Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಅಲಿ ಖಾನ್​ ಕೇಸಿಗೆ ಎಂಟ್ರಿ ಕೊಟ್ಟ ಎನ್​ಕೌಂಟರ್ ಸ್ಪೆಷಲಿಸ್ಟ್

Saif Ali Khan: ಬಾಲಿವುಡ್​ನ ಸ್ಟಾರ್ ನಟ ಸೈಪ್ ಅಲಿ ಖಾನ್​ ಚಾಕು ಇರಿತದ ಪ್ರಕರಣದ ತನಿಖೆಗೆ ಏಳು ತಂಡಗಳನ್ನು ರಚಿಸಲಾಗಿದೆ. ಪ್ರಕರಣ ವಿಶ್ವಮಟ್ಟದಲ್ಲಿ ಸುದ್ದಿಯಾಗಿದೆ. ಇದೀಗ ಈ ಪ್ರಕರಣದ ತನಿಖೆಗೆ ಎನ್​ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಎಂಟ್ರಿ ಕೊಟ್ಟಿದ್ದಾರೆ. ಸೈಫ್ ಅಲಿ ಖಾನ್ ಅವರ ಬಾಂದ್ರಾದ ಅಪಾರ್ಟ್​ಮೆಂಟ್​ಗೆ ದಯಾನಾಯಕ್ ಭೇಟಿ ನೀಡಿದ್ದರು.

ಸೈಫ್ ಅಲಿ ಖಾನ್​ ಕೇಸಿಗೆ ಎಂಟ್ರಿ ಕೊಟ್ಟ ಎನ್​ಕೌಂಟರ್ ಸ್ಪೆಷಲಿಸ್ಟ್
Encounter Dayanayak
Follow us
ಮಂಜುನಾಥ ಸಿ.
|

Updated on: Jan 17, 2025 | 9:49 AM

ಸೈಫ್ ಅಲಿ ಖಾನ್​ ಚಾಕು ಇರಿತ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣದ ತನಿಖೆಗೆ ಏಳು ತಂಡಗಳನ್ನು ರಚಿಸಲಾಗಿದೆ. ಚಾಕು ಇರಿದವನ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಅವರ ಆರೋಗ್ಯ ಇನ್ನೂ ಸ್ಥಿರವಾಗಿಲ್ಲ ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ಪ್ರಕರಣದಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಿದ್ದು, ಪವರ್​ಫುಲ್ ಕಾಪ್ ಒಬ್ಬರು ಪ್ರಕರಣಕ್ಕೆ ಎಂಟ್ರಿ ನೀಡಿದ್ದಾರೆ.

ಮುಂಬೈ ಭೂಗತ ಲೋಕವನ್ನು ಯಮನಂತೆ ಕಾಡುತ್ತಿರುವ ಎನ್​ಕೌಂಟರ್ ದಯಾನಾಯಕ್ ಅವರು ಸೈಫ್ ಅಲಿ ಖಾನ್ ಪ್ರಕರಣಕ್ಕೆ ಎಂಟ್ರಿ ನೀಡಿದ್ದಾರೆ. ಎನ್​ಕೌಂಟರ್ ದಯಾನಾಯಕ್ ಅವರು ಇಂದು (ಜನವರಿ 17) ಸೈಫ್ ಅಲಿ ಖಾನ್ ಅನ್ನು ದಾಖಲು ಮಾಡಿರುವ ಲೀಲಾವತಿ ಆಸ್ಪತ್ರೆ ಆವರಣದಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೂ ಮುಂಚೆ ಅವರು ಸೈಫ್ ಅಲಿ ಖಾನ್ ಅವರ ಬಾಂದ್ರಾದ ಮನೆಗೂ ಭೇಟಿ ನೀಡಿದ್ದರು. ಅಲ್ಲಿಯೂ ಸಹ ತನಿಖೆಯಲ್ಲಿ ಪಾಲ್ಗೊಂಡಿದ್ದರು.

ಜನವರಿ 16 ರಂದು ಹಲವು ಪೊಲೀಸ್ ಅಧಿಕಾರಿಗಳು ಸೈಫ್ ಅಲಿ ಖಾನ್ ಅವರ ಬಾಂದ್ರಾದ ಅಪಾರ್ಟ್​ಮೆಂಟ್​ಗೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಈ ವೇಳೆ ಎನ್​ಕೌಂಟರ್ ದಯಾನಾಯಕ್ ಸಹ ಆಗಮಿಸಿದ್ದರು. ಸೈಪ್ ಅಲಿ ಖಾನ್ ಪ್ರಕರಣದ ತನಿಖೆಗೆ ಮಾಡಲಾಗಿರುವ ಏಳು ತಂಡಗಳಲ್ಲಿ ಒಂದು ತಂಡದ ಜವಾಬ್ದಾರಿ ಎನ್​ಕೌಂಟರ್ ದಯಾನಾಯಕ್ ಅವರು ವಹಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸೈಫ್ ಅಲಿ ಖಾನ್ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಎದ್ದಿದ್ದು, ಸೈಫ್ ಅಲಿ ಖಾನ್​ಗೆ ಚಾಕು ಚುಚ್ಚಿದವನ ಉದ್ದೇಶ ಏನಿತ್ತು? ಘಟನೆ ನಡೆದಿದ್ದು ಹೇಗೆ? ಘಟನೆ ನಡೆದ ಬಳಿಕ ಆತ ಮನೆಯಲ್ಲೇ ಅಡಗಿ ಕೂತಿದ್ದು ಹೇಗೆ? ಚಾಕು ಇರಿದವನ ಹಿಂದೆ ಯಾವುದಾದರೂ ತಂಡ ಇದೆಯೇ? ಇನ್ನಿತರೆ ಪ್ರಶ್ನೆಗಳಿಗೂ ಈಗಲೂ ಉತ್ತರ ಬೇಕಿದೆ. ಎಲ್ಲಕ್ಕಿಂತಲೂ ಮುಖ್ಯವಾದ ಆರೋಪಿಯ ಬಂಧನ ಆಗಬೇಕಿದೆ.

ಇದನ್ನೂ ಓದಿ: ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಶಂಕಿತ ವ್ಯಕ್ತಿಯ ಫೋಟೋ ಬಹಿರಂಗ

ದಯಾನಾಯಾಕ್, ಕಠಿಣ ಪೊಲೀಸ್ ಅಧಿಕಾರಿಯಾಗಿ ಹೆಸರು ಮಾಡಿದವರು. ಕರ್ನಾಟಕದ ಉಡುಪಿಯವರಾದ ದಯಾನಾಯಕ್ ಸಣ್ಣ ವಯಸ್ಸಿನಲ್ಲೇ ಮುಂಬೈಗೆ ಹೋಗಿ ಅಲ್ಲಿ ಕೆಲಸ ಮಾಡಲು ಆರಂಭಿಸಿದರು. ಒಮ್ಮೆ ಪೊಲೀಸ್ ಠಾಣೆಯಲ್ಲಿ ಪ್ಲಂಬಿಂಗ್ ಕೆಲಸ ಮಾಡುವಾಗ ಅವರಿಂದ ಸ್ಪೂರ್ತಿ ಪಡೆದು ಪೊಲೀಸ್ ಅಧಿಕಾರಿ ಆಗುವ ನಿರ್ಣಯ ಮಾಡಿದರು. ಚೆನ್ನಾಗಿ ಓದಿ, ಇನ್​ಸ್ಪೆಕ್ಟರ್ ಆದ ದಯಾನಾಯಕ್, ಆ ನಂತರ ಭೂಗತ ಪಾತಕಿಗಳಿಗೆ ದುಸ್ವಪ್ನವಾಗಿ ಕಾಡಲು ಆರಂಭಿಸಿದರು. ಚೋಟಾ ರಾಜನ್, ಚೋಟಾ ಶಕೀಲ್ ಇನ್ನಿತರೆ ಕೆಲವು ಪಾತಕಿಗಳ ಕಡೆಯವರನ್ನು ಸಿಕ್ಕ-ಸಿಕ್ಕಲ್ಲಿ ಕೊಂದು ಸುದ್ದಿಯಾದರು. ಆದರೆ ಅವರ ವಿರುದ್ಧವೂ ಕೆಲ ಪ್ರಕರಣಗಳು ಜಾರಿಯಲ್ಲಿದ್ದು, ಒಮ್ಮೆ ಬಂಧನಕ್ಕೂ ಒಳಗಾಗಿದ್ದರು. ಆದರೆ ಪ್ರಕರಣ ಖುಲಾಸೆಯಾಗಿ ಮತ್ತೆ ಪೊಲೀಸ್ ಇಲಾಖೆ ಸೇರಿದ್ದಾರೆ. ಈಗ ಕಮೀಷನರ್ ಆಗಿರುವ ದಯಾನಾಯಕ್, ಸೈಫ್ ಅಲಿ ಖಾನ್ ಪ್ರಕರಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು