AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್ ಸಿಂಗ್ ಎಕ್ಸಿಟ್ ಎಫೆಕ್ಟ್: ಅಧಿಕೃತವಾಗಿ ‘ಡಾನ್ 3’ ಕೈಬಿಟ್ಟ ಫರ್ಹಾನ್ ಅಖ್ತರ್?

ಡಾನ್ 3 ಸಿನಿಮಾ ಸ್ಥಗಿತಗೊಂಡಿದ್ದು, ನಟ ರಣವೀರ್ ಸಿಂಗ್ ನಿರ್ಗಮನದಿಂದಾಗಿ ಫರ್ಹಾನ್ ಅಖ್ತರ್ ಅವರ ನಿರ್ಮಾಣ ಸಂಸ್ಥೆ 45 ಕೋಟಿ ರೂಪಾಯಿ ಪರಿಹಾರ ಕೋರಿ ನೋಟಿಸ್ ನೀಡಿದೆ. ಈ ನಡುವೆ ಫರ್ಹಾನ್, ಖ್ಯಾತ ಸಂಗೀತ ಮಾಂತ್ರಿಕ ಆರ್.ಡಿ. ಬರ್ಮನ್ ಬಯೋಪಿಕ್‌ಗೆ ಸಿದ್ಧರಾಗುತ್ತಿದ್ದು, ನೀರಜ್ ಪಾಂಡೆ ನಿರ್ದೇಶನದಲ್ಲಿ 2026ರ ವೇಳೆಗೆ ಶೂಟಿಂಗ್ ಆರಂಭವಾಗಲಿದೆ. ಡಾನ್ 3 ಭವಿಷ್ಯ ಸದ್ಯಕ್ಕೆ ಅನಿಶ್ಚಿತವಾಗಿದೆ.

ರಣವೀರ್ ಸಿಂಗ್ ಎಕ್ಸಿಟ್ ಎಫೆಕ್ಟ್: ಅಧಿಕೃತವಾಗಿ ‘ಡಾನ್ 3’ ಕೈಬಿಟ್ಟ ಫರ್ಹಾನ್ ಅಖ್ತರ್?
ಫರ್ಹಾನ್
ರಾಜೇಶ್ ದುಗ್ಗುಮನೆ
|

Updated on: Jun 12, 2026 | 9:06 AM

Share

ಬಾಲಿವುಡ್‌ನ ಬಹುನಿರೀಕ್ಷಿತ ಆಕ್ಷನ್ ಫ್ರಾಂಚೈಸಿ ‘ಡಾನ್ 3’ ಸಿನಿಮಾ ಶೂಟಿಂಗ್ ಆರಂಭಕ್ಕೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಿಂದ ನಟ ರಣವೀರ್ ಸಿಂಗ್ ಹೊರನಡೆದ ಮೇಲೆ ‘ಡಾನ್ 3’ ಸದ್ಯಕ್ಕಂತೂ ಸೆಟ್ಟೇರುವುದು ಅನುಮಾನ ಎಂಬ ಮಾತು ಕೇಳಿಬರುತ್ತಿತ್ತು. ಆ ಮಾತು ಈಗ ನಿಜವಾಗುವ ಸಮಯ ಬಂದಿದ್ದು, ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಈ ಪ್ರಾಜೆಕ್ಟ್ ಅನ್ನು ಸದ್ಯಕ್ಕೆ ಬದಿಗೆ ತಳ್ಳಿದ್ದಾರೆ. ಇದರ ಬೆನ್ನಲ್ಲೇ ಅವರು ಹೊಸದೊಂದು ಬಿಗ್ ಪ್ರಾಜೆಕ್ಟ್‌ಗೆ ಕೈಹಾಕಿದ್ದಾರೆ.

ಹೊಸ ವರ್ದಿಗಳ ಪ್ರಕಾರ ಫರ್ಹಾನ್ ಅಖ್ತರ್ ಅವರು ಭಾರತೀಯ ಚಿತ್ರರಂಗದ ದಂತಕಥೆ, ಖ್ಯಾತ ಸಂಗೀತ ಮಾಂತ್ರಿಕ ಆರ್.ಡಿ. ಬರ್ಮನ್ ಅವರ ಬಯೋಪಿಕ್‌ನಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ‘ಎಂ.ಎಸ್. ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ’ ಖ್ಯಾತಿಯ ಯಶಸ್ವಿ ನಿರ್ದೇಶಕ ನೀರಜ್ ಪಾಂಡೆ ಈ ಚಿತ್ರವನ್ನು ನಿರ್ದೇಶಿಸಲಿದ್ದು, ಸ್ಕ್ರಿಪ್ಟ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. ಆರ್.ಡಿ. ಬರ್ಮನ್ ಅವರ ಪಾತ್ರಕ್ಕೆ ಜೀವ ತುಂಬಲು ಫರ್ಹಾನ್ ಅಖ್ತರ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದ್ದು, 2026ರ ಕೊನೆಯ ವೇಳೆಗೆ ಈ ಚಿತ್ರದ ಶೂಟಿಂಗ್ ಆರಂಭವಾಗುವ ಸಾಧ್ಯತೆಯಿದೆ.

ರಣವೀರ್ ಸಿಂಗ್ ಹೊಸ ‘ಡಾನ್’ ಆಗಲಿದ್ದಾರೆ ಎಂದು ಘೋಷಿಸಿದಾಗ ಅಭಿಮಾನಿಗಳಲ್ಲಿ ಭಾರಿ ಕುತೂಹಲವಿತ್ತು. ಆದರೆ, ಸ್ಕ್ರಿಪ್ಟ್ ಫೈನಲ್ ಆಗದ ಕಾರಣ ಮತ್ತು ಶೂಟಿಂಗ್ ಪದೇ ಪದೇ ತಡವಾಗುತ್ತಿದ್ದರಿಂದ ಬೇಸತ್ತ ರಣವೀರ್ ಚಿತ್ರದಿಂದ ಹೊರನಡೆದಿದ್ದರು.

ಇದನ್ನೂ ಓದಿ: ರಣ್ವೀರ್ ಸಿಂಗ್ ಕೈಕೊಟ್ಟ ಬಳಿಕ ‘ಡಾನ್ 3’ಗೆ ಮತ್ತೊಬ್ಬ ಸ್ಟಾರ್

ಈ ದಿಢೀರ್ ಎಕ್ಸಿಟ್‌ನಿಂದ ತಮಗೆ ಭಾರಿ ಆರ್ಥಿಕ ನಷ್ಟವಾಗಿದೆ ಎಂದು ಆರೋಪಿಸಿ ಫರ್ಹಾನ್ ಅಖ್ತರ್ ಅವರ ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಸಂಸ್ಥೆಯು ರಣವೀರ್ ಸಿಂಗ್ ವಿರುದ್ಧ ಬರೋಬ್ಬರಿ 45 ಕೋಟಿ ರೂ. ಪರಿಹಾರ ಕೋರಿ ನೋಟಿಸ್ ನೀಡಿದೆ. ಈ ದೊಡ್ಡ ಕಾನೂನು ಸಮರ ಹಾಗೂ ವಿವಾದಗಳ ಕಾರಣದಿಂದಾಗಿ ‘ಡಾನ್ 3’ ಸಿನಿಮಾ ಸದ್ಯಕ್ಕೆ ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಂತಾಗಿದೆ. ಈ ಸಿನಿಮಾಗೆ ಹೃತಿಕ್ ಎಂಟ್ರಿ ಆಗುತ್ತದೆ ಎಂದಿದೆಯಾದರೂ ಅದು ಇನ್ನೂ ಫೈನಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!