‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ‘ಡಂಕಿ’ ಸಿನಿಮಾ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ ಶಾರುಖ್​ ಖಾನ್​ ಅವರು ದೇವರ ಆಶೀರ್ವಾದ ಪಡೆದಿದ್ದಾರೆ.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Dec 13, 2023 | 1:25 PM

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಅವರು ‘ಡಂಕಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ತೆರೆಕಾಣಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಾಡು, ಟ್ರೇಲರ್​, ಪೋಸ್ಟರ್​ಗಳು ಜನಮಚ್ಚುಗೆ ಗಳಿಸಿವೆ. ಡಿಸೆಂಬರ್​ 21ರಂದು ಡಂಕಿ’ ಸಿನಿಮಾ (Dunki Movie) ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಶಾರುಖ್​ ಖಾನ್​ ಅವರು ವೈಷ್ಣೋ ದೇವಿ (Vaishno Devi) ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ಶಾರುಖ್​ ಮನೆಯಲ್ಲಿ ಹಿಂದು ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಆಚರಿಸುತ್ತಾರೆ. ಹಾಗಾಗಿ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆರ್ಚೀಸ್’ ಕಮಾನ್, ಶಾರುಖ್ ಪುತ್ರಿ ಸುಹಾನಾಗೆ ಅವಕಾಶಗಳ ಸುರಿಮಳೆ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಡಂಕಿ’ ಕೂಡ ಇದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪಾತ್ರವರ್ಗದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ತಾಪ್ಸಿ ಪನ್ನು ಅಭಿನಯಿಸಿದ್ದಾರೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ವಿಕ್ಕಿ ಕೌಶಲ್​, ಬೋಮನ್​ ಇರಾನಿ ಮುಂತಾದವರು ನಟಿಸಿದ್ದಾರೆ.

ಶಾರುಖ್​ ಖಾನ್​ ಅವರು 2023ರಲ್ಲಿ ಎರಡು ದೊಡ್ಡ ಯಶಸ್ಸು ಕಂಡಿದ್ದಾರೆ. ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿವೆ. ಈಗ ‘ಡಂಕಿ’ ಕೂಡ ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸುತ್ತಾ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದ ನಿರ್ಮಾಣದಲ್ಲಿ ಶಾರುಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್