AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಪಿ ಪ್ರತಿಭಟನೆಗೆ ಬಂದ ‘ಧುರಂಧರ್’ ನಟಿ ಆಯಿಷಾ ಖಾನ್; ವಶಕ್ಕೆ ಪಡೆದ ಮುಂಬೈ ಪೋಲಿಸರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆಗೆ ಬೆಂಬಲ ನೀಡಲು ಬಂದ ನಟಿ ಆಯೆಷಾ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮ್ಮನ್ನು ಪೊಲೀಸರು ವ್ಯಾನ್‌ಗೆ ತಳ್ಳುತ್ತಿರುವ ವಿಡಿಯೋವನ್ನು ಆಯಿಷಾ ಖಾನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ.

ಸಿಜೆಪಿ ಪ್ರತಿಭಟನೆಗೆ ಬಂದ ‘ಧುರಂಧರ್’ ನಟಿ ಆಯಿಷಾ ಖಾನ್; ವಶಕ್ಕೆ ಪಡೆದ ಮುಂಬೈ ಪೋಲಿಸರು
Ayesha Khan
ಮದನ್​ ಕುಮಾರ್​
|

Updated on: Jul 22, 2026 | 7:37 PM

Share

‘ಧುರಂಧರ್’ (Dhurandhar) ಚಿತ್ರದ ‘ಶರಾರತ್’ ಗೀತೆಯ ಮೂಲಕ ಗಮನಸೆಳೆದ ನಟಿ ಆಯಿಷಾ ಖಾನ್ (Ayesha Khan) ಅವರನ್ನು ಮುಂಬೈ ಪೊಲೀಸರು ಬುಧವಾರ (ಜುಲೈ 22) ವಶಕ್ಕೆ ಪಡೆದಿದ್ದಾರೆ. ಮುಂಬೈನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ (Student Protest) ಬೆಂಬಲ ಸೂಚಿಸಲು ಸ್ನೇಹಿತರೊಂದಿಗೆ ಆಗಮಿಸಿದ್ದ ನಟಿಯನ್ನು ಪೊಲೀಸರು ಬಲವಂತವಾಗಿ ವ್ಯಾನ್‌ಗೆ ತಳ್ಳಿಕೊಂಡು ಹೋಗಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಆಯಿಷಾ ಖಾನ್, ಯಾವುದೇ ಮುನ್ಸೂಚನೆ ಅಥವಾ ಕಾರಣ ನೀಡದೆ ತಮ್ಮನ್ನು ಪೊಲೀಸರು ಎಳೆದುಕೊಂಡು ಹೋದ ಘಟನೆಯನ್ನು ವಿವರವಾಗಿ ಹಂಚಿಕೊಂಡಿದ್ದಾರೆ.

ಘಟನೆ ಬಗ್ಗೆ ವಿವರ ನೀಡಿದ ನಟಿ:

ದಾದರ್‌ನಲ್ಲಿ ನಡೆಯಬೇಕಿದ್ದ ವಿದ್ಯಾರ್ಥಿ ಪ್ರತಿಭಟನೆಗೆ ಬೆಂಬಲ ಸೂಚಿಸಲು ತಾವು ಸಂಜೆ 4 ಗಂಟೆಗೆ ತೆರಳಿದ್ದಾಗಿ ಆಯಿಷಾ ಖಾನ್ ಹೇಳಿದ್ದಾರೆ. ‘ನಾವು ಸ್ಥಳಕ್ಕೆ ತಲುಪಿ ಇನ್ನೂ ಒಂದು ಮಾತನ್ನೂ ಆಡಿರಲಿಲ್ಲ, ಯಾವುದೇ ಘೋಷಣೆ ಕೂಗಿರಲಿಲ್ಲ. ಅಷ್ಟರಲ್ಲೇ ಪೊಲೀಸ್ ಅಧಿಕಾರಿಯೊಬ್ಬರು ಬಂದು ಇಲ್ಲಿ ಪ್ರತಿಭಟನೆ ಮಾಡುವಂತಿಲ್ಲ ಎಂದರು. ಮತ್ತೆ ಬೇರೆ ಏನು ಮಾರ್ಗವಿದೆ ತಿಳಿಸಿ ಅಂತ ಕೇಳಿದೆ. ಆದರೆ ಯಾವುದೇ ಮಾತುಕತೆ ನಡೆಸದೆ, ಪೊಲೀಸರು ನನ್ನ ಸಹೋದರ ಮತ್ತು ಸ್ನೇಹಿತನನ್ನು ಎಳೆದುಕೊಂಡು ಹೋದರು. ನಂತರ ಸುಮಾರು 15 ಪೊಲೀಸರು ನಮ್ಮನ್ನು ಬಲವಂತವಾಗಿ ವ್ಯಾನ್ ಹತ್ತಿಸಿದರು’ ಎಂದು ಆಯಿಷಾ ಖಾನ್ ತಿಳಿಸಿದ್ದಾರೆ.

‘ನನ್ನನ್ನು 4-5 ಮಹಿಳಾ ಪೊಲೀಸರು ಎಳೆದೊಯ್ದರು. ವ್ಯಾನ್‌ನಲ್ಲಿದ್ದಷ್ಟು ಸಮಯ ನಮ್ಮನ್ನು ಏಕೆ ವಶಕ್ಕೆ ಪಡೆದಿದ್ದೀರಿ? ನಾವು ಮಾಡಿದ ತಪ್ಪಾದರೂ ಏನು ಎಂದು ಕೇಳಿದರೂ ಯಾವುದೇ ಉತ್ತರ ಸಿಗಲಿಲ್ಲ. ದಾದರ್‌ನಿಂದ ನಮ್ಮನ್ನು ವೋರ್ಲಿಗೆ ಕರೆತಂದರು’ ಎಂದು ಆಯಿಷಾ ಅಳಲು ತೋಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ:

‘ಶಾಂತಿಯುತವಾಗಿ ರಸ್ತೆಯಲ್ಲಿ ನಿಂತಿದ್ದಕ್ಕೆ ನಮ್ಮನ್ನು ಎಳೆದಾಡಿ ವಶಕ್ಕೆ ಪಡೆಯಲಾಯಿತು. ಯಾವ ಕಾನೂನನ್ನು ನಾವು ಮುರಿದಿದ್ದೇವೆ ಎಂದು ಕೇಳಿದರೂ ಉತ್ತರ ಬರಲಿಲ್ಲ. ರಸ್ತೆಯಲ್ಲಿ ನಿಲ್ಲುವುದು ಎಂದಿನಿಂದ ಅಪರಾಧವಾಯಿತು? ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸುವ ಬದಲು ಪ್ರಜೆಗಳ ಮೇಲೆಯೇ ದೌರ್ಜನ್ಯ ಎಸಗಲಾಗುತ್ತಿದೆ. ಆದರೂ ನನಗೆ ಉತ್ತಮ ಭವಿಷ್ಯದ ಭರವಸೆಯಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ನಿರ್ದೇಶಕನ ಪತ್ನಿ ಯಾಮಿ ಗೌತಮ್​ಗೆ ರಾಷ್ಟ್ರ ಪ್ರಶಸ್ತಿ: ಖುಷಿ ಹಂಚಿಕೊಂಡ ನಟಿ

ನವದೆಹಲಿಯ ಜಂತರ್ ಮಂತರ್‌ನಿಂದ ಆರಂಭವಾದ ವಿದ್ಯಾರ್ಥಿ ಪ್ರತಿಭಟನೆಗಳು ಈಗ ದೇಶದ ವಿವಿಧ ನಗರಗಳಿಗೆ ಹಬ್ಬಿದ್ದು, ಮುಂಬೈನಲ್ಲಿ ಮೂರನೇ ದಿನವೂ ಪ್ರತಿಭಟನೆ ಮುಂದುವರಿದಿದೆ. ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ