AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಬಳಿಕ ಬರ್ತಿದೆ ಏಳೂವರೆ ಗಂಟೆ ಸಿನಿಮಾ; ನಿಜವೇನು?

7.5 ಗಂಟೆ ಅವಧಿಯ 'ಧುರಂಧರ್: ಡೈರೆಕ್ಟರ್ ಕಟ್' ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಸೆನ್ಸಾರ್ ಪ್ರಮಾಣಪತ್ರ ವೈರಲ್ ಆಗಿದೆ. 'ಧುರಂಧರ್' ಹಾಗೂ 'ಧುರಂಧರ್ 2' ಚಿತ್ರಗಳ ಸಂಯೋಜನೆಯಾಗಿರುವ ಇದು ಪ್ರೀಮಿಯಂ ಸ್ಕ್ರೀನ್‌ಗಳಲ್ಲಿ ಎರಡು ಇಂಟರ್‌ವಲ್‌ಗಳೊಂದಿಗೆ ಪ್ರದರ್ಶನಗೊಳ್ಳಲಿದೆ. ಆದರೂ, ಇದು ಏಪ್ರಿಲ್ 1 ರಂದು ಪ್ರಕಟಗೊಂಡಿದ್ದರಿಂದ, ಏಪ್ರಿಲ್ ಫೂಲ್ ಆಗಿರುವ ಸಾಧ್ಯತೆ ಇದೆ.

‘ಧುರಂಧರ್ 2’ ಬಳಿಕ ಬರ್ತಿದೆ ಏಳೂವರೆ ಗಂಟೆ ಸಿನಿಮಾ; ನಿಜವೇನು?
ಧುರಂಧರ್
ರಾಜೇಶ್ ದುಗ್ಗುಮನೆ
|

Updated on:Apr 02, 2026 | 9:41 AM

Share

‘ಧುರಂಧರ್’ (Dhurandhar) ಸಿನಿಮಾದ ಅವಧಿ 3 ಗಂಟೆ 34 ನಿಮಿಷ ಇತ್ತು. ಅದೇ ರೀತಿ, ‘ಧುರಂಧರ್ 2’ ಸಿನಿಮಾ 3 ಗಂಟೆ 49 ನಿಮಿಷ ಇತ್ತು. ಇಷ್ಟು ದೀರ್ಘ ಅವಧಿ ಇದ್ದರೂ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬೆನ್ನಲ್ಲೇ ಏಳು ಗಂಟೆ 30 ನಿಮಿಷಗಳ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ! . ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾದ ಸೆನ್ಸಾರ್ ಪ್ರಮಾಣಪತ್ರ ವೈರಲ್ ಆಗಿದೆ. ಆದರೆ, ಇದು ನಿಜವಲ್ಲ. ಇದು ಏಪ್ರಿಲ್ ಫೂಲ್ ಸ್ಪೆಷಲ್.

ಈ ಮೊದಲು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಚಿತ್ರವನ್ನು ಕಂಬೈನ್ ಮಾಡಿ ಸಿನಿಮಾ ರಿಲೀಸ್ ಮಾಡಲಾಗಿತ್ತು. ಈ ಸಿನಿಮಾ ಗಮನ ಸೆಳೆದಿತ್ತು. ‘ಬಾಹುಬಲಿ’ ರಿಲೀಸ್ ಆಗಿ 10 ವರ್ಷಗಳ ಸಂಭ್ರಮದಲ್ಲಿ ಈ ಚಿತ್ರ ತೆರೆಗೆ ಬಂದಿತ್ತು. ಈ ಸಿನಿಮಾ ಹೊಸ ಅನುಭವ ನೀಡಿತ್ತು. ಈಗ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ ಸೇರಿಸಿ ‘ಧುರಂಧರ್: ಡೈರೆಕ್ಟರ್ ಕಟ್’ ಎಂಬ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ವರದಿ ಆಗಿತ್ತು.

ಪಾರ್ಥ ಚತುರ್ವೇದಿ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಈ ಸಿನಿಮಾದ ಸೆನ್ಸಾರ್ ಪ್ರಮಾಣಪತ್ರ ಹಂಚಿಕೊಂಡಿದ್ದಾರೆ. ‘ಧುರಂಧರ್: ಡೈರೆಕ್ಟರ್ಸ್ ಕಟ್’ ಎಂದು ಬರೆಯಲಾಗಿದೆ. ಸಿನಿಮಾಗೆ ಎ ಪ್ರಮಾಣ ಪತ್ರ ನೀಡಿರುವುದನ್ನು ಉಲ್ಲೇಖಿಸಲಾಗಿದೆ. ಈ ಸಿನಿಮಾದ ಅವಧಿ 450 ನಿಮಿಷ ಎಂದು ಬರೆಯಲಾಗಿದೆ. ಅಂದರೆ, ಏಳು ಗಂಟೆ 30 ನಿಮಿಷ ಸಿನಿಮಾ ಇರಲಿದೆ. ಈ ಸಿನಿಮಾ ಪ್ರೀಮಿಯಂ ಸ್ಕ್ರೀನ್​​ಗಳಾದ ಡಿಸಿ, ಐಮ್ಯಾಕ್ಸ್, ಎಚ್​​ಡಿಆರ್​ ಅಲ್ಲಿ ಮಾತ್ರ ಪ್ರದರ್ಶನ ಕಾಣಲಿದ್ದು, ಎರಡು ಇಂಟರ್​​ವಲ್​​ಗಳು ಇರಲಿವೆ ಎಂದು ಅವರು ಹೇಳಿದ್ದರು

ಇದನ್ನೂ ಓದಿ: ‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಇಂದು (ಏಪ್ರಿಲ್ 1) ಮೂರ್ಖರ ದಿನ. ಹೀಗಾಗಿ, ಈ ಪೋಸ್ಟ್ ಹಾಕಲಾಗಿದೆ. ಇದು ಆ ರೀತಿ ಮೂರ್ಖರನ್ನಾಗಿ ಮಾಡುವ ಪ್ರಯತ್ನ ಈ ಬಗ್ಗೆ ಸಿನಿಮಾ ತಂಡದಿಂದ ಸ್ಪಷ್ಟನೆ ಸಿಕ್ಕಿಲ್ಲ.

‘ಧುರಂಧರ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಹಿಟ್ ಗಿದೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Wed, 1 April 26

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ