AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ರಣಾವತ್​ ಬಿಜೆಪಿ ಸೇರ್ಪಡೆ ಆಗ್ತಾರಾ? ರಾಜಕೀಯದ ಆಸಕ್ತಿ ಬಗ್ಗೆ ಬಾಯ್ಬಿಟ್ಟ ನಟಿ

Kangana Ranaut Politics: ನಟಿ ಕಂಗನಾ ರಣಾವತ್​ ಅವರು ಸಿನಿಮಾ ಮಾಡಿದ್ದಕ್ಕಿಂತಲೂ ವಿವಾದ ಮಾಡಿಕೊಂಡಿದ್ದೇ ಹೆಚ್ಚು. ರಾಜಕೀಯದ ಅನೇಕ ವಿಚಾರಗಳಲ್ಲಿ ಅವರು ತಲೆ ಹಾಕುತ್ತಾರೆ.

Kangana Ranaut: ಕಂಗನಾ ರಣಾವತ್​ ಬಿಜೆಪಿ ಸೇರ್ಪಡೆ ಆಗ್ತಾರಾ? ರಾಜಕೀಯದ ಆಸಕ್ತಿ ಬಗ್ಗೆ ಬಾಯ್ಬಿಟ್ಟ ನಟಿ
ಕಂಗನಾ ರಣಾವತ್
TV9 Web
| Edited By: |

Updated on:Oct 03, 2022 | 10:03 AM

Share

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರಿಗೆ ಸಿನಿಮಾ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗುತ್ತಿಲ್ಲ. ಅವರು ನಟಿಸಿದ ಸಾಲು ಸಾಲು ಸಿನಿಮಾಗಳು ಫ್ಲಾಪ್​ ಆಗಿವೆ. ಈ ನಡುವೆ ಅವರು ರಾಜಕೀಯಕ್ಕೆ (Politics) ಎಂಟ್ರಿ ನೀಡುತ್ತಾರಾ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ಬಿಜೆಪಿ (BJP) ಸರ್ಕಾರಕ್ಕೆ ಅವರು ಬೆಂಬಲ ನೀಡುತ್ತಲೇ ಬಂದಿದ್ದಾರೆ. ಹಾಗಾಗಿ ಕಂಗನಾ ಬಿಜೆಪಿ ಸೇರ್ಪಡೆ ಆಗಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ. ಈ ವಿಚಾರದ ಬಗ್ಗೆ ಸ್ವತಃ ಕಂಗನಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯದಲ್ಲಿ ತಮಗೆ ಆಸಕ್ತಿ ಇರುವುದು ಹೌದು, ಆದರೆ ಸದ್ಯಕ್ಕೆ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕಂಗನಾ ರಣಾವತ್​ ಅವರು ಸಿನಿಮಾ ಮಾಡಿದ್ದಕ್ಕಿಂತಲೂ ವಿವಾದ ಮಾಡಿಕೊಂಡಿದ್ದೇ ಹೆಚ್ಚು. ರಾಜಕೀಯದ ಅನೇಕ ವಿಚಾರಗಳಲ್ಲಿ ಅವರು ತಲೆ ಹಾಕುತ್ತಾರೆ. ಅವರ ಮಾತುಗಳನ್ನು ಕೆಲವರು ವಿರೋಧಿಸುತ್ತಾರೆ, ಕೆಲವರು ಬೆಂಬಲಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಎಲ್ಲ ಕಾರ್ಯಗಳಿಗೆ ಕಂಗನಾ ಮೆಚ್ಚುಗೆ ಸೂಚಿಸುತ್ತಾರೆ. ಈ ಕಾರಣಕ್ಕಾಗಿ ಅವರು ಬಿಜೆಪಿ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಊಹೆ ಅನೇಕರದ್ದಾಗಿದೆ. ಆದರೆ ಅದನ್ನು ಕಂಗನಾ ಅಲ್ಲಗಳೆದಿದ್ದಾರೆ.

‘ಸದ್ಯ ರಾಜಕೀಯಕ್ಕೆ ಪ್ರವೇಶಿಸುವ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನನಗೆ ಆಸಕ್ತಿ ಇಲ್ಲ. ನಟಿಯಾಗಿ ನನಗೆ ಭಾರತದ ರಾಜಕೀಯದಲ್ಲಿ ಆಸಕ್ತಿ ಇದೆ. ಮುಂದಿನ ದಿನಗಳಲ್ಲಿ ರಾಜಕೀಯದ ಕುರಿತು ಹೆಚ್ಚು ಸಿನಿಮಾಗಳನ್ನು ಮಾಡುತ್ತೇನೆ’ ಎಂದು ಕಂಗನಾ ರಣಾವತ್ ಹೇಳಿದ್ದಾರೆ. ಆ ಮೂಲಕ ಸದ್ಯಕ್ಕಂತೂ ತಾವು ರಾಯಕೀಯಕ್ಕೆ ಎಂಟ್ರಿ ನೀಡುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ರಾಜಕಾರಣಿಗಳ ಕುರಿತು ಸಿನಿಮಾ ಮಾಡುವಲ್ಲಿ ಕಂಗನಾ ರಣಾವತ್​ ಅವರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಜಯಲಲಿತಾ ಅವರ ಜೀವನಾಧಾರಿತ ‘ತಲೈವಿ’ ಸಿನಿಮಾದಲ್ಲಿ ಕಂಗನಾ ನಟಿಸಿದ್ದರು. ಆ ಚಿತ್ರ 2021ರ ಸೆಪ್ಟೆಂಬರ್​ನಲ್ಲಿ ಬಿಡುಗಡೆಯಾಗಿ ಹೀನಾಯವಾಗಿ ಸೋಲುಂಡಿತು. ಈಗ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

‘ಎಮರ್ಜೆನ್ಸಿ’ ಚಿತ್ರದ ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ಈ ಸಿನಿಮಾ ಮೂಡಿಬರುತ್ತಿದೆ. ಸ್ವತಃ ಕಂಗನಾ ರಣಾವತ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ ಎಂಬುದು ವಿಶೇಷ. ಅನುಪಮ್​ ಖೇರ್​, ಮಿಲಿಂದ್​​ ಸೋಮನ್​, ಶ್ರೇಯಸ್​ ತಲ್ಪಡೆ, ಸತೀಶ್​ ಕೌಶಿಕ್​ ಮುಂತಾದ ನಟರು ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:59 am, Mon, 3 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್