ದಿಶಾ ಪಟಾನಿ ಹಾಟ್​ ಅವತಾರ ನೋಡಿ ಹಾರಿ ಹೋಯ್ತು ಪಡ್ಡೆ ಹುಡುಗರ ನಿದ್ದೆ

ಸಖತ್​ ಹಾಟ್​ ಅವತಾರದಲ್ಲಿ ದಿಶಾ ಪಟಾನಿ ಫೋಟೋಶೂಟ್​ ಮಾಡಿಸಿದ್ದಾರೆ. ಅದರ ಕೆಲವು ಫೋಟೋಗಳನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಸುರಿಯುವ ಮಳೆಯಲ್ಲಿ ಕುಳಿತು ಅವರು ಪೋಸ್​ ನೀಡಿದ್ದಾರೆ. ಕೆಲವೇ ಗಂಟೆಗಳಲ್ಲಿ ಈ ಫೋಟೋವನ್ನು 9 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಮಾಡಿದ್ದಾರೆ. 6 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ.

ದಿಶಾ ಪಟಾನಿ ಹಾಟ್​ ಅವತಾರ ನೋಡಿ ಹಾರಿ ಹೋಯ್ತು ಪಡ್ಡೆ ಹುಡುಗರ ನಿದ್ದೆ
ದಿಶಾ ಪಟಾನಿ
Follow us
ಮದನ್​ ಕುಮಾರ್​
|

Updated on: Jan 15, 2024 | 6:30 PM

ಬಾಲಿವುಡ್​ನ ಖ್ಯಾತ ನಟಿ ದಿಶಾ ಪಟಾನಿ (Disha Patani) ಅವರು ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಬೋಲ್ಡ್​ ಆಗಿ ಪೋಸ್​ ನೀಡುವಲ್ಲಿ ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಪ್ರತಿ ಬಾರಿಯೂ ಅವರು ಬಿಕಿನಿ ಧರಿಸಿ ಫೋಟೋಶೂಟ್​ (Disha Patani Photoshoot) ಮಾಡಿಸಿದಾಗ ಗ್ಲಾಮರ್​ ಪ್ರಮಾಣ ಹೆಚ್ಚಾಗುತ್ತಲೇ ಹೋಗುತ್ತದೆ. ಅನೇಕ ಬ್ರ್ಯಾಂಡ್​ಗಳಿಗೆ ದಿಶಾ ಪಟಾನಿ ಪ್ರಚಾರ ರಾಯಭಾರಿ ಆಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸಿದ್ದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಸಂಭಾವನೆ ಬರುತ್ತದೆ. ಸೋಶಿಯಲ್​ ಮೀಡಿಯಾದಲ್ಲಿ ದಿಶಾ ಪಟಾನಿ ಅವರು ಕೆಲವು ಹೊಸ ಫೋಟೋಗಳನ್ನು (Disha Patani Photos) ಹಂಚಿಕೊಂಡಿದ್ದಾರೆ. ಅವುಗಳನ್ನು ಕಂಡು ಪಡ್ಡೆ ಹುಡುಗರ ನಿದ್ದೆ ಹಾರಿ ಹೋಗಿದೆ.

ಸೋಶಿಯಲ್​ ಮೀಡಿಯಾದಲ್ಲಿ ದಿಶಾ ಪಟಾನಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ವಿದೇಶ ಪ್ರವಾಸ ಮಾಡುತ್ತಾರೆ. ತಮ್ಮ ದಿನಚರಿ, ಪ್ರವಾಸ, ಸಿನಿಮಾ, ವರ್ಕೌಟ್​, ಡಯೆಟ್​ ಮುಂತಾದ ವಿಚಾರಗಳ ಬಗ್ಗೆ ಇನ್​ಸ್ಟಾಗ್ರಾಮ್​ ಮೂಲಕ ಅಪ್​ಡೇಟ್​ ನೀಡುತ್ತಾರೆ. ಅವರು ಹಂಚಿಕೊಳ್ಳುವ ಎಲ್ಲ ಫೋಟೋಗಳು ಮಿಲಿಯನ್​ಗಟ್ಟಲೆ ಲೈಕ್ಸ್​ ಪಡೆಯುತ್ತವೆ. ಅಭಿಮಾನಿಗಳ ಪೇಜ್​ಗಳಲ್ಲಿ ದಿಶಾ ಪಟಾನಿ ಫೋಟೋಗಳು ವೈರಲ್​ ಆಗುತ್ತವೆ.

ಸಖತ್​ ಹಾಟ್​ ಅವತಾರದಲ್ಲಿ ದಿಶಾ ಪಟಾನಿ ಫೋಟೋಶೂಟ್​ ಮಾಡಿಸಿದ್ದಾರೆ. ಅದರ ಕೆಲವು ಫೋಟೋಗಳನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಸುರಿಯುವ ಮಳೆಯಲ್ಲಿ ಕುಳಿತು ಅವರು ಪೋಸ್​ ನೀಡಿದ್ದಾರೆ. ಕೆಲವೇ ಗಂಟೆಗಳಲ್ಲಿ ಈ ಫೋಟೋವನ್ನು 9 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಮಾಡಿದ್ದಾರೆ. 6 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ದಿಶಾ ಅಭಿಮಾನಿಗಳು ಈ ಫೋಟೋಗಳನ್ನು ತುಂಬ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ಥೈಲ್ಯಾಂಡ್​ ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಪೋಸ್​ ನೀಡಿದ ದಿಶಾ ಪಟಾನಿ

ಅನೇಕ ಸಿನಿಮಾಗಳಲ್ಲಿ ದಿಶಾ ಪಟಾನಿ ನಟಿಸುತ್ತಿದ್ದಾರೆ. ಪ್ರಭಾಸ್ ಜೊತೆ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ತಮಿಳಿನಲ್ಲಿ ಸೂರ್ಯ ಜೊತೆ ‘ಕಂಗುವಾ’ ಸಿನಿಮಾದಲ್ಲೂ ದಿಶಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಜೀವನದ ಕಾರಣದಿಂದಲೂ ದಿಶಾ ಪಟಾನಿ ಆಗಾಗ ಸುದ್ದಿ ಆಗುತ್ತಾರೆ. ಈ ಮೊದಲು ಅವರು ನಟ ಟೈಗರ್​ ಶ್ರಾಫ್​ ಜೊತೆ ಡೇಟಿಂಗ್​ ಮಾಡುತ್ತಿದ್ದರು. ಈಗ ಅವರಿಬ್ಬರು ದೂರ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ