AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಸಿನಿಮಾ: ಪ್ರಿಯಾಂಕಾ ಗಾಂಧಿಗೂ ಇಷ್ಟ ಆಗಿದೆ ಕಂಗನಾ ಕೆಲಸ

ಈ ವರ್ಷ ಬಿಡುಗಡೆ ಆಗಲಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಎಮರ್ಜೆನ್ಸಿ’ ಕೂಡ ಇದೆ. ರಾಜಕೀಯದ ಕಥಾಹಂದರ ಇರುವ ಕಾರಣದಿಂದ ಈ ಸಿನಿಮಾ ಮೇಲೆ ಹೈಪ್ ಸೃಷ್ಟಿ ಆಗಿದೆ. ಇಂದಿರಾ ಗಾಂಧಿ ಪಾತ್ರವನ್ನು ಮಾಡಿರುವ ಕಂಗನಾ ರಣಾವತ್ ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ‘ಎಮರ್ಜೆನ್ಸಿ’ ಸಿನಿಮಾ ನೋಡುವ ಸಾಧ್ಯತೆ ಇದೆ.

‘ಎಮರ್ಜೆನ್ಸಿ’ ಸಿನಿಮಾ: ಪ್ರಿಯಾಂಕಾ ಗಾಂಧಿಗೂ ಇಷ್ಟ ಆಗಿದೆ ಕಂಗನಾ ಕೆಲಸ
Kangana Ranaut, Priyanka Gandhi
ಮದನ್​ ಕುಮಾರ್​
|

Updated on: Jan 08, 2025 | 9:03 PM

Share

ಕಂಗನಾ ರಣಾವತ್ ಅವರು ಈಗ ನಟಿ, ನಿರ್ದೇಶಕಿ ಮಾತ್ರವಲ್ಲ. ಸಂಸದೆ ಕೂಡ ಹೌದು. ಬಿಜೆಪಿ ಪಕ್ಷದಿಂದ ಸಂಸದೆ ಆಗಿರುವ ಅವರು ರಾಜಕೀಯ ಹಾಗೂ ಸಿನಿಮಾ ಎರಡೂ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಅವರು ತುರ್ತು ಪರಿಸ್ಥಿತಿಯ ವಿವರಗಳನ್ನು ದೊಡ್ಡ ಪರದೆಯಲ್ಲಿ ತೋರಿಸಲಿದ್ದಾರೆ. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಅವರ ಗೆಟಪ್​ ಗಮನ ಸೆಳೆದಿದೆ. ಅಚ್ಚರಿ ಏನೆಂದರೆ, ಇಂದಿರಾ ಗಾಂಧಿ ಕುಟುಂಬದವರಿಗೂ ಇದು ಮೆಚ್ಚುಗೆ ಆಗಿದೆ. ಪ್ರಿಯಾಂಕಾ ಗಾಂಧಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ಕಂಗನಾ ಹೇಳಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ಜನವರಿ 17ರಂದು ಬಿಡುಗಡೆ ಆಗುತ್ತಿದ್ದು, ಅದರ ಸಲುವಾಗಿ ಎಲ್ಲ ಕಡೆಗಳಲ್ಲಿ ಕಂಗನಾ ಸಂದರ್ಶನ ನೀಡುತ್ತಿದ್ದಾರೆ. ಪಿಟಿಐ ನ್ಯೂಸ್​ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ ಒಂದು ಪ್ರಶ್ನೆ ಕೇಳಲಾಗಿದೆ. ‘ಈ ಸಿನಿಮಾ ಬಗ್ಗೆ ಮಾತನಾಡಲು ಇಂದಿರಾ ಗಾಂಧಿ ಕುಟುಂಬದವರು ನಿಮ್ಮ ಬಳಿ ಬಂದಿದ್ದಾರಾ’ ಎಂದು ಕೇಳಿದ್ದಕ್ಕೆ ಕಂಗನಾ ಅವರು ಈ ವಿಷಯ ತಿಳಿಸಿದ್ದಾರೆ.

‘ಇಲ್ಲ.. ಅವರು ಯಾರೂ ನನ್ನ ಬಳಿ ಮಾತನಾಡಿಲ್ಲ. ಆದರೆ ನಾನು ಪಾರ್ಲಿಮೆಂಟ್​ನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದೆ. ಅವರು ನನ್ನ ಕೆಲಸ ಮತ್ತು ಕೇಶ ವಿನ್ಯಾಸದ ಬಗ್ಗೆ ಮೆಚ್ಚುಗೆ ಸೂಚಿಸಿದರು. ನಾನು ಎಮರ್ಜೆನ್ಸಿ ಸಿನಿಮಾ ಮಾಡಿದ್ದೇನೆ, ನೀವು ನೋಡಬೇಕು ಅಂತ ಅವರಿಗೆ ಹೇಳಿದೆ. ಓಕೆ, ನೋಡೋಣ ಅಂತ ಅವರು ಹೇಳಿದರು’ ಎಂದಿದ್ದಾರೆ ಕಂಗನಾ ರಣಾವತ್.

ಇದನ್ನೂ ಓದಿ: ‘ನಮ್ಮ ದೇಶವನ್ನು ಕೆಟ್ಟದಾಗಿ ತೋರಿಸುವ ಸಿನಿಮಾಗಳನ್ನೇ ಆಸ್ಕರ್​ ಆಯ್ಕೆ ಮಾಡುತ್ತದೆ’: ಕಂಗನಾ

ಇತ್ತೀಚೆಗೆ ‘ಎಮರ್ಜೆನ್ಸಿ’ ಸಿನಿಮಾದ 2ನೇ ಟ್ರೇಲರ್​ ಬಿಡುಗಡೆ ಆಯಿತು. ಅದನ್ನು ನೋಡಿದ ಸಿನಿಪ್ರಿಯರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. 1975ರಲ್ಲಿ ಹೇರಿಕೆ ಆಗಿದ್ದ ತುರ್ತು ಪರಿಸ್ಥಿತಿ ಭಾರತದ ಇತಿಹಾಸದಲ್ಲಿ ಎಂದಿಗೂ ಚರ್ಚೆ ಆಗುವಂತಹ ವಿಷಯ. ಸಿನಿಮಾ ಬಿಡುಗಡೆ ಆದ ಬಳಿಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮುಂತಾದವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಸುವ ಕೌತುಕ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ