AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಭಾರತದ ಖ್ಯಾತ ಗಾಯಕ ನಿಧನ

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.

ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಭಾರತದ ಖ್ಯಾತ ಗಾಯಕ ನಿಧನ
Zubeen Garg
ಮಂಜುನಾಥ ಸಿ.
|

Updated on: Sep 19, 2025 | 4:05 PM

Share

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್ ಗರ್ಗ್ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಸಿಂಗಪುರದ ಸ್ಥಳೀಯ ಪೊಲೀಸರ ವರದಿಯಂತೆ ಜುಬೀನ್ ಗರ್ಗ್ ಅವರನ್ನು ನದಿಯೊಂದರಿಂದ ಹೊರಗೆ ತೆಗೆಯಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಜುಬೀನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಅಸ್ಸಾಂ ಮೂಲದವರಾದ ಜುಬೀನ್ ಗರ್ಗ್ ಅವರು ಅಸ್ಸಾಮಿ ಸಿನಿಮಾಗಳ ಖ್ಯಾತ ನಟ ಆಗಿದ್ದರು. ಮಾತ್ರವಲ್ಲದೆ ಹಲವಾರು ಹಿಂದಿ, ಬೆಂಗಾಲಿ, ಅಸ್ಸಾಮಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಪಂಜಾಬಿ, ಒಡಿಯಾ, ಬೋಡೊ, ಕರ್ಬಿ, ತಿವಾ, ನೇಪಾಳಿ, ಭೋಜ್​​ಪುರಿ, ಭಿಷ್ಣುಪ್​ರಿಯ ಮಣಿಪುರಿ ಇನ್ನೂ ಕೆಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದರು. ಎಆರ್ ರೆಹಮಾನ್ ಸೇರಿದಂತೆ ಇನ್ನೂ ಕೆಲವು ಅತ್ಯುತ್ತಮ ಸಂಗೀತ ನಿರ್ದೇಶಕರುಗಳ ಮೆಚ್ಚಿನ ಗಾಯಕರಾಗಿದ್ದರು ಜುಬೀನ್ ಗರ್ಗ್.

ಕನ್ನಡದಲ್ಲಿ ಗಣೇಶ್ ನಟಿಸಿರುವ ‘ಹುಡುಗಾಟ’ ಸಿನಿಮಾದ ‘ಒಮ್ಮೊಮ್ಮೆ ಹೀಗೂ’, ‘ಮಹಾರುದ್ರ’ ಸಿನಿಮಾದ ‘ಅಮ್ಮಾ ನೀನು’, ‘ಪರಿಚಯ’ ಸಿನಿಮಾದ ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದಾರೆ. ಹಿಂದಿಯಲ್ಲಿ ‘ದಿಲ್ ಸೇ’ , ‘ಗ್ಯಾಂಗ್​​ಸ್ಟರ್’, ‘ಅಶೋಕಾ’, ‘ಕ್ರಿಶ್’,‘ಆನ್’, ಇನ್ನೂ ಹಲವಾರು ಜನಪ್ರಿಯ ಸಿನಿಮಾಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ‘ಗ್ಯಾಂಗ್​​ಸ್ಟರ್’ ಸಿನಿಮಾದ ‘ಯಾ ಆಲಿ’ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು, ‘ದಿಲ್ ಸೇ’ ಸಿನಿಮಾದ ‘ಪಾಕಿ ಪಾಕಿ ಪರದೇಸಿ’ ‘ಕಾಂಟೆ’ ಸಿನಿಮಾದ ‘ಮಾಹಿ ವೇ’ ಇನ್ನೂ ಹಲವಾರು ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದರು.

ಇದನ್ನೂ ಓದಿ:‘ಸ್ತ್ರೀಲೋಲ’ ಟ್ಯಾಗ್​​ಗೆ ಕೂಲ್ ಆಗಿಯೇ ಉತ್ತರ ನೀಡಿದ ಗಾಯಕ ಕುಮಾರ್ ಸಾನು

ಬಹುಮುಖ ಪ್ರತಿಭೆ ಹೊಂದಿದ್ದ ಜುಬೀನ್ ಗಾಯಕರಾಗಿ ಮಾತ್ರವೇ ಅಲ್ಲದೆ ಅಸ್ಸಾಮಿ ಭಾಷೆಯ ಹಲವಾರು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ಜೊತೆಗೆ ಸಂಗೀತ ನಿರ್ದೇಶನ, ಗೀತ ರಚನೆ, ಚಿತ್ರಕತೆ ರಚನೆ, ಸಿನಿಮಾ ನಿರ್ಮಾಣಗಳನ್ನು ಸಹ ಜುಬೀನ್ ಗರ್ಗ್ ಮಾಡಿದ್ದಾರೆ. ಇದೀಗ ಖ್ಯಾತ ಗಾಯಕನ ನಿಧನಕ್ಕೆ ಹಲವಾರು ಸಂಗೀತಗಾರರು, ಸಂಗೀತ ನಿರ್ದೇಶಕರುಗಳು ಕಂಬನಿ ಮಿಡಿದಿದ್ದಾರೆ. ಸಿನಿಮಾ ನಟರುಗಳು ಕಂಬನಿ ಮಿಡಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ