‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದವು. ಈಗ ಸಲ್ಮಾನ್ ಖಾನ್ ‘ಟೈಗರ್ 3’ಗೆ ಸಿದ್ಧತೆ ನಡೆಸಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ಈ ಸಿನಿಮಾ ಬಹಳ ಮಹತ್ವದ್ದಾಗಿದೆ. ಈ ಕಾರಣಕ್ಕೆ ಅವರು ಈ ಚಿತ್ರದ ಬಗ್ಗೆ ಹೆಚ್ಚು ಆಸ್ತೆ ವಹಿಸಿದ್ದಾರೆ. ಈ ಸಿನಿಮಾದ ಆ್ಯಕ್ಷನ್ ದೃಶ್ಯಗಳ ಶೂಟಿಂಗ್ ರಷ್ಯಾದಲ್ಲಿ ನಡೆಯುತ್ತಿದ್ದು, ಸಲ್ಮಾನ್ ಅಭಿಮಾನಿಗಳ ಜತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ.
ಕೊವಿಡ್ ಎರಡನೇ ಅಲೆ ಕಾರಣದಿಂದ ಸಿನಿಮಾ ಶೂಟಿಂಗ್ ನಿಂತಿತ್ತು. ಭಾರತದಲ್ಲಿ ಕೊರೊನಾ ವೈರಸ್ ಹೆಚ್ಚಾದ ಕಾರಣಕ್ಕೆ ಅನೇಕ ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿತ್ತು. ಆದರೆ, ಈಗ ಕೊವಿಡ್ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ.
ಸದ್ಯ, ರಷ್ಯಾದಲ್ಲಿ ಶೂಟಿಂಗ್ ಮಾಡಲಾಗುತ್ತಿದೆ. ಅಲ್ಲಿಯೂ ಸಲ್ಮಾನ್ ಖಾನ್ಗೆ ಅಭಿಮಾನಿಗಳಿದ್ದಾರೆ. ಸಲ್ಮಾನ್ ಖಾನ್ ಜತೆ ಅವರು ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇತ್ತೀಚೆಗೆ ‘ಟೈಗರ್ 3’ನಲ್ಲಿ ಸಲ್ಮಾನ್ ಖಾನ್ ಲುಕ್ ಲೀಕ್ ಆಗಿತ್ತು.
‘ಟೈಗರ್ 3’ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ಮಾಪಕರು ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದ್ದಾರೆ. ‘ಟೈಗರ್ 3’ ಚಿತ್ರದಲ್ಲಿ ವಿಲನ್ ಇಂಟ್ರಡಕ್ಷನ್ ಸೀನ್ಗಾಗಿ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’ ಬಳಿಕ ಟೈಗರ್ ಸರಣಿಯಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಈ ಬಾರಿಯೂ ಸಲ್ಮಾನ್ ಖಾನ್ಗೆ ಜೋಡಿಯಾಗಿ ಕತ್ರಿನಾ ಕೈಫ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಕೂಡ ಒಂದು ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.
ಇದನ್ನೂ ಓದಿ: ಏರ್ಪೋರ್ಟ್ನಲ್ಲಿ ಸಲ್ಮಾನ್ ಖಾನ್ ಅವರನ್ನು ತಡೆದಿದ್ದ ಸಿಐಎಸ್ಎಫ್ ಅಧಿಕಾರಿಗೆ ಈಗ ಸಂಕಷ್ಟ; ಕಾರಣ ಏನು?