AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ದೃಶ್ಯಂ 3’; ಮೂರೇ ದಿನಕ್ಕೆ 272 ಕೋಟಿ ಕಲೆಕ್ಷನ್

ಬಾಲಿವುಡ್ ನಟ ಅಜಯ್ ದೇವಗನ್ ಅಭಿನಯದ 'ದೃಶ್ಯಂ 3' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನೂತನ ದಾಖಲೆ ಬರೆದಿದೆ. ಬಿಡುಗಡೆಯಾದ ಕೇವಲ ಮೂರು ದಿನಗಳಲ್ಲಿ ಭಾರತದಲ್ಲಿ 176.50 ಕೋಟಿ ರೂಪಾಯಿ ನೆಟ್ ಹಾಗೂ ಪ್ರಪಂಚದಾದ್ಯಂತ 272.80 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿ ಪ್ರಾಂಚೈಸಿಯ ಹಳೆಯ ದಾಖಲೆಗಳನ್ನು ಅಳಿಸಿಹಾಕಿದೆ.

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ದೃಶ್ಯಂ 3’; ಮೂರೇ ದಿನಕ್ಕೆ 272 ಕೋಟಿ ಕಲೆಕ್ಷನ್
ಅಜಯ್ ದೇವಗನ್ Image Credit source: Drishyam 3
ರಾಜೇಶ್ ದುಗ್ಗುಮನೆ
|

Updated on: Oct 05, 2026 | 10:43 AM

Share

ಮುಖ್ಯಾಂಶಗಳು

  • ದೊಡ್ಡ ಹಾದಿಯಲ್ಲಿ ವಿಜಯ್ ಸಲ್ಗಾಂವ್ಕರ್
  • ದಿನದಲ್ಲೇ 270 ಕೋಟಿ ದಾಟಿದ 'ದೃಶ್ಯಂ 3' ಕಲೆಕ್ಷನ್
  • ಹಳೆಯ ಎಲ್ಲಾ ದಾಖಲೆಗಳು ಉಡೀಸ್ 

ಬಾಲಿವುಡ್‌ ನಟ ಅಜಯ್ ದೇವಗನ್ ಅವರು ದಕ್ಷಿಣದ ಸಿನಿಮಾಗಳನ್ನು ರಿಮೇಕ್ ಮಾಡಿ ಯಶಸ್ಸು ಕಾಣುತ್ತಿದ್ದಾರೆ. ಅವರ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಪ್ರದರ್ಶನ ಆರಂಭಿಸಿ ಬಾಕ್ಸ್ ಆಫೀಸ್‌ನಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ನಟ ಅಜಯ್ ದೇವಗನ್ ಅವರ ವಿಜಯ್ ಸಲ್ಗಾಂವ್ಕರ್ ಪಾತ್ರವು ಮತ್ತೊಮ್ಮೆ ಪ್ರೇಕ್ಷಕರನ್ನು ಅಚ್ಚರಿಯ ತುದಿಗೆ ತಳ್ಳಿದೆ. ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ ಈ ಚಿತ್ರ ಜಾಗತಿಕವಾಗಿ ಅಬ್ಬರಿಸುತ್ತಿದೆ.

ಚಿತ್ರವು ಭಾರತದಲ್ಲಿ ಮೊದಲ ವಾರಾಂತ್ಯದಲ್ಲಿ ಬರೋಬ್ಬರಿ 176.50 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು ಗ್ರಾಸ್ ಕಲೆಕ್ಷನ್ 272.80 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಗಾಂಧಿ ಜಯಂತಿಯಂದು ಬಿಡುಗಡೆಯಾದ ಈ ಸಿನಿಮಾ ಇಂದೇ 300 ಕೋಟಿ ರೂಪಾಯಿ ಗಡಿ ದಾಟಲಿದೆ.

ಸ್ಯಾಕ್ನಿಲ್ಕ್ ವರದಿಯ ಪ್ರಕಾರ, ಸಿನಿಮಾ ಬಿಡುಗಡೆಯಾದ 3ನೇ ದಿನ ಭಾರತದಲ್ಲೇ 61 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಮೊದಲ ದಿನ 62 ಕೋಟಿ ರೂಪಾಯಿ, ಎರಡನೇ ದಿನ 53.50 ಕೋಟಿ ಹಾಗೂ ಮೂರನೇ ದಿನ 61 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಮೂಲಕ ‘ದೃಶ್ಯಂ 3’ ತನ್ನ ಹಿಂದಿನ ಎರಡೂ ಭಾಗಗಳ ಆರಂಭಿಕ ದಾಖಲೆಗಳನ್ನು ಧೂಳಿಪಟ ಮಾಡಿದೆ.

ಅಭಿಷೇಕ್ ಪಾಠಕ್ ನಿರ್ದೇಶನದ ಈ ಥ್ರಿಲ್ಲರ್ ಚಿತ್ರ ಮಲಯಾಳಂ ‘ದೃಶ್ಯಂ 3’ ಸಿನಿಮಾದ ರಿಮೇಕ್. ಆದರೆ, ಈ ಚಿತ್ರದಲ್ಲಿ ಕ್ಲೈಮ್ಯಾಕ್ಸ್ ಬದಲಿಸಲಾಗಿದೆಯಂತೆ. ಹಿಂದಿ ‘ದೃಶ್ಯಂ 3’ ಚಿತ್ರದಲ್ಲಿ ಅಜಯ್ ದೇವಗನ್ ಜೊತೆಗೆ ಶ್ರಿಯಾ ಶರಣ್, ಟಬು ಹಾಗೂ ಇಶಿತಾ ದತ್ತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಕಾಶ್ ರಾಜ್ ಹಾಗೂ ಜೈದೀಪ್ ಅಹ್ಲಾವತ್ ಅವರ ಹೊಸ ಪಾತ್ರಗಳು ಚಿತ್ರದ ರೋಚಕತೆಯನ್ನು ಇನ್ನಷ್ಟು ಹೆಚ್ಚಿಸಿವೆ.

ಇದನ್ನೂ ಓದಿ: ಮೊದಲ ದಿನ ದಾಖಲೆಯ ಗಳಿಕೆ ಕಂಡ ‘ದೃಶ್ಯಂ 3’; ಶತಕೋಟಿ ಜಸ್ಟ್ ಮಿಸ್

ಅಕ್ಟೋಬರ್ 2ರಂದು ತೆರೆಕಂಡ ‘ದೃಶ್ಯಂ 3’ ಸಿನಿಮಾ ಪ್ರೇಕ್ಷಕರಿಂದ ಸಿಗುತ್ತಿರುವ ಅಭೂತಪೂರ್ವ ಬೆಂಬಲದಿಂದಾಗಿ ಮುಂಬರುವ ದಿನಗಳಲ್ಲಿ ಬಾಕ್ಸ್ ಆಫೀಸ್‌ನ ಸಾಲು ಸಾಲು ಹಳೆಯ ದಾಖಲೆಗಳನ್ನು ಅಳಿಸಿಹಾಕುವ ಸೂಚನೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ