ಮದುವೆ ಬೇಡ, ನನಗೆ ನನ್ನ ಹಾಸಿಗೆಯಲ್ಲಿ ಒಬ್ಬ ವ್ಯಕ್ತಿ ಬೇಕು ಎಂದು ತಬು ಹೇಳಿದ್ದು ನಿಜವೇ?
Tabu statement: ಖ್ಯಾತ ಬಾಲಿವುಡ್ ನಟಿ ತಬು ಅವರ ಮದುವೆ ಮತ್ತು ವೈಯಕ್ತಿಕ ಜೀವನದ ಬಗ್ಗೆ ಸುಳ್ಳು ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸುಳ್ಳು ಸುದ್ದಿಗೆ ತಬು ಅವರ ತಂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತಬು ಅವರು ಅಂತಹ ಹೇಳಿಕೆಯನ್ನು ಎಂದಿಗೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಸುಳ್ಳು ಸುದ್ದಿಯನ್ನು ಹರಡುವುದನ್ನು ನಿಲ್ಲಿಸುವಂತೆ ತಬು ಅವರ ತಂಡ ವಿನಂತಿಸಿದೆ.
ತಬು ಬಾಲಿವುಡ್ ಇಂಡಸ್ಟ್ರಿಯ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ತೊಂಬತ್ತರ ದಶಕದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ತಬು ಅನೇಕ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ತಮ್ಮ ಸಿನಿಮಾಗಳ ಹೊರತಾಗಿ, ತಬು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. 53 ವರ್ಷದ ತಬು ಇನ್ನೂ ಒಂಟಿ. ಅನೇಕ ಸಂದರ್ಶನಗಳಲ್ಲಿ, ಅವರ ಮದುವೆ ಮತ್ತು ಸಂಗಾತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿದೆ. ಅಂತಹ ಸಂದರ್ಶನವೊಂದರಲ್ಲಿ ತಬು ಈ ಪ್ರಶ್ನೆಗೆ ನೀಡಿದ ಉತ್ತರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
‘ಮದುವೆ ಬೇಡ, ನನಗೆ ನನ್ನ ಹಾಸಿಗೆಯಲ್ಲಿ ಒಬ್ಬ ವ್ಯಕ್ತಿ ಬೇಕು’ ಎಂದು ತಬು ಸಂದರ್ಶನದಲ್ಲಿ ಹೇಳಿದ್ದರು ಎನ್ನಲಾಗಿದೆ. ಇದೀಗ ಈ ಸುದ್ದಿಗೆ ತಬು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಬು ತಂಡದಿಂದ ಹೇಳಿಕೆ ಬಿಡುಗಡೆಯಾಗಿದೆ. ಇದರಲ್ಲಿ ತಬು ಯಾವತ್ತೂ ಅಂತಹ ಹೇಳಿಕೆ ನೀಡಿಲ್ಲ ಎಂದು ಆಕೆಯ ತಂಡ ಸ್ಪಷ್ಟಪಡಿಸಿದೆ. ಸುದ್ದಿಯಲ್ಲಿ ಮುದ್ರಿಸಿರುವ ಅವರ ಹೇಳಿಕೆ ಸುಳ್ಳು ಎಂದಿದ್ದಾರೆ.
‘ಸಂದರ್ಶನಗಳಲ್ಲಿ ಅಥವಾ ಕಾರ್ಯಕ್ರಮಗಳಲ್ಲಿ ನಾನು ಅಂತಹ ಕಾಮೆಂಟ್‌ಗಳನ್ನು ಎಂದಿಗೂ ಮಾಡಿಲ್ಲ’ ಎಂದು ತಬು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇದನ್ನು ಪ್ರಿಂಟ್ ಮಾಡುವುದನ್ನು ನಿಲ್ಲಿಸಿ ಎಂದು ತಬು ತಂಡ ಹೇಳಿದೆ. ‘ಹಲವಾರು ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ತಬು ಅವರ ಹೆಸರಿನಲ್ಲಿ ಕೆಲವು ಅವಮಾನಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡುತ್ತಿವೆ. ಅವರು ಎಂದಿಗೂ ಅಂತಹ ಹೇಳಿಕೆಯನ್ನು ನೀಡಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಅಭಿಮಾನಿಗಳನ್ನು ದಾರಿ ತಪ್ಪಿಸುವುದು ನೈತಿಕತೆಯ ಗಂಭೀರ ಉಲ್ಲಂಘನೆಯಾಗಿದೆ. ಈ ವೆಬ್‌ಸೈಟ್‌ಗಳು ತಕ್ಷಣವೇ ಈ ಸುಳ್ಳು ಹೇಳಿಕೆಗಳನ್ನು ತೆಗೆದುಹಾಕಬೇಕು ಮತ್ತು ತಮ್ಮ ಕ್ರಮಗಳಿಗಾಗಿ ಔಪಚಾರಿಕ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ’ ಎಂದು ತಬ ತಂಡ ಹೇಳಿದೆ.
ಇದನ್ನೂ ಓದಿ:ಅಜಯ್ ಹಾಗೂ ತಬು ಒಟ್ಟಾಗಿ ಹಲವು ಸಿನಿಮಾಗಳಲ್ಲಿ ನಟಿಸೋದೇಕೆ? ಇಲ್ಲಿದೆ ಉತ್ತರ
ಹೇಳಿಕೆ ಏನು?
‘ನನಗೆ ಮದುವೆಯಲ್ಲಿ ಆಸಕ್ತಿ ಇಲ್ಲ. ನನ್ನ ಹಾಸಿಗೆಯಲ್ಲಿ ಒಬ್ಬ ವ್ಯಕ್ತಿ ಮಾತ್ರ ನನಗೆ ಬೇಕು’ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಯಾರೋ ಇದನ್ನು ಉದ್ದೇಶಪೂರ್ವಕವಾಗಿ ಮಾಡಿದ್ದಾರೆ ಎನ್ನಲಾಗಿದೆ. ತಬು ಅವರು ಪ್ರಸ್ತುತ ಅಕ್ಷಯ್ ಕುಮಾರ್ ಅವರೊಂದಿಗೆ ‘ಭೂತ್ ಬಂಗ್ಲಾ’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದರಲ್ಲಿ ಅಕ್ಷಯ್ ಮತ್ತು ತಬು ಜೊತೆಗೆ ಪರೇಶ್ ರಾವಲ್ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಚಿತ್ರವನ್ನು ಪ್ರಿಯದರ್ಶನ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಮತ್ತು ತಬು ಸುಮಾರು 25 ವರ್ಷಗಳ ನಂತರ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಇಬ್ಬರೂ ‘ಹೇರಾ ಪೇರಿ’ ಚಿತ್ರದಲ್ಲಿ ಕೆಲಸ ಮಾಡಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ