AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ಗೆ ಬಲಿಯಾದ ಜನಪ್ರಿಯ ಹಾಸ್ಯ ನಟ ಅತುಲ್​ ಪರ್ಚುರೆ; ಚಿತ್ರರಂಗದ ಸಂತಾಪ

ಹಲವು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ಹಿರಿಯ ನಟ ಅತುಲ್​ ಪರ್ಚುರೆ ಅವರು ನಿಧನರಾಗಿದ್ದಾರೆ. ಅವರ ಸಾವಿನ ಸುದ್ದಿ ತಿಳಿದು ಚಿತ್ರರಂಗಕ್ಕೆ ಆಘಾತ ಆಗಿದೆ. 57 ವರ್ಷದ ಅತುಲ್​ ಪರ್ಚುರೆ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಇಂದು (ಅಕ್ಟೋಬರ್​ 14) ಅವರು ಕೊನೆಯುಸಿರು ಎಳೆದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸೆಲೆಬ್ರಿಟಿಗಳು, ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

ಕ್ಯಾನ್ಸರ್​ಗೆ ಬಲಿಯಾದ ಜನಪ್ರಿಯ ಹಾಸ್ಯ ನಟ ಅತುಲ್​ ಪರ್ಚುರೆ; ಚಿತ್ರರಂಗದ ಸಂತಾಪ
ಅತುಲ್​ ಪರ್ಚುರೆ
ಮದನ್​ ಕುಮಾರ್​
|

Updated on: Oct 14, 2024 | 9:45 PM

Share

ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಅತುಲ್​ ಪರ್ಚುರೆ ಅವರು ಇನ್ನಿಲ್ಲ ಎಂಬ ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಅತುಲ್​ ಪರ್ಚುರೆ ಅವರಿಗೆ 57 ವರ್ಷ ವಯಸ್ಸಾಗಿತ್ತು. ಕೆಲವು ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್​ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ತಾಯಿ, ಪತ್ನಿ ಮತ್ತು ಮಗಳನ್ನು ಅತುಲ್​ ಅವರು ಅಗಲಿದ್ದಾರೆ. ಕಾಮಿಡಿ ಪಾತ್ರಗಳ ಮೂಲಕ ಅತುಲ್​ ಅವರು ಖ್ಯಾತಿ ಗಳಿಸಿದ್ದರು. ಅವರ ಜೊತೆ ಕೆಲಸ ಮಾಡಿದ ಅನೇಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಮರಾಠಿ ಚಿತ್ರರಂಗ ಮತ್ತು ರಂಗಭೂಮಿಯಲ್ಲಿ ಅತುಲ್​ ಪರ್ಚುರೆ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಪ್ರತಿಭೆಯಿಂದ ಬಾಲಿವುಡ್​ ಸಿನಿಮಾಗಳಲ್ಲೂ ಅವಕಾಶ ಪಡೆದರು. ‘ಕಲ್​ಯುಗ್​​’, ‘ಗೋಲ್​ಮಾಲ್​’, ‘ಪಾರ್ಟ್ನರ್​’, ‘ಬಿಲ್ಲು ಬಾರ್ಬರ್​’, ‘ಆಲ್​ ದಿ ಬೆಸ್ಟ್​’, ‘ಆವಾರಪನ್​’, ‘ಬುಡ್ಡ ಹೋಗ ತೇರಾ ಬಾಪ್’ ಮುಂತಾದ ಹಿಂದಿ ಸಿನಿಮಾಗಳಲ್ಲಿ ಅತುಲ್​ ಪರ್ಚುರೆ ಅವರು ಅಭಿನಯಿಸಿದ್ದರು.

ಲಿವರ್​ ಕ್ಯಾನ್ಸರ್​ ಇರುವುದು ಗೊತ್ತಾಗ ಬಳಿಕ ಅತುಲ್ ಪರ್ಚುರೆ ಅವರ ವೃತ್ತಿಬದುಕಿಗೆ ಅಲ್ಪವಿರಾಮ ಬಿದ್ದಿತ್ತು. ಆದರೆ ಚಿಕಿತ್ಸೆ ಪಡೆದು ಅವರು ಮತ್ತೆ ನಟನೆಯಲ್ಲಿ ತೊಡಗಿಕೊಂಡಿದ್ದರು. ಸಿನಿಮಾಗಳ ಜೊತೆ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಅವರು ಹೆಸರು ಮಾಡಿದ್ದರು. ಶಾರುಖ್​ ಖಾನ್​, ಅಜಯ್ ದೇವಗನ್ ಮುಂತಾದ ಹಿಂದಿ ಚಿತ್ರರಂಗ ಸ್ಟಾರ್ ಕಲಾವಿದರ ಜೊತೆ ಅಭಿನಯಿಸಿ ಅತುಲ್​ ಅವರು ಸೈ ಎನಿಸಿಕೊಂಡಿದ್ದರು.

ಇದನ್ನೂ ಓದಿ: ಪ್ರತಿ ವರ್ಷ ಮಕ್ಕಳ ಕ್ಯಾನ್ಸರ್ ಪ್ರಕರಣ ಹೆಚ್ಚಳ: ಕಿದ್ವಾಯಿ ಆಸ್ಪತ್ರೆಯಿಂದ ಆತಂಕಕಾರಿ ವರದಿ..!

ಕಪಿಲ್ ಶರ್ಮಾ ನಡೆಸಿಕೊಟ್ಟ ‘ಕಾಮಿಡಿ ನೈಟ್ಸ್​ ವಿಥ್​ ಕಪಿಲ್​’ ಕಾರ್ಯಕ್ರಮದಲ್ಲಿ ಹಲವು ಪಾತ್ರಗಳನ್ನು ಮಾಡುವ ಮೂಲಕ ಅತುಲ್​ ಪರ್ಚುರೆ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಆರೋಗ್ಯ ಸಮಸ್ಯೆ ಉಲ್ಬಣಿಸಿದ್ದರಿಂದ ಅವರ ವೃತ್ತಿ ಜೀವನಕ್ಕೆ ಪೆಟ್ಟು ಬಿದ್ದಿತ್ತು. ಆರಂಭದಲ್ಲಿ ಅವರಿಗೆ ಕ್ಯಾನ್ಸರ್​ ಚಿಕಿತ್ಸೆ ಆರಂಭಿಸಿದ್ದಾಗ ವೈದ್ಯರಿಂದ ಎಡವಟ್ಟು ಆಗಿತ್ತು. ಇರುವ ಸಮಸ್ಯೆ ಇನ್ನಷ್ಟು ಜಾಸ್ತಿ ಆಗಿತ್ತು. ವೈದ್ಯರನ್ನು ಬದಲಿಸಿದ ಬಳಿಕ ಅವರು ಕೊಂಚ ಚೇತರಿಸಿಕೊಂಡಿದ್ದರು. ಆದರೆ ಈಗ ಅವರು ಮೃತಪಟ್ಟಿದ್ದಾರೆ. ಈ ವಿಷಯ ತಿಳಿದು ಚಿತ್ರರಂಗದ ಹಲವರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!