AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲವನ್ನೂ ಹೇಳಿದೆ, ಎಲ್ಲವನ್ನೂ ಮಾಡಿದೆ’; ಐಶ್ವರ್ಯಾ ರೈ ಬಗ್ಗೆ ಟ್ವೀಟ್ ಮಾಡಿದ್ರಾ ಅಮಿತಾಭ್?

ಅಮಿತಾಭ್ ಬಚ್ಚನ್ ಅವರು ಹಲವು ವಿಚಾರಗಳ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರುವ ಟ್ವೀಟ್ ಸಾಕಷ್ಟು ಅಚ್ಚರಿ ಮೂಡಿಸಿದೆ.

‘ಎಲ್ಲವನ್ನೂ ಹೇಳಿದೆ, ಎಲ್ಲವನ್ನೂ ಮಾಡಿದೆ’; ಐಶ್ವರ್ಯಾ ರೈ ಬಗ್ಗೆ ಟ್ವೀಟ್ ಮಾಡಿದ್ರಾ ಅಮಿತಾಭ್?
ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Dec 11, 2023 | 7:04 AM

Share

ಬಚ್ಚನ್ ಕುಟುಂಬದಲ್ಲಿ ಯಾವುದೂ ಸರಿ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದನ್ನು ಕುಟುಂಬದವರು ಪದೇ ಪದೇ ಸಾಬೀತು ಮಾಡುತ್ತಿದ್ದಾರೆ. ಇತ್ತೀಚೆಗೆ ಅಮಿತಾಭ್ ಬಚ್ಚನ್ (Amitabh Bachchan) ಅವರು ಐಶ್ವರ್ಯಾ ರೈ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬೆನ್ನಲ್ಲೇ ಅಮಿತಾಭ್ ಅವರು ಒಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಸಾಕಷ್ಟು ಅಚ್ಚರಿ ಮೂಡಿಸಿದೆ. ಇದು ಐಶ್ವರ್ಯಾ ರೈ ಕುರಿತು ಮಾಡಿದ ಟ್ವೀಟ್ ಇರಬಹುದೇ ಎನ್ನುವ ಅನುಮಾನ ಮೂಡಿದೆ.

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿದೆ. ಅಮಿತಾಭ್ ಕುಟುಂಬದ ಕೆಲವರನ್ನು ಸಾರ್ವಜನಿಕವಾಗಿಯೇ ಐಶ್ವರ್ಯಾ ನಿರ್ಲಕ್ಷಿಸುತ್ತಿದ್ದಾರೆ. ಇದು ಅನುಮಾನ ಹುಟ್ಟಲು ಮೂಲ ಕಾರಣ. ಅಮಿತಾಭ್ ಅವರನ್ನೂ ಈ ಪ್ರಕರಣದಲ್ಲಿ ಎಳೆದು ತರಲಾಗುತ್ತಿದೆ. ಈ ಮಧ್ಯೆ ಅಮಿತಾಭ್ ಅವರು ಗೂಢಾರ್ಥದಲ್ಲಿ ಟ್ವೀಟ್ ಒಂದನ್ನು ಮಾಡಿದ್ದಾರೆ.

ಅಮಿತಾಭ್ ಬಚ್ಚನ್ ಮಾಡಿರುವ 4854ನೇ ಟ್ವೀಟ್ ಇದು. ‘ಎಲ್ಲವನ್ನೂ ಹೇಳಿದೆ, ಎಲ್ಲವನ್ನೂ ಮಾಡಿದೆ’ ಎಂದು ಅಮಿತಾಭ್ ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ, ‘ಸೋ ಡು ದಿ ಡನ್ ಆ್ಯಂಡ್ ಡನ್​ ದಿ ಡೂ’ ಎಂದು ಗೂಡಾರ್ಥ ಇರುವ ರೀತಿಯಲ್ಲಿ ಅವರು ಬರೆದುಕೊಂಡಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಹಲವು ವಿಚಾರಗಳ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರುವ ಟ್ವೀಟ್ ಸಾಕಷ್ಟು ಅಚ್ಚರಿ ಮೂಡಿಸಿದೆ. ಮಗ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಜೊತೆಗಿನ ವಿಚ್ಛೇದನದ ಬಗ್ಗೆ ಅವರು ಪರೋಕ್ಷವಾಗಿ ಮಾತನಾಡಿದರೇ ಎನ್ನುವ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: ಐಶ್ವರ್ಯಾ ರೈನ ಅನ್​ಫಾಲೋ ಮಾಡಿದ ಅಮಿತಾಭ್​; ನಿಜವಾಯ್ತಾ ವಿಚ್ಛೇದನ ವಿಚಾರ?

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಇತ್ತೀಚೆಗೆ ಒಟ್ಟಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದು ಅನುಮಾನ ಮೂಡಲು ಪ್ರಮುಖ ಕಾರಣ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕುಟುಂಬದ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ