ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಿಕ್ಕ ಉಡುಗೊರೆಗಳನ್ನು ಸೀಜ್​ ಮಾಡಿದ ಜಾರಿ ನಿರ್ದೇಶನಾಲಯ

2021ರ ಜನವರಿಯಲ್ಲಿ ಸುಕೇಶ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ನಡುವೆ ಸ್ನೇಹ ಬೆಳೆದಿತ್ತು. ಬಳಿಕ ಅವರು ನಿರಂತರ ಸಂಪರ್ಕದಲ್ಲಿ ಇದ್ದರು. ಅಲ್ಲಿಂದೀಚೆಗೆ ಅಂದಾಜು 10 ಕೋಟಿ ರೂ. ಬೆಲೆ ಬಾಳುವ ಉಡುಗೊರೆಗಳನ್ನು ಸುಕೇಶ್​ನಿಂದ ಜಾಕ್ವೆಲಿನ್​ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಿಕ್ಕ ಉಡುಗೊರೆಗಳನ್ನು ಸೀಜ್​ ಮಾಡಿದ ಜಾರಿ ನಿರ್ದೇಶನಾಲಯ
ಜಾಕ್ವೆಲಿನ್​, ಸುಕೇಶ್​
Follow us
TV9 Web
| Updated By: Digi Tech Desk

Updated on:Dec 24, 2021 | 9:35 AM

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರಿಗೆ ದಿನ ಕಳೆದಂತೆ ಸಂಕಷ್ಟ ಹೆಚ್ಚುತ್ತಿದೆ. ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜತೆಗೆ ಜಾಕ್ವೆಲಿನ್​ ಕೂಡ ಕೈ ಜೋಡಿಸಿದ್ದಾರೆ ಎನ್ನಲಾಗುತ್ತಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಈಗ ಜಾರಿ ನಿರ್ದೇಶನಾಲಯ (Enforcement Directorate) ಜಾಕ್ವೆಲಿನ್​ಗೆ ಸುಕೇಶ್​ ಕಡೆಯಿಂದ ಸಿಕ್ಕಂತಹ ಎಲ್ಲಾ ಉಡುಗೊರೆಗಳನ್ನು ವಶಕ್ಕೆ ಪಡೆದಿದೆ.

ಉದ್ಯಮಿಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪವನ್ನು ಸುಕೇಶ್​ ಚಂದ್ರಶೇಖರ್​ ಎದುರಿಸುತ್ತಿದ್ದಾರೆ. 2021ರ ಜನವರಿಯಲ್ಲಿ ಸುಕೇಶ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ನಡುವೆ ಸ್ನೇಹ ಬೆಳೆದಿತ್ತು. ಬಳಿಕ ಅವರು ನಿರಂತರ ಸಂಪರ್ಕದಲ್ಲಿ ಇದ್ದರು. ಅಲ್ಲಿಂದೀಚೆಗೆ ಅಂದಾಜು 10 ಕೋಟಿ ರೂ. ಬೆಲೆ ಬಾಳುವ ಉಡುಗೊರೆಗಳನ್ನು ಸುಕೇಶ್​ನಿಂದ ಜಾಕ್ವೆಲಿನ್​ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಚಿನ್ನಾಭರಣಗಳು, ಡೈಮಂಡ್​ ಒಡವೆಗಳು, ತಲಾ 9 ಲಕ್ಷ ರೂ. ಬೆಲೆಯ 4 ಪರ್ಷಿಯನ್​ ಬೆಕ್ಕುಗಳು, 52 ಲಕ್ಷ ರೂ. ಬೆಲೆಯ ಕುದುರೆಯನ್ನು ಜಾಕ್ವೆಲಿನ್​ಗೆ ಸುಕೇಶ್​ ಗಿಫ್ಟ್​ ಆಗಿ ನೀಡಿದ್ದರು ಎಂಬುದನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಈಗ ಇವುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇನ್ನು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ತೀವ್ರವಾಗಿದೆ. ಈ ಸಂದರ್ಭದಲ್ಲಿ ಭಾರತವನ್ನು ಬಿಟ್ಟು ಬೇರೆಡೆಗೆ ತೆರಳದಂತೆ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಇಡಿ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ. ವಂಚನೆ ಆರೋಪದಲ್ಲಿ ಅರೆಸ್ಟ್​ ಆಗಿ ಸುಕೇಶ್​ ಜೈಲು ಸೇರಿದ್ದಾಗಲೂ ಅವರ ಜತೆ ಮೊಬೈಲ್​ ಮೂಲಕ ಜಾಕ್ವೆಲಿನ್​ ಫರ್ನಾಂಡಿಸ್​ ಸಂಪರ್ಕದಲ್ಲಿ ಇದ್ದರು. ಜಾಮೀನು ಪಡೆದು ಹೊರಬಂದಾಗ ಚೆನ್ನೈನ ಐಷಾರಾಮಿ ಹೋಟೆಲ್​ನಲ್ಲಿ ಇಬ್ಬರೂ ವಾಸವಾಗಿದ್ದರು ಎಂಬ ಮಾಹಿತಿ ಕೂಡ ಸಿಕ್ಕಿದೆ. ಜಾಕ್ವೆಲಿನ್​ ರೀತಿಯೇ ನಟಿ ನೋರಾ ಫತೇಹಿ ಕೂಡ ಸುಕೇಶ್ ಅವರಿಂದ ಐಷಾರಾಮಿ ಉಡುಗೊರೆಗಳನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಆದರೆ, ನೋರಾ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: Conman Sukesh: ತೆರೆಯ ಮೇಲೆ ಜಾಕ್ವೆಲಿನ್- ಸುಕೇಶ್ ಕಹಾನಿ?; ನೋರಾ- ಸುಕೇಶ್ ವೈಯಕ್ತಿಕ ಚಾಟ್ಸ್​​​​​ ಕೂಡ ಲೀಕ್

‘ವಿಕ್ರಾಂತ್​ ರೋಣ’ ನಟಿಗೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ; ದೇಶ ಬಿಟ್ಟು ಹೋಗುವಂತಿಲ್ಲ ಜಾಕ್ವೆಲಿನ್​ ಫರ್ನಾಂಡಿಸ್​

Published On - 8:12 am, Fri, 24 December 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ