ಪ್ರತಿ ಕಿಸ್ಗೆ ಹೆಚ್ಚುವರಿ 20 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಾರಾ ನಟಿ ರಶ್ಮಿಕಾ ಮಂದಣ್ಣ?
ಕೆಲವೇ ದಿನಗಳ ಹಿಂದೆ ‘ಅನಿಮಲ್’ ಸಿನಿಮಾದ ಹೊಸ ಹಾಡು ಬಿಡುಗಡೆ ಆಯಿತು. ಅದರ ಪೋಸ್ಟರ್ನಲ್ಲಿ ಹೆಚ್ಚು ಹೈಲೈಟ್ ಆಗಿದ್ದೇ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಅವರ ಕಿಸ್. ಈ ಹಾಡಿನಲ್ಲಿ ಅವರಿಬ್ಬರು ಹಲವು ಬಾರಿ ಲಿಪ್ ಲಾಕ್ ಮಾಡಿಕೊಂಡಿದ್ದಾರೆ. ಹಾಡು ಬಿಡುಗಡೆ ಆದ ಬಳಿಕ ಹೀಗೊಂದು ಗಾಸಿಪ್ ಹರಡಿದೆ.
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬಾಲಿವುಡ್ನಲ್ಲಿ ಒಳ್ಳೊಳ್ಳೆಯ ಆಫರ್ ಪಡೆಯುತ್ತಿದ್ದಾರೆ. ಅದಕ್ಕೆ ತಕ್ಕಂತೆ ಅವರಿಗೆ ಕೋಟ್ಯಂತರ ರೂಪಾಯಿ ಸಂಭಾವನೆ ಕೂಡ ಸಿಗುತ್ತಿದೆ. ಅಮಿತಾಭ್ ಬಚ್ಚನ್, ಸಿದ್ದಾರ್ಥ್ ಮಲ್ಹೋತ್ರಾ ಅವರಂತಹ ಸ್ಟಾರ್ ಹೀರೋಗಳ ಜೊತೆ ನಟಿಸಿ ರಶ್ಮಿಕಾ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ರಣಬೀರ್ ಕಪೂರ್ (Ranbir Kapoor) ಜೊತೆ ನಟಿಸಿರುವ ‘ಅನಿಮಲ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಅವರು ಲಿಪ್ ಲಾಕ್ (Lip Lock) ಮಾಡಿದ್ದಾರೆ. ಈ ದೃಶ್ಯಗಳಿಗೆ ರಶ್ಮಿಕಾ ಹೆಚ್ಚುವರಿ ಹಣ ಪಡೆದಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಆದರೆ ಅದನ್ನು ರಶ್ಮಿಕಾ ಮಂದಣ್ಣ ಅವರ ಆಪ್ತರು ತಳ್ಳಿ ಹಾಕಿದ್ದಾರೆ ಎಂದು ಕೂಡ ಮಾಧ್ಯಮಗಳಲ್ಲಿ ವರದಿ ಆಗಿದೆ.
ಕೆಲವೇ ದಿನಗಳ ಹಿಂದೆ ‘ಅನಿಮಲ್’ ಸಿನಿಮಾದ ಹೊಸ ಹಾಡು ಬಿಡುಗಡೆ ಆಯಿತು. ಅದರ ಪೋಸ್ಟರ್ನಲ್ಲಿ ಹೆಚ್ಚು ಹೈಲೈಟ್ ಆಗಿದ್ದೇ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಅವರ ಕಿಸ್. ಈ ಹಾಡಿನಲ್ಲಿ ಅವರಿಬ್ಬರು ಹಲವು ಬಾರಿ ಲಿಪ್ ಲಾಕ್ ಮಾಡಿಕೊಂಡಿದ್ದಾರೆ. ಪ್ರತಿ ಲಿಪ್ ಕಿಸ್ಗೆ ರಶ್ಮಿಕಾ ಅವರು 20 ಲಕ್ಷ ರೂಪಾಯಿ ಹೆಚ್ಚುವರಿ ಹಣ ಪಡೆಯುತ್ತಾರೆ ಎಂದು ಗಾಸಿಪ್ ಹಬ್ಬಿಸಲಾಗಿದೆ. ಇದನ್ನು ಕೇಳಿ ಅಭಿಮಾನಿಗಳು ಶಾಕ್ ಆಗಿದ್ದರು. ಆದರೆ ಆ ರೀತಿ ಯಾವುದೇ ಹೆಚ್ಚುವರಿ ಹಣವನ್ನು ರಶ್ಮಿಕಾ ಅವರು ಪಡೆಯುತ್ತಿಲ್ಲ ಎಂದು ಆಪ್ತ ಮೂಲಗಳು ಸ್ಪಷ್ಟನೆ ನೀಡಿರುವುದಾಗಿ ತೆಲುಗಿನ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದೆ.
ಸಂದೀಪ್ ರೆಡ್ಡಿ ವಂಗಾ ಅವರು ‘ಅನಿಮಲ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಎರಡು ಶೇಡ್ನ ಪಾತ್ರದಲ್ಲಿ ರಣಬೀರ್ ಕಪೂರ್ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅನಿಲ್ ಕಪೂರ್, ಸನ್ನಿ ಡಿಯೋಲ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಎಲ್ಲ ಕಾರಣಕ್ಕಾಗಿ ‘ಅನಿಮಲ್’ ಸಿನಿಮಾದ ಮೇಲೆ ನಿರೀಕ್ಷೆ ಮೂಡಿದೆ.
ಮತ್ತೊಂದು ಬಾಲಿವುಡ್ ಸಿನಿಮಾಗೆ ಶೂಟಿಂಗ್ ಶುರು ಮಾಡಿದ ರಶ್ಮಿಕಾ ಮಂದಣ್ಣ
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಅನಿಮಲ್’ ಚಿತ್ರ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಯಿತು. ಡಿಸೆಂಬರ್ 1ರಂದು ಈ ಸಿನಿಮಾ ರಿಲೀಸ್ ಆಗಲಿದೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’ ಸಿನಿಮಾಗಳ ಸಕ್ಸಸ್ ನಂತರ ಸಂದೀಪ್ ರೆಡ್ಡಿ ವಂಗಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿರುವುದರಿಂದ ಸಜಹವಾಗಿಯೇ ಹೈಪ್ ಕ್ರಿಯೇಟ್ ಆಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.