AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ

ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ಕೇಂದ್ರ ಸರ್ಕಾರದ ಕ್ರಮಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ನಟಿ ಕಂಗನಾ ರಣಾವತ್​ ಅವರು ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಸಿಎಎ ಬಗ್ಗೆ ನರೇಂದ್ರ ಮೋದಿ ಅವರು 2014ರಲ್ಲಿ ಮಾತನಾಡಿದ ವಿಡಿಯೋವನ್ನು ಕಂಗನಾ ಈಗ ಶೇರ್​ ಮಾಡಿಕೊಂಡಿದ್ದಾರೆ.

‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Mar 12, 2024 | 5:26 PM

Share

ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ಜಾರಿಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಜೋರಾಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್​ (Kangana Ranaut) ಅವರು ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಆದರೆ ದಳಪತಿ ವಿಜಯ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ತಕರಾರು ತೆಗೆದಿದ್ದಾರೆ.

ಕಂಗನಾ ರಣಾವತ್ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಿಎಎ ಎಂದು ಕ್ಯಾಪ್ಷನ್​ ನೀಡಿದ್ದು ಇಂಡಿಯನ್​ ಫ್ಲ್ಯಾಗ್​ ಎಮೋಜಿಯನ್ನು ಅವರು ಬಳಸಿದ್ದಾರೆ. ಆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಆಗುತ್ತಿರುವುದಕ್ಕೆ ತಮ್ಮ ಬೆಂಬಲ ಇದೆ ಎಂಬುದನ್ನು ಅವರು ಸೂಚಿಸಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡಿದ ವಿಡಿಯೋವನ್ನು ಕಂಗನಾ ರಣಾವತ್​ ಅವರು ಈಗ ಹಂಚಿಕೊಂಡಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಿಮ್ಮ ಭಾವನೆ ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸುವುದಕ್ಕೂ ಮುನ್ನ ಸಿಎಎ ಎಂದರೆ ಏನು ಎಂಬುದನ್ನು ತಿಳಿದುಕೊಳ್ಳಿ’ ಎಂದು ಕಂಗನಾ ರಣಾವತ್​ ಅವರು ಕ್ಯಾಪ್ಷನ್​ ನೀಡಿದ್ದಾರೆ.

ಇದನ್ನೂ ಓದಿ: ಸಿಎಎ ಸ್ವೀಕಾರಾರ್ಹವಲ್ಲ ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು: ದಳಪತಿ ವಿಜಯ್

ಕಂಗನಾ ರಣಾವತ್​ ಅವರು ಇನ್ನೂ ನೇರವಾಗಿ ರಾಜಕೀಯಕ್ಕೆ ಕಾಲಿಟ್ಟಿಲ್ಲ. ಆದರೂ ಅವರು ರಾಜಕೀಯದ ಕುರಿತು ಅನೇಕ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸುತ್ತಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ಕಂಗನಾ ಅವರು ‘ಎಮರ್ಜೆನ್ಸಿ’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುವುದರ ಜೊತೆ ನಿರ್ದೇಶಕವನ್ನೂ ಅವರೇ ಮಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ಮುಸ್ಲಿಮರು ಸಿಎಎ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಟಿವಿ9 ನೆಟ್​ವರ್ಕ್​ ನಡೆಸಿದ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೇ’ ಕಾನ್​ಕ್ಲೇವ್​ನ ಸಂವಾದದಲ್ಲಿ ಕಂಗನಾ ಅವರು ರಾಜಕೀಯದ ಎಂಟ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದರು. ‘ದೇಶಕ್ಕಾಗಿ ಏನನ್ನಾದರೂ ಮಾಡಲು ನನಗೆ ಸೀಟ್​, ಟಿಕೆಟ್​​ ಅಥವಾ ಅಧಿಕಾರ ಬೇಕಿಲ್ಲ. ನಟಿಯಾಗಿಯೇ ನಾನು ರಾಜಕೀಯ ಪಕ್ಷಗಳ ಎದುರು ಹೋರಾಡಿದ್ದೇನೆ. ಒಂದು ವೇಳೆ ನಾನು ರಾಜಕೀಯಕ್ಕೆ ಬರಬೇಕು ಎಂದರೆ ಇದು ಸರಿಯಾದ ಸಮಯ’ ಎಂದು ಕಂಗನಾ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್