AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಬಿಡುಗಡೆಯಾಗಿ ಕಳೆಯಿತು ಮೂರು ದಿನ; ಈವರೆಗೆ ಶಾರುಖ್​ ಖಾನ್​ ಸಿನಿಮಾ ಗಳಿಸಿದ್ದೆಷ್ಟು?

‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾಗಳ ರೀತಿ ‘ಡಂಕಿ’ ಸಿನಿಮಾ ಕೂಡ ಅಬ್ಬರಿಸಬಹುದು ಎಂದು ಶಾರುಖ್​ ಖಾನ್​ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಮೂರು ದಿನಗಳು ಕಳೆದರೂ ಕೂಡ 100 ಕೋಟಿ ರೂಪಾಯಿ ಗಡಿ ಮುಟ್ಟಲು ‘ಡಂಕಿ’ ಸಿನಿಮಾಗೆ ಸಾಧ್ಯವಾಗಿಲ್ಲ.

‘ಡಂಕಿ’ ಬಿಡುಗಡೆಯಾಗಿ ಕಳೆಯಿತು ಮೂರು ದಿನ; ಈವರೆಗೆ ಶಾರುಖ್​ ಖಾನ್​ ಸಿನಿಮಾ ಗಳಿಸಿದ್ದೆಷ್ಟು?
‘ಡಂಕಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Dec 24, 2023 | 1:11 PM

Share

ಶಾರುಖ್​ ಖಾನ್​ ಅಭಿನಯದ ‘ಡಂಕಿ’ ಸಿನಿಮಾ (Dunki Movie) ಡಿಸೆಂಬರ್​ 21ರಂದು ಬಿಡುಗಡೆ ಆಯಿತು. ಈ ಸಿನಿಮಾದ ಮೇಲೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್​ ಮಾಡುವಲ್ಲಿ ‘ಡಂಕಿ’ ವಿಫಲವಾಗಿದೆ. ಇದು ಕ್ಲಾಸ್​ ಸಿನಿಮಾ ಆದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಮೊದಲ ದಿನ ಚಿತ್ರಮಂದಿರಕ್ಕೆ ಬಂದಿಲ್ಲ. ಫಸ್ಟ್​ ಡೇ ಸಿನಿಮಾ ನೋಡಿದವರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಚಿತ್ರದ ಕಲೆಕ್ಷನ್​ (Dunki Box Office Collection) ಸಾಧಾರಣವಾಗಿದೆ. ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಮೂರು ದಿನಗಳಲ್ಲಿ ಈ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಅಂದಾಜು 76 ಕೋಟಿ ರೂಪಾಯಿ ಆಗಿದೆ.

‘ಡಂಕಿ’ ಸಿನಿಮಾ ಮೊದಲ ದಿನ 30 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಎರಡನೇ ದಿನ 20 ಕೋಟಿ ರೂಪಾಯಿ ಹರಿದು ಬಂತು. ಮೂರನೇ ದಿನವಾದ ಶನಿವಾರ (ಡಿ.23) ಅಂದಾಜು 26 ಕೋಟಿ ರೂಪಾಯಿ ಕಮಾಯಿ ಆಗಿರುವ ಬಗ್ಗೆ ವರದಿ ಆಗಿದೆ. ಮೂರು ದಿನಕ್ಕೆ ಈ ಸಿನಿಮಾ 76 ಕೋಟಿ ರೂಪಾಯಿ ಗಳಿಸಿದ್ದು 100 ಕೋಟಿ ರೂ. ಕ್ಲಬ್​ ಸೇರಲು ಕಷ್ಟಪಡುತ್ತಿದೆ.

‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾಗಳ ಮೂಲಕ ಶಾರುಖ್​ ಖಾನ್​ ಅವರು ಗಲ್ಲಾಪೆಟ್ಟಿಗೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದರು. ಈ ವರ್ಷ ತೆರೆಕಂಡ ಆ ಎರಡೂ ಸಿನಿಮಾಗಳು ಜಾಗತಿಕ ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ್ದವು. ‘ಡಂಕಿ’ ಸಿನಿಮಾ ಕೂಡ ಅದೇ ರೀತಿ ಅಬ್ಬರಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ.

ಇದನ್ನೂ ಓದಿ: Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

ರಾಜ್​ಕುಮಾರ್​ ಹಿರಾನಿ ಅವರು ‘ಡಂಕಿ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಉತ್ತಮ ಭವಿಷ್ಯ ಕಟ್ಟಿಕೊಳ್ಳುವ ಸಲುವಾಗಿ ವಿದೇಶಕ್ಕೆ ಹೋಗಲು ಸಾಹಸ ಮಾಡುವ ಸ್ನೇಹಿತರ ಒಂದು ಗುಂಪಿನ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗಿದೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ತಾಪ್ಸಿ ಪನ್ನು ನಟಿಸಿದ್ದಾರೆ. ಬೊಮನ್​ ಇರಾನಿ, ವಿಕ್ಕಿ ಕೌಶಲ್​, ಅನಿಲ್​ ಗ್ರೋವರ್​, ವಿಕ್ರಮ ಕೊಚ್ಚರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು