‘ಧುರಂಧರ್ 3’ ಎಫೆಕ್ಟ್​?; ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ

ವಿವೇಕ್ ಅಗ್ನಿಹೋತ್ರಿ 'ಆಪರೇಷನ್ ಸಿಂಧೂರ್' ಸಿನಿಮಾ ಘೋಷಿಸಿದ್ದಾರೆ. ಪೆಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಭಾರತ ನೀಡಿದ ಪ್ರತಿಕ್ರಿಯೆಯನ್ನು ಇದು ಆಧರಿಸಿದೆ. 'ಧುರಂಧರ್ 3' ಚಿತ್ರದ ಯಶಸ್ಸು ಈ ಹೊಸ ಘೋಷಣೆಗೆ ಪ್ರೇರಣೆ ಇರಬಹುದೇ ಎಂಬ ಪ್ರಶ್ನೆ ಮೂಡಿಸಿದೆ. 'ದಿ ಕಾಶ್ಮೀರ್ ಫೈಲ್ಸ್' ನಂತರ, ಇದೊಂದು ಮತ್ತೊಂದು ಮಹತ್ವದ ವಿಷಯವನ್ನು ತೆರೆಗೆ ತರುತ್ತಿದೆ.

‘ಧುರಂಧರ್ 3’ ಎಫೆಕ್ಟ್​?; ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ
ವಿವೇಕ್​-ರಣವೀರ್

Updated on: Mar 26, 2026 | 2:57 PM

ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದರು. ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿಯ ಕುರಿತು ಈ ಸಿನಿಮಾ ಇತ್ತು. ನಂತರ ಬಂದ ‘ದಿ ವ್ಯಾಕ್ಸಿನ್ ವಾರ್’ ಹಾಗೂ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾಗಳು ಗಮನ ಸೆಳೆಯಲು ವಿಪಲವಾದವು. ಈಗ ವಿವೇಕ್ ಅವರು ಪೆಹಲ್ಗಾಮ್ ದಾಳಿ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಪೆಹಲ್ಗಾಮ್ ದಾಳಿ ಬಳಿಕ ನಡೆಯುವ ಘಟನೆಗಳನ್ನು ವಿವೇಕ್ ಕಟ್ಟಿಕೊಡಲಿದ್ದಾರೆ.

ಜಮ್ಮು ಕಾಶ್ಮೀರದ ಪೆಹಲ್ಗಾಮ್​​ ಅಲ್ಲಿ ಉಗ್ರರು ದಾಳಿ ಮಾಡಿದರು. ವಿವಾಹಿತರಲ್ಲಿ ಪುರಷರನ್ನೇ ಟಾರ್ಗೆಟ್ ಮಾಡಿ ಈ ದಾಳಿ ನಡೆಸಲಾಯಿತು. ಒಟ್ಟೂ 26 ಜನ ಟೂರಿಸ್ಟ್​ಗಳನ್ನು ಕೊಲ್ಲಲಾಯಿತು. ಈ ದಾಳಿ ಇಡೀ ಭಾರತವೇ ತತ್ತರಿಸುವಂತೆ ಮಾಡಿತು. ಇದಕ್ಕೆ ಪ್ರತಿಯಾಗಿ ಭಾರತ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಹಾಗೂ ಪಾಕಿಸ್ತಾ ಆಕ್ರಮಿತ ಭಾಗಗಳ ಮೇಲೆ ಭಾರತ ದಾಳಿ ನಡೆಸಿತು. ಈ ಘಟನೆ ಆಧರಿಸಿ ‘ಆಪರೇಷನ್ ಸಿಂಧೂರ್’ ಮಾಡಲಾಗುದು ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.

‘ಕೆಲವು ಕಥೆಗಳನ್ನು ಆಯ್ಕೆ ಮಾಡಲಾಗುವುದಿಲ್ಲ, ಅವು ನಿಮ್ಮನ್ನು ಆಯ್ಕೆ ಮಾಡುತ್ತವೆ. ಆಪರೇಷನ್ ಸಿಂಧೂರ್ ಅಂತಹ ಕಥೆಗಳಲ್ಲಿ ಒಂದು. ಪ್ರಾಮಾಣಿಕತೆ, ಧೈರ್ಯ ಮತ್ತು ಜವಾಬ್ದಾರಿಯಿಂದ ಹೇಳಬೇಕಾದ ಕಥೆ. ಇದು ಕೇವಲ ಸಿನಿಮಾ ಅಲ್ಲ, ಇದು ವಿಷಯಗಳನ್ನು ಹೊರಜಗತ್ತಿಗೆ ತೋರಿಸುವ ಪ್ರಕ್ರಿಯೆ. ಒಂದು ರಾಷ್ಟ್ರದಲ್ಲಿ ಇಷ್ಟು ದೊಡ್ಡ ಘಟನೆ ನಡೆದಾಗ ಅವುಗಳನ್ನು ಸತ್ಯಗಳನ್ನು ಹೇಳಿ ದಾಖಲಿಸುವುದು ಮುಖ್ಯವಾಗುತ್ತದೆ’ ಎಂದು ನಿರ್ಮಾಪಕ ಭೂಷಣ್ ಕುಮಾರ್ ಹೇಳಿದ್ದಾರೆ.

ನಿರ್ದೇಶಕ-ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮಾತನಾಡಿ, ‘ಭಾರತವು ಪೆಹಲ್ಗಾಮ್ ಭಯೋತ್ಪಾದನಾ ದಾಳಿಗೆ ಸೇಡು ತೀರಿಸಿಕೊಂಡಿದೆ. ಪಾಕಿಸ್ತಾನವನ್ನು ಶಿಕ್ಷಿಸಿದೆ ಮಾತ್ರವಲ್ಲದೆ, ಆಧುನಿಕ ಯುದ್ಧದಲ್ಲೂ ತನ್ನ ಶಕ್ತಿಯನ್ನು ಪ್ರದರ್ಶಿಸಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂದೂರ್ ಕುರಿತು ಸಿನಿಮಾ ಮಾಡಲಿರುವ ವಿವೇಕ್ ಅಗ್ನಿಹೋತ್ರಿ

ಸದ್ಯ, ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿದೆ. ಭಾರತ ನಡೆಸಿದ ಆಪರೇಷನ್ ಆಧಾರವನ್ನು ಸ್ಫೂರ್ತಿಯಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಿವೇಕ್ ಅಗ್ನಿಹೋತ್ರಿ ಈ ಚಿತ್ರ ಘೋಷಿಸಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us