ರಾಜ್ ಕುಂದ್ರಾಗೆ ಸಂಕಷ್ಟ, ಮತ್ತೊಮ್ಮೆ ಇಡಿ ದಾಳಿ

Raj Kundra: ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಮೇಲೆ ಇಂದು (ನವೆಂಬರ್ 29) ಇಡಿ ದಾಳಿ ಮಾಡಿದೆ. ರಾಜ್ ಕುಂದ್ರಾ ಅವರ ಮೇಲೆ ಇದೇ ವರ್ಷದ ಏಪ್ರಿಲ್​ನಲ್ಲಿ ಒಮ್ಮೆ ದಾಳಿ ನಡೆದಿತ್ತು. ಆಗ ಕುಂದ್ರಾಗೆ ಸೇರಿದ 97.70 ಕೋಟಿಯ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದ್ದರು.

ರಾಜ್ ಕುಂದ್ರಾಗೆ ಸಂಕಷ್ಟ, ಮತ್ತೊಮ್ಮೆ ಇಡಿ ದಾಳಿ
Raj Kundra-Shilpa Shetty
Follow us
ಮಂಜುನಾಥ ಸಿ.
|

Updated on:Nov 29, 2024 | 11:36 AM

ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣ ಎದುರಿಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ ಕುಂದ್ರಾ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಹಾಗೂ ಇನ್ನೂ ಕೆಲವರ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ಜಾರಿಯಲ್ಲಿದೆ.

ಕೆಲವು ದಿನಗಳ ಹಿಂದೆಯಷ್ಟೆ ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿ ಭಾರಿ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದರು. ಗೆಳೆಯರನ್ನು ಕರೆಸಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ದಂಪತಿಗಳಿಬ್ಬರೂ ಟಾಂಗಾದಲ್ಲಿ ನಗರ ಸುತ್ತಾಡಿ ಎಂಜಾಯ್ ಮಾಡಿದ್ದರು. ಆದರೆ ಅದರ ಬೆನ್ನಲ್ಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಈ ಹಿಂದೆಯೂ ಒಮ್ಮೆ ರಾಜ್ ಕುಂದ್ರಾ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವರ್ಷದ ಏಪ್ರಿಲ್ ತಿಂಗಳಲ್ಲಿ ಇಡಿ ಇಲಾಖೆ ರಾಜ್ ಕುಂದ್ರಾಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಅದರಲ್ಲಿ ಜುಹುವಿನ ಐಶಾರಾಮಿ ಮನೆ, ಪುಣೆಯ ಮನೆ ಹಾಗೂ ಕೆಲವು ಈಕ್ವಿಟಿ ಷೇರುಗಳು ಸಹ ಇದ್ದವು. 6600 ಕೋಟಿ ಮೌಲ್ಯದ ಬಿಟ್​ಕಾಯ್ನ್ ಹಗರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ ತಿಂಗಳಲ್ಲಿ ರಾಜ್ ಕುಂದ್ರಾ ಮೇಲೆ ದಾಳಿ ಮಾಡಲಾಗಿತ್ತು.

ಇದನ್ನೂ ಓದಿ:Shilpa Shetty Property Seized: ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾಗೆ ಜಾರಿ ನಿರ್ದೇಶನಾಲಯ ಶಾಕ್; 98 ಕೋಟಿ ರೂಪಾಯಿ ಆಸ್ತಿ ಸೀಜ್

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ರಾಜ್ ಕುಂದ್ರಾ ಮೇಲೆ ದಾಳಿ ಆಗಿರುವ ಸಾಧ್ಯತೆ ಇದೆ. 2017 ರಲ್ಲಿ ರಾಜ್ ಕುಂದ್ರಾ ಮತ್ತು ಅವರ ಕೆಲವು ಆಪ್ತರು ಭಾರಿ ಮೊತ್ತದ ಹಣವನ್ನು ಬಿಟ್​ಕಾಯ್ನ್ ಮೇಲೆ ಹೂಡಿಕೆ ಮಾಡಿ 6600 ಕೋಟಿಗೂ ಹೆಚ್ಚು ಹಣ ಗಳಿಸಿದ್ದರು. ಜೊತೆಗೆ ಜನರಿಗೆ ಶೇ 10 ಹಣ ಪಾವತಿಸುವುದಾಗಿ ಹೇಳಿ ಬಂಡವಾಳವನ್ನು ಸಹ ಆಕರ್ಷಿಸಿದ್ದರು. 2018 ರಲ್ಲಿ ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿಗೆ ಈ ಬಗ್ಗೆ ಸಮನ್ಸ್ ನೀಡಿ ವಿಚಾರಣೆ ಸಹ ಮಾಡಲಾಗಿತ್ತು.

ಇನ್ನು 2021 ರಲ್ಲಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಅನ್ನು ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣದಲ್ಲಿ ಬಂಧಿಸಿದ್ದರು. ಅಶ್ಲೀಲ ಸಿನಿಮಾಗಳನ್ನು ಮುಂಬೈನಲ್ಲಿ ನಿರ್ಮಿಸಿ ಅದನ್ನು ಲಂಡನ್​ ಮೂಲದ ತಮ್ಮದೇ ಕಂಪೆನಿಯ ಸರ್ವರ್​ನಿಂದ ಅಪ್ಲಿಕೇಶನ್​ಗೆ ಅಪ್​ಲೋಡ್ ಮಾಡಿಸುತ್ತಿದ್ದರಂತೆ ರಾಜ್ ಕುಂದ್ರಾ. ಇದರಿಂದ ಪ್ರತಿದಿನ ಲಕ್ಷಾಂತರ ರೂಪಾಯಿ ಹಣವನ್ನು ಕುಂದ್ರಾ ಗಳಿಸುತ್ತಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:35 am, Fri, 29 November 24

ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Daily Devotional: ಅಯ್ಯಪ್ಪ ಮಾಲೆ ಧಾರಣೆಯ ಹಿಂದಿನ ಮಹತ್ವ ತಿಳಿಯಿರಿ
Daily Devotional: ಅಯ್ಯಪ್ಪ ಮಾಲೆ ಧಾರಣೆಯ ಹಿಂದಿನ ಮಹತ್ವ ತಿಳಿಯಿರಿ
ಈ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ
ಈ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು