ವಿಶ್ವ ಬಾಕ್ಸ್ ಆಫೀಸ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’

ರಣವೀರ್ ಸಿಂಗ್ ನಟನೆಯ 'ಧುರಂದರ್' 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿ ಹೊರಹೊಮ್ಮಿದೆ. 935 ಕೋಟಿ ಗಳಿಸಿ, 'ಕಾಂತಾರ: ಚಾಪ್ಟರ್ 1' ದಾಖಲೆ ಮುರಿದಿದೆ. ಭಾರತದಲ್ಲಿ 600 ಕೋಟಿ ಗಳಿಸಿದ್ದು, ಅಲ್ಪಾವಧಿಯಲ್ಲೇ 1000 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ.

ವಿಶ್ವ ಬಾಕ್ಸ್ ಆಫೀಸ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’
ಧುರಂಧರ್-ಕಾಂತಾರ

Updated on: Dec 25, 2025 | 11:58 AM

ರಣವೀರ್ ಸಿಂಗ್ ನಟನೆಯ ‘ಧುರಂದರ್’ (Dhurandhar) 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಆಗಿ ಹೊರ ಹೊಮ್ಮಿದೆ. ಈ ಚಿತ್ರದ ವಿಶ್ವ ಮಟ್ಟದ ಕಲೆಕ್ಷನ್ 935 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಮೂಲಕ ‘ಕಾಂತಾರ: ಚಾಪ್ಟರ್ 1’ ಚಿತ್ರದ ಗಳಿಕೆಯನ್ನು ಈ ಸಿನಿಮಾ ಹಿಂದಿಕ್ಕಿಬಿಟ್ಟಿದೆ. ಈ ಚಿತ್ರ ಸುಲಭದಲ್ಲಿ ಶೀಘ್ರವೇ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಸಾಧ್ಯತೆ ಇದೆ. ಚಿತ್ರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಯಿತು. ರಿಷಬ್ ಅವರೇ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಈ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿತ್ತು. ಈ ಚಿತ್ರದ ದಾಖಲೆಯನ್ನು ಈಗ ‘ಧುರಂಧರ್’ ಮುರಿದು ಹಾಕಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಒಟ್ಟಾರೆ ಕಲೆಕ್ಷನ್ 850 ಕೋಟಿ ರೂಪಾಯಿ ಆಗಿತ್ತು. ‘ಧುರಂಧರ್’ ಕಲೆಕ್ಷನ್ 900 ಕೋಟಿ ರೂಪಾಯಿ ದಾಟಿದೆ. ಹಲವು ದೇಶಗಳಲ್ಲಿ ಸಿನಿಮಾ ‘ಧುರಂಧರ್’ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾ ಕಲೆಕ್ಷನ್ ತಗ್ಗಿಲ್ಲ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​​ನಲ್ಲಿ 600 ಕೋಟಿ ರೂಪಾಯಿ ಗಳಿಸಿದೆ.

20ನೇ ದಿನವೂ ‘ಧುರಂಧರ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ 17 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ವೀಕೆಂಡ್ ಒಳಗೆ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸೋ ಸಾಧ್ಯತೆ ಇದೆ. ಈ ಮೂಲಕ ಈ ವರ್ಷದ ಮೊದಲ ಸಾವಿರ ಕೋಟಿ ರೂಪಾಯಿ ಕ್ಲಬ್ ಸಿನಿಮಾ ಇದಾಗೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?

‘ಧುರಂಧರ್’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಆದಿತ್ಯ ಧಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸಾಕಷ್ಟು ನೆಗೆಟಿವ್ ಟಾಕ್ ಪಡೆದಿತ್ತು. ಆದಾಗ್ಯೂ ‘ಧುರಂಧರ್’ ಗೆದ್ದು ಬೀಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.