AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂರ್ಯ’ ಚಿತ್ರದ ವಿವಾದ: ಟ್ರೇಲರ್ ಹಾಗೂ ಸಿನಿಮಾದಲ್ಲಿ ಡಿಸ್ಕ್ಲೇಮರ್ ಸೇರಿಸಲು ನಿರ್ಮಾಪಕರ ಒಪ್ಪಿಗೆ

ಸನ್ನಿ ಡಿಯೋಲ್ ಅಭಿನಯಿಸಿರುವ ‘ಸೂರ್ಯ’ ಸಿನಿಮಾದ ಬಗ್ಗೆ ಕೆಲವು ವೈದ್ಯರು ತಕರಾರು ತೆಗೆದಿದ್ದರು. ಈ ಸಿನಿಮಾದಲ್ಲಿ ವೈದ್ಯರ ಬಗ್ಗೆ ತಪ್ಪಾಗಿ ತೋರಿಸಲಾಗುತ್ತಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲು ಏರಲಾಗಿತ್ತು. ಈಗ ಟ್ರೇಲರ್ ಹಾಗೂ ಸಿನಿಮಾದಲ್ಲಿ ಡಿಸ್ಕ್ಲೇಮರ್ ಸೇರಿಸಲು ಚಿತ್ರದ ನಿರ್ಮಾಪಕರು ಒಪ್ಪಿಕೊಂಡಿದ್ದಾರೆ.

‘ಸೂರ್ಯ’ ಚಿತ್ರದ ವಿವಾದ: ಟ್ರೇಲರ್ ಹಾಗೂ ಸಿನಿಮಾದಲ್ಲಿ ಡಿಸ್ಕ್ಲೇಮರ್ ಸೇರಿಸಲು ನಿರ್ಮಾಪಕರ ಒಪ್ಪಿಗೆ
Sunny Deol Image Credit source: ANI
ಮದನ್​ ಕುಮಾರ್​
|

Updated on: Nov 18, 2026 | 5:27 PM

Share

ಬಾಲಿವುಡ್ ನಟ ಸನ್ನಿ ಡಿಯೋಲ್ ಮುಖ್ಯಭೂಮಿಕೆಯಲ್ಲಿರುವ ‘ಸೂರ್ಯ: ಅಂತ್ ಸೆ ಆರಂಭ್ ತಕ್’ ಚಿತ್ರದ ಟ್ರೇಲರ್ ಮತ್ತು ಸಿನಿಮಾದಲ್ಲಿ ಕಡ್ಡಾಯವಾಗಿ ಡಿಸ್ಕ್ಲೇಮರ್ ಸೇರಿಸುವುದಾಗಿ ಚಿತ್ರದ ನಿರ್ಮಾಪಕರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ವೈದ್ಯ ವೃತ್ತಿಯಲ್ಲಿರುವವರ ಬಗ್ಗೆ ಚಿತ್ರದಲ್ಲಿ ತಪ್ಪಾಗಿ ಚಿತ್ರಿಸಲಾಗಿದೆ ಎಂದು ವೈದ್ಯರ ಗುಂಪೊಂದು ವಿರೋಧ ವ್ಯಕ್ತಪಡಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದೆ.

ವೈದ್ಯ ನಿಶಾಂತ್ ಸೋನಿ ಹಾಗೂ ಇತರೆ ವೈದ್ಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರ ಪೀಠ, ನಿರ್ಮಾಪಕರ ಪರ ವಕೀಲರ ಒಪ್ಪಿಗೆಯನ್ನು ದಾಖಲಿಸಿಕೊಂಡು ಅರ್ಜಿಯನ್ನು ವಿಲೇವಾರಿ ಮಾಡಿದೆ. ಚಿತ್ರದಲ್ಲಿ ವೈದ್ಯರನ್ನು ನಕಾರಾತ್ಮಕವಾಗಿ ಬಿಂಬಿಸುವುದು ಆರೋಗ್ಯ ಕಾರ್ಯಕರ್ತರ ಸುರಕ್ಷತೆಗೆ ಧಕ್ಕೆ ತರಬಹುದು ಮತ್ತು ರೋಗಿಗಳ ಸಂಬಂಧಿಕರಿಂದ ಹಲ್ಲೆಗಳು ಹೆಚ್ಚಾಗಲು ಕಾರಣವಾಗಬಹುದು ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದರು.

ಸಿನಿಮಾದ ನಿರ್ಮಾಪಕರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಜೀವ್ ನಾಯರ್, ಈ ಚಿತ್ರವು ಮಲಯಾಳಂನ ಸೂಪರ್‌ಹಿಟ್ ‘ಜೋಸೆಫ್’ ಸಿನಿಮಾದ ರಿಮೇಕ್ ಆಗಿದ್ದು, ಮೂಲ ಚಿತ್ರಕ್ಕೆ ಯಾವುದೇ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ತಡೆ ಸಿಕ್ಕಿರಲಿಲ್ಲ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೆ, ಚಿತ್ರವು ಕಾಲ್ಪನಿಕ ಕಥೆಯಾಗಿದ್ದು, ಇದು ಮಲಯಾಳಂ ಚಿತ್ರದ ರಿಮೇಕ್ ಎಂಬ ಸ್ಪಷ್ಟನೆಯನ್ನು ಟ್ರೇಲರ್ ಹಾಗೂ ಸಿನಿಮಾದಲ್ಲಿ ಸೇರಿಸಲು ನಿರ್ಮಾಪಕರು ಸಿದ್ಧರಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಸನ್ನಿ ಡಿಯೋಲ್ ನಟನೆಯ ‘ಸೂರ್ಯ’ ಸಿನಿಮಾ ಬಿಡುಗಡೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ

ಮೂಲ ಚಿತ್ರಕ್ಕೆ ಯಾವುದೇ ನಿರ್ಬಂಧವಿಲ್ಲದಿರುವುದು ಮತ್ತು ನಿರ್ಮಾಪಕರು ಡಿಸ್ಕ್ಲೇಮರ್ ಸೇರಿಸಲು ಒಪ್ಪಿಗೆ ನೀಡಿರುವುದರಿಂದ, ಈ ವಿಷಯದಲ್ಲಿ ಹೆಚ್ಚಿನ ವಿಚಾರಣೆ ಅವಶ್ಯಕತೆಯಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು. ಎಂ. ಪದ್ಮಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಸನ್ನಿ ಡಿಯೋಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಇದೇ ಸಿನಿಮಾ ‘ರವಿ ಬೋಪಣ್ಣ’ ಹೆಸರಿನಲ್ಲಿ ರಿಮೇಕ್ ಆಗಿ 2022ರಲ್ಲಿ ರಿಲೀಸ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
"ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದವರು ಈಗ ಕೊಡ್ತಾರಾ?"
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ