AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​

ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್​ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ.

ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​
ರಷ್ಯಾದಲ್ಲಿ ಸಲ್ಮಾನ್​ ಖಾನ್​ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಫ್ಯಾನ್ಸ್​
TV9 Web
| Edited By: |

Updated on: Aug 24, 2021 | 4:20 PM

Share

‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದವು. ಈಗ ಸಲ್ಮಾನ್​ ಖಾನ್ ‘ಟೈಗರ್​ 3’ಗೆ ಸಿದ್ಧತೆ ನಡೆಸಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ಈ ಸಿನಿಮಾ ಬಹಳ ಮಹತ್ವದ್ದಾಗಿದೆ. ಈ ಕಾರಣಕ್ಕೆ ಅವರು ಈ ಚಿತ್ರದ ಬಗ್ಗೆ ಹೆಚ್ಚು ಆಸ್ತೆ ವಹಿಸಿದ್ದಾರೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಶೂಟಿಂಗ್​ ರಷ್ಯಾದಲ್ಲಿ ನಡೆಯುತ್ತಿದ್ದು, ಸಲ್ಮಾನ್​ ಅಭಿಮಾನಿಗಳ ಜತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ.

ಕೊವಿಡ್ ಎರಡನೇ ಅಲೆ​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿತ್ತು. ಭಾರತದಲ್ಲಿ ಕೊರೊನಾ ವೈರಸ್​ ಹೆಚ್ಚಾದ ಕಾರಣಕ್ಕೆ ಅನೇಕ ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿತ್ತು. ಆದರೆ, ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್​ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ.

ಸದ್ಯ, ರಷ್ಯಾದಲ್ಲಿ ಶೂಟಿಂಗ್​ ಮಾಡಲಾಗುತ್ತಿದೆ. ಅಲ್ಲಿಯೂ ಸಲ್ಮಾನ್​ ಖಾನ್​ಗೆ ಅಭಿಮಾನಿಗಳಿದ್ದಾರೆ. ಸಲ್ಮಾನ್​ ಖಾನ್​ ಜತೆ ಅವರು ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿವೆ. ಇತ್ತೀಚೆಗೆ ‘ಟೈಗರ್​ 3’ನಲ್ಲಿ ಸಲ್ಮಾನ್​ ಖಾನ್​ ಲುಕ್​ ಲೀಕ್​ ಆಗಿತ್ತು.

‘ಟೈಗರ್​ 3’ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ಮಾಪಕರು ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದ್ದಾರೆ. ‘ಟೈಗರ್​ 3’ ಚಿತ್ರದಲ್ಲಿ ವಿಲನ್​ ಇಂಟ್ರಡಕ್ಷನ್​ ಸೀನ್​ಗಾಗಿ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.  ‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ಬಳಿಕ ಟೈಗರ್​ ಸರಣಿಯಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಈ ಬಾರಿಯೂ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಕೂಡ ಒಂದು ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ಏರ್​ಪೋರ್ಟ್​​ನಲ್ಲಿ ಸಲ್ಮಾನ್​ ಖಾನ್ ಅವರನ್ನು ತಡೆದಿದ್ದ ಸಿಐ​ಎಸ್ಎಫ್​ ಅಧಿಕಾರಿಗೆ ಈಗ ಸಂಕಷ್ಟ; ಕಾರಣ ಏನು? 

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ