ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?
‘ಡಂಕಿ’ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Dec 23, 2023 | 9:51 AM

ಶಾರುಖ್ ಖಾನ್ (Shah Rukh Khan) ಅವರು ‘ಡಂಕಿ’ ಸಿನಿಮಾದಲ್ಲಿ ಮಾಸ್ ಅವತಾರ ಬಿಟ್ಟು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಪರ್ಫಾರ್ಮೆನ್ಸ್ ತೋರಿಸುತ್ತಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನದ ಈ ಸಿನಿಮಾ ಎರಡನೇ ದಿನ (ಡಿಸೆಂಬರ್ 22) ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ ಎರಡು ದಿನಕ್ಕೆ 50 ಕೋಟಿ ರೂಪಾಯಿ ಆಗಿದೆ. ಈ ಚಿತ್ರ 300 ಕೋಟಿ ರೂಪಾಯಿ ಕ್ಲಬ್ ಸೇರೋದು ಅನುಮಾನ ಎನ್ನಲಾಗುತ್ತಿದೆ.

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ. ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಒಟ್ಟಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

‘ಡಂಕಿ’ ಸಿನಿಮಾ ಮೊದಲ ದಿನ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 19.20 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ವಿದೇಶದ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ವೀಕೆಂಡ್​ನಲ್ಲಿ ಸಿನಿಮಾ ಯಾವ ರೀತಿಯಲ್ಲಿ ಗಳಿಕೆ ಮಾಡಲಿದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಮೊದಲ ದಿನ 30 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

ಶನಿವಾರ, ಭಾನುವಾರ ಹಾಗೂ ಸೋಮವಾರ (ಕ್ರಿಸ್​ಮಸ್ ರಜೆ) ಚಿತ್ರಕ್ಕೆ ಪ್ರಮುಖವಾಗಿದೆ. ಈ ದಿನಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಲೇಬೇಕಿದೆ. ಹಿಂದಿ ಬೆಲ್ಟ್​ನಲ್ಲಿ ಈ ಚಿತ್ರಕ್ಕೆ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದಿಂದ ತೀವ್ರ ಸ್ಪರ್ಧೆ ಇದೆ. ಈ ಸ್ಪರ್ಧೆಯನ್ನು ಎದುರಿಸಿ ನಿಲ್ಲಬೇಕಾದ ಅನಿವಾರ್ಯತೆ ‘ಡಂಕಿ’ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ