Jacqueline Fernandez: ವಂಚನೆ ಪ್ರಕರಣದ ಕಿಂಗ್​ ಪಿನ್​ ಜತೆ ಕಿಸ್ಸಿಂಗ್​; ನಟಿ ಜಾಕ್ವೆಲಿನ್​ಗೆ ನೋಟಿಸ್

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ​ಮೇಲೂ ಅನುಮಾನ ಮೂಡಿತ್ತು.

Jacqueline Fernandez: ವಂಚನೆ ಪ್ರಕರಣದ ಕಿಂಗ್​ ಪಿನ್​ ಜತೆ ಕಿಸ್ಸಿಂಗ್​; ನಟಿ ಜಾಕ್ವೆಲಿನ್​ಗೆ ನೋಟಿಸ್
ಜಾಕ್ವೆಲಿನ್​ ಮತ್ತು ಸುಕೇಶ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 06, 2021 | 7:58 PM

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಬರೋಬ್ಬರಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಪ್ರಕರಣದ ಕಿಂಗ್​ ಪಿನ್​ ಸುಕೇಶ್​ ಚಂದ್ರಶೇಖರ್ ಜತೆ ಆಪ್ತವಾಗಿರುವ ಫೋಟೋಗಳು ಲೀಕ್​ ಆಗಿವೆ. ಇದರಿಂದ ಪ್ರಕರಣಕ್ಕೆ ಮತ್ತಷ್ಟು ಸಾಕ್ಷ್ಯ ಸಿಕ್ಕಂತಾಗಿದೆ. ಹೀಗಾಗಿ, ಡಿಸೆಂಬರ್​ 8ರಂದು ವಿಚಾರಣೆಗೆ ಹಾಜರಾಗುವಂತೆ ಜಾಕ್ವೆಲಿನ್​ಗೆ ನೋಟಿಸ್​ ನೀಡಲಾಗಿದೆ.

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ​ಮೇಲೂ ಅನುಮಾನ ಮೂಡಿತ್ತು. ಈಗ ಇಬ್ಬರೂ ಆಪ್ತವಾಗಿರುವ ಫೋಟೋ ಲೀಕ್​​ ಆಗಿದ್ದು, ನಟಿಗೆ ಸಂಕಷ್ಟ ಹೆಚ್ಚಾಗಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ದೆಹಲಿ ಜೈಲಿನಲ್ಲಿ ಸುಕೇಶ್ ಚಂದ್ರಶೇಖರ್ ಇದ್ದಾರೆ. ಈತ ದೆಹಲಿ ಜೈಲಿನಲ್ಲಿ ಇದ್ದುಕೊಂಡೇ ಉದ್ಯಮಿಗಳ ಪತ್ನಿಯರಿಗೆ ಕಾಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ವರದಿ ಆಗಿದೆ. ಈ ಮೊದಲು ತಮಿಳುನಾಡಿನ ಟಿಟಿವಿ ದಿನಕರನ್​​ಗೆ ಎಐಎಡಿಎಂಕೆ ಪಕ್ಷದ ಚಿಹ್ನೆ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ್ದ ಬಗ್ಗೆ ದೂರು ದಾಖಲಾಗಿದೆ. ಇವರ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಕಿಚ್ಚ ಸುದೀಪ್​ ನಟನೆಯ, ಅನೂಪ್​ ಭಂಡಾರಿ ನಿರ್ದೇಶನದ ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಗಡಂಗ್​ ರಕ್ಕಮ್ಮ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ಕನ್ನಡ ಸಿನಿಪ್ರಿಯರಿಗೆ ಪರಿಚಯಗೊಳ್ಳುವ ಮುನ್ನವೇ ಈ ರೀತಿ ವಿವಾದಗಳಲ್ಲಿ ಸಿಕ್ಕಿ ಹಾಕಿಕೊಂಡಿರುವುದು ವಿಪರ್ಯಾಸ.

ಇದನ್ನೂ ಓದಿ: ಜಾಕ್ವೆಲಿನ್​ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್​ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್​

ಜಾಕ್ವೆಲಿನ್​ ಕಿಸ್ಸಿಂಗ್​ ಪ್ರಕರಣ: ನಟಿಯನ್ನು ದೂರ ಇಡೋಕೆ ಮುಂದಾದ ಸಲ್ಮಾನ್​ ಖಾನ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ