AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದ್‌ಶಾ ಮೋಸ ಮಾಡಿದ್ದರ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಮಾತಾಡಿದ ಇಶಾ ರಿಖಿ

ಬಾದ್‌ಶಾ ಹಾಗೂ ಇಶಾ ರಿಖಿ ವಿಚ್ಛೇದನದ ಬೆನ್ನಲ್ಲೇ, ‘ಬಿಗ್ ಬಾಸ್ 20’ ಸ್ಪರ್ಧಿಯಾಗಿರುವ ಇಶಾ ಅವರು ಶೋನಲ್ಲಿ ಆಡಿರುವ ಮಾತುಗಳು ಭಾರಿ ಚರ್ಚೆಗೆ ಗ್ರಾಸವಾಗಿವೆ. ತಾವು ಜೀವನದಲ್ಲಿ ಪ್ಲೇಬಾಯ್ ರೀತಿಯ ದೊಡ್ಡ ರೆಡ್ ಫ್ಲ್ಯಾಗ್ ವ್ಯಕ್ತಿಯನ್ನು ನೋಡಿರುವುದಾಗಿ ಅವರು ಹೇಳಿದ್ದಾರೆ. ಇದು ಬಾದ್‌ಶಾ ಬಗ್ಗೆಯೇ ಹೇಳಿದ್ದು ಎಂದು ಜನರು ಊಹಿಸುತ್ತಿದ್ದಾರೆ.

ಬಾದ್‌ಶಾ ಮೋಸ ಮಾಡಿದ್ದರ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಮಾತಾಡಿದ ಇಶಾ ರಿಖಿ
Isha Rikhi, Badshah
ಮದನ್​ ಕುಮಾರ್​
|

Updated on: Sep 11, 2026 | 7:15 PM

Share

ರ್ಯಾಪರ್ ಬಾದ್‌ಶಾ ಹಾಗೂ ಪಂಜಾಬಿ ನಟಿ ಇಶಾ ರಿಖಿ ಅವರ ವೈವಾಹಿಕ ಜೀವನ ಮತ್ತೊಮ್ಮೆ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ಇಬ್ಬರೂ ಬೇರೆಯಾಗಿರುವುದಾಗಿ ಘೋಷಿಸಿಕೊಂಡಿದ್ದರು. ಆದರೆ, ಇದೀಗ ‘ಬಿಗ್ ಬಾಸ್ 20’ ಶೋನಲ್ಲಿ ಸ್ಪರ್ಧಿಯಾಗಿರುವ ಇಶಾ ರಿಖಿ, ಬಾದ್‌ಶಾ ತಮಗೆ ಮೋಸ ಮಾಡಿದ್ದರೇ ಎನ್ನುವ ಅನುಮಾನವನ್ನು ಹುಟ್ಟುಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಸಹ ಸ್ಪರ್ಧಿಗಳೊಂದಿಗೆ ಮಾತನಾಡುತ್ತಾ ಇಶಾ ರಿಖಿ ಆಡಿದ ಮಾತುಗಳು, ಬಾದ್‌ಶಾ ತಮಗೆ ದ್ರೋಹ ಎಸಗಿದ್ದಾರೆ ಎಂಬುದರ ಪರೋಕ್ಷ ಸುಳಿವು ನೀಡುವಂತಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿ ಗುಲ್ಲು ಅವರು ತಮ್ಮನ್ನು ರೆಡ್ ಫ್ಲ್ಯಾಗ್ ಎಂದು ಕರೆದಾಗ, ‘ನನ್ನ ಜೀವನದಲ್ಲಿ ಅತ್ಯಂತ ಒಳ್ಳೆಯ ರೆಡ್ ಫ್ಲ್ಯಾಗ್ ಅನ್ನು ನಾನು ಹತ್ತಿರದಿಂದ ನೋಡಿದ್ದೇನೆ’ ಎಂದು ಇಶಾ ರಿಖಿ ಪರೋಕ್ಷವಾಗಿ ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಮುಂದುವರಿದು ಸ್ಪರ್ಧಿಗಳನ್ನು ಪ್ರಶ್ನಿಸಿದ ಇಶಾ, ‘ಇತರರಿಗೆ ಮೋಸ ಮಾಡುವ ವ್ಯಕ್ತಿಗಳಿಗೆ ತಪ್ಪಿತಸ್ಥ ಭಾವನೆ ಕಾಡುತ್ತದೆಯೇ? ಅದರಲ್ಲೂ ಪ್ಲೇಬಾಯ್ ಮಾದರಿಯ ಪುರುಷರಿಗೆ ತಾವು ಮಾಡಿದ್ದು ತಪ್ಪು ಎಂಬ ಅರಿವಾಗುತ್ತದೆಯೇ?’ ಎಂದು ಕೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದಂತೆ, ಇಶಾ ರಿಖಿ ಪರೋಕ್ಷವಾಗಿ ಬಾದ್‌ಶಾ ಅವರನ್ನೇ ಪ್ಲೇಬಾಯ್ ಎಂದು ಕರೆದಿದ್ದಾರೆ ಹಾಗೂ ಬಾದ್‌ಶಾ ಮೋಸ ಮಾಡಿದ್ದರಿಂದಲೇ ಈ ಸಂಬಂಧ ಮುರಿದುಬಿದ್ದಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. 2026ರ ಮಾರ್ಚ್‌ನಲ್ಲಿ ಬಾದ್‌ಶಾ ಹಾಗೂ ಇಶಾ ರಿಖಿ ಅವರ ರಹಸ್ಯ ಮದುವೆಯ ಫೋಟೋಗಳು ವೈರಲ್ ಆಗಿದ್ದವು. ಆದರೆ, ಈ ಮದುವೆ ಹೆಚ್ಚು ದಿನ ಬಾಳಲಿಲ್ಲ. ಇದೀಗ ಇಶಾ ರಿಖಿ ಅವರ ಈ ಹೇಳಿಕೆಗಳು ಬಾಲಿವುಡ್ ಹಾಗೂ ಪಂಜಾಬಿ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ.

ಇದನ್ನೂ ಓದಿ: ಬಾದ್​ಶಾ -ಇಶಾ ರಿಖಿ ದಾಂಪತ್ಯ ಅಂತ್ಯ; ಅಧಿಕೃತವಾಗಿ ಘೋಷಣೆ ಮಾಡಿದ ರಾಪರ್

ಬಿಗ್ ಬಾಸ್ ಮೊದಲ ಸಂಚಿಕೆಯಲ್ಲಿ ತಮ್ಮ ವಿಚ್ಛೇದನದ ಬಗ್ಗೆ ಮಾತನಾಡಿದ್ದ ಇಶಾ, ‘ನಾನು ಅವರನ್ನು ಸಂಪೂರ್ಣ ನಂಬಿಕಸ್ಥ ವ್ಯಕ್ತಿ ಎಂದುಕೊಂಡಿದ್ದೆ. ಮದುವೆಯಾಗಿ ನೆಮ್ಮದಿಯಿಂದ ಇರಲು ಸಾಕಷ್ಟು ಪ್ರಯತ್ನಿಸಿದೆ. ಆದರೆ, ಒಮ್ಮೆ ನಂಬಿಕೆ ಮುರಿದುಬಿದ್ದಾಗ ನಾವೇ ನಮಗೇ ಪ್ರಶ್ನೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತದೆ. ಈ ಘಟನೆ ನನ್ನನ್ನು ಸಂಪೂರ್ಣವಾಗಿ ಒಡೆದುಹಾಕಿದೆ. ನನ್ನದೇ ಪ್ರೇಮಕಥೆಯಲ್ಲಿ ನಾನು ಯಾವಾಗ ಸೈಡ್ ಕ್ಯಾರೆಕ್ಟರ್ ಆದೆ ಎನ್ನುವುದೇ ನನಗೆ ತಿಳಿಯಲಿಲ್ಲ’ ಎಂದು ಭಾವುಕರಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ