AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್’ ಸಿನಿಮಾ ನಿರ್ದೇಶಕ ಚಂದ್ರ ಬರೋಟ್ ನಿಧನ; ಬಾಲಿವುಡ್ ಸಂತಾಪ

1978ರಲ್ಲಿ ತೆರೆಕಂಡ ‘ಡಾನ್’ ಸಿನಿಮಾಗೆ ಚಂದ್ರ ಬರೋಟ್ ನಿರ್ದೇಶನ ಮಾಡಿ ಯಶಸ್ಸು ಕಂಡಿದ್ದರು. ಇಂದು (ಜುಲೈ 20) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಂದ್ರ ಬರೋಟ್ ನಿಧನರಾದ ಸುದ್ದಿ ತಿಳಿದ ಬಳಿಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

‘ಡಾನ್’ ಸಿನಿಮಾ ನಿರ್ದೇಶಕ ಚಂದ್ರ ಬರೋಟ್ ನಿಧನ; ಬಾಲಿವುಡ್ ಸಂತಾಪ
Chandra Barot, Amitabh Bachchan
ಮದನ್​ ಕುಮಾರ್​
|

Updated on: Jul 20, 2025 | 1:32 PM

Share

ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಚಂದ್ರ ಬರೋಟ್ (Chandra Barot) ಅವರು ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಹಿಂದಿಯಲ್ಲಿ ‘ಡಾನ್’ ಸಿನಿಮಾ (Don Movie) ನಿರ್ದೇಶನ ಮಾಡುವ ಮೂಲಕ ಚಂದ್ರ ಬರೋಟ್ ಅವರು ಅಪಾರ ಖ್ಯಾತಿ ಗಳಿಸಿದ್ದರು. ಮುಂಬೈನ ಬಾಂದ್ರಾದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಚಂದ್ರ ಬರೋಟ್ ಅವರ ನಿಧನಕ್ಕೆ ಭಾರತೀಯ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಚಂದ್ರ ಬರೋಟ್ ಅವರ ನಿಧನದ (Chandra Barot Death) ಸುದ್ದಿಯನ್ನು ಕುಟುಂಬದವರು ಖಚಿತಪಡಿಸಿದ್ದಾರೆ.

ಹಲವು ವರ್ಷಗಳಿಂದ ಚಂದ್ರ ಬರೋಟ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಹಲವು ಬಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಅವರು ಗುರು ನಾನಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ನಿಧನರಾಗಿದ್ದಾರೆ. ಈ ಸುದ್ದಿ ತಿಳಿದು ಹಲವು ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಚಂದ್ರ ಬರೋಟ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಚಂದ್ರ ಬರೋಟ್ ನಿರ್ದೇಶನ ಮಾಡಿದ್ದ ‘ಡಾನ್’ ಸಿನಿಮಾ 1978ರಲ್ಲಿ ಬಿಡುಗಡೆ ಆಗಿತ್ತು. ಅಮಿತಾಭ್ ಬಚ್ಚನ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ನಂತರದ ಪೀಳಿಗೆಯ ಅನೇಕ ನಟರು ಹಾಗೂ ನಿರ್ದೇಶಕರ ಮೇಲೆ ಆ ಸಿನಿಮಾ ಪರಿಣಾಮ ಬೀರಿತು. ಅದು ಚಂದ್ರ ಬರೋಟ್ ನಿರ್ದೇಶನ ಮಾಡಿದ್ದ ಮೊದಲ ಸಿನಿಮಾ ಆಗಿತ್ತು. ಚೊಚ್ಚಲ ನಿರ್ದೇಶನದ ಸಿನಿಮಾದಲ್ಲೇ ಅವರು ಗಮನ ಸೆಳೆದಿದ್ದರು.

‘ಡಾನ್’ ಯಶಸ್ಸಿನ ಬಳಿಕ ಚಂದ್ರ ಬರೋಟ್ ಅವರು ಬೆಂಗಾಲಿ ಸಿನಿಮಾ ಮಾಡಿಯೂ ಯಶಸ್ಸು ಕಂಡರು. ಆದರೆ ಅವರು ಮಾಡಬೇಕು ಎಂದುಕೊಂಡಿದ್ದ ಕೆಲವು ಸಿನಿಮಾಗಳು ಪೂರ್ಣಗೊಳ್ಳಲೇ ಇಲ್ಲ. ಆ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಅಗಲಿದ ನಿರ್ದೇಶಕನಿಗೆ ಹಿಂದಿ ಚಿತ್ರರಂಗದ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ‘ಡಾನ್ 3’ ಕಥೆ ಕೇಳಲಿದ್ದಾರೆ ಶಾರುಖ್ ಖಾನ್​; ಯಶಸ್ವಿ ಫ್ರಾಂಚೈಸಿಯಲ್ಲಿ ಮೂಡಿ ಬರಲಿದೆ ಹೊಸ ಸಿನಿಮಾ?

ಈಗ ‘ಡಾನ್ 3’ ಸಿನಿಮಾಗೆ ಫರ್ಹಾನ್ ಅಖ್ತರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಚಂದ್ರ ಬರೋಟ್ ನಿಧನದ ಸುದ್ದಿ ತಿಳಿದು ಫರ್ಹಾನ್ ಅಖ್ತರ್ ಅವರು ಪ್ರತಿಕ್ರಿಯಿಸಿದ್ದಾರೆ. ‘ಡಾನ್ ಸಿನಿಮಾ ನಿರ್ದೇಶಕ ಚಂದ್ರ ಬರೋಟ್ ಇನ್ನಿಲ್ಲ ಎಂಬ ವಿಷಯ ತಿಳಿದು ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಫರ್ಹಾನ್ ಅಖ್ತರ್ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ