Kangana Ranaut: ವಿಜಯೇಂದ್ರ ಪ್ರಸಾದ್ ಜತೆ ದೇವಸ್ಥಾನ ಸುತ್ತಿದ್ದ ಕಂಗನಾ ರಣಾವತ್​; ಫೋಟೋ ವೈರಲ್​

Kedarnath Temple: ಬಿಗಿ ಭದ್ರತೆ ನಡುವೆ ಕೇದರನಾಥ ದೇವಸ್ಥಾನಕ್ಕೆ ಕಂಗನಾ ರಣಾವತ್​ ಮತ್ತು ವಿಜಯೇಂದ್ರ ಪ್ರಸಾದ್​ ಅವರು ಭೇಟಿ ನೀಡಿದ್ದಾರೆ. ಅಭಿಮಾನಿಗಳ ಖಾತೆಗಳಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

Kangana Ranaut: ವಿಜಯೇಂದ್ರ ಪ್ರಸಾದ್ ಜತೆ ದೇವಸ್ಥಾನ ಸುತ್ತಿದ್ದ ಕಂಗನಾ ರಣಾವತ್​; ಫೋಟೋ ವೈರಲ್​
ವಿಜಯೇಂದ್ರ ಪ್ರಸಾದ್​, ಕಂಗನಾ ರಣಾವತ್​ ಮುಂತಾದವರು ಕೇದರನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ
Follow us
|

Updated on: May 24, 2023 | 10:51 PM

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ (Vijayendra Prasad)​ ಅವರು ಕಥೆಗಾರನಾಗಿ, ಚಿತ್ರಕಥೆ ಬರಹಗಾರನಾಗಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಬಾಲಿವುಡ್​ನಲ್ಲೂ ಅವರಿಗೆ ಬೇಡಿಕೆ ಇದೆ. ಅವರ ಬಗ್ಗೆ ನಟಿ ಕಂಗನಾ ರಣಾವತ್​ ಕೂಡ ಗೌರವ ಭಾವನೆ ಹೊಂದಿದ್ದಾರೆ. ಇತ್ತೀಚೆಗೆ ವಿಜಯೇಂದ್ರ ಪ್ರಸಾದ್​, ಕಂಗನಾ ರಣಾವತ್​ ಮುಂತಾದವರು ಕೇದರನಾಥ ದೇವಸ್ಥಾನಕ್ಕೆ (Kedarnath Temple) ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಕಂಗನಾ ರಣಾವತ್​ (Kangana Ranaut) ಫ್ಯಾನ್ಸ್​ ಖಾತೆಗಳಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ವಿಶೇಷವಾದ ವಿಡಿಯೋವನ್ನು ಕೂಡ ಕಂಗನಾ ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ‘ಹರ ಹರ ಮಹದೇವ’ ಎಂದು ಶಿವನ ಸ್ಮರಣೆ ಮಾಡಿದ್ದಾರೆ.

ದೇವರ ಬಗ್ಗೆ ಕಂಗನಾ ರಣಾವತ್​ ಅವರಿಗೆ ತುಂಬ ಭಕ್ತಿ ಇದೆ. ಹಬ್ಬಗಳನ್ನು ಅವರು ಶ್ರದ್ಧೆಯಿಂದ ಆಚರಿಸುತ್ತಾರೆ. ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ‘ಅಂತೂ ಇವತ್ತು ಕೇದಾರನಾಥದಲ್ಲಿ ದೇವರ ದರ್ಶನ ಆಯಿತು. ಅದು ಕೂಡ ಪೂಜ್ಯರಾದ ಕೈಲಾಸಾನಂದ ಮಹಾರಾಜ್​ ಮತ್ತು ವಿಜಯೇಂದ್ರ ಪ್ರಸಾದ್​ ಅವರ ಜೊತೆ. ಧನ್ಯವಾದಗಳು ಉಮೇಶ್​ ಅಣ್ಣ’ ಎಂದು ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ

‘ಎಮರ್ಜೆನ್ಸಿ’ ಚಿತ್ರ ನೋಡಿದ ವಿಜಯೇಂದ್ರ ಪ್ರಸಾದ್​:

ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಂಗನಾ ರಣಾವತ್ ಅವರು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸದ್ಯ ಈ ಸಿನಿಮಾ ಪೋಸ್ಟ್​ ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ. ವಿಶೇಷ ಎಂದರೆ ವಿಜಯೇಂದ್ರ ಪ್ರಸಾದ್ ಅವರು ಈ ಚಿತ್ರವನ್ನು ಇತ್ತೀಚೆಗೆ ವೀಕ್ಷಿಸಿದ್ದಾರೆ. ಅವರಿಗೆ ಈ ಸಿನಿಮಾ ಇಷ್ಟವಾಗಿದೆ. ಅಷ್ಟೇ ಅಲ್ಲ ಅನೇಕ ದೃಶ್ಯಗಳನ್ನು ನೋಡಿ ಅವರು ಕಣ್ಣೀರು ಹಾಕಿದ್ದಾರೆ ಎಂಬ ವಿಚಾರವನ್ನು ಸ್ವತಃ ಕಂಗನಾ ರಣಾವತ್ ಅವರು ಇತ್ತೀಚೆಗೆ ಬಹಿರಂಗಪಡಿಸಿದ್ದರು.

ಇದನ್ನೂ ಓದಿ: Vijayendra Prasad: ‘ನಾನು ಕಥೆ ಕದಿಯುತ್ತೇನೆ’; ಯಶಸ್ಸಿನ ರಹಸ್ಯ ಬಿಚ್ಚಿಟ್ಟ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​

‘ನನ್ನ ಎಲ್ಲಾ ಗುರುಗಳ ಮತ್ತು ಹಿತೈಷಿಗಳ ಆಶೀರ್ವಾದದೊಂದಿಗೆ ಎಮರ್ಜೆನ್ಸಿ ಚಿತ್ರವು ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಬರಲು ಸಿದ್ಧವಾಗಿದೆ. ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ’ ಎಂದು ಕಂಗನಾ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ