತ್ತಿದೆ ಎನ್ನಲಾಗಿದೆ. ರಿಲೀಸ್​​ಗೆ ಕೆಲವು ದಿನ ಮೊದಲು ‘ಧುರಂಧರ್ 2’ ಟ್ರೇಲರ್ ಬಿಡುಗಡೆ ಮಾಡಲು ತಂಡ ನಿರ್ಧರಿಸಿದೆ. ಆಗ ಇನ್ನೊಂದಷ್ಟು ಹೊಸ ವಿಷಯಗಳನ್ನು ನಿರೀಕ್ಷಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!