AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆಗೆ ಮಧ್ಯ ರಸ್ತೆಯಲ್ಲಿ ಕಿಸ್ ಮಾಡಲು ಬಂದ ಅಭಿಮಾನಿ; ಇದು ನಾಟಕ ಎಂದ ನೆಟ್ಟಿಗರು

ಸೆಲ್ಫಿ ಕೇಳುವ ನೆಪದಲ್ಲಿ ಬಂದ ಅಭಿಮಾನಿ ಅತಿರೇಕದಿಂದ ವರ್ತಿಸಿದ್ದಾನೆ. ಪೂನಂ ಪಾಂಡೆಗೆ ಬಲವಂತದಿಂದ ಕಿಸ್ ಮಾಡಲು ಪ್ರಯತ್ನಿಸಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಿಡಿಯೋ ನೋಡಿದ ಬಳಿಕ ಇದೆಲ್ಲ ನಾಟಕ ಎಂಬ ಅನುಮಾನ ಅನೇಕರಿಗೆ ಮೂಡಿದೆ.

ಪೂನಂ ಪಾಂಡೆಗೆ ಮಧ್ಯ ರಸ್ತೆಯಲ್ಲಿ ಕಿಸ್ ಮಾಡಲು ಬಂದ ಅಭಿಮಾನಿ; ಇದು ನಾಟಕ ಎಂದ ನೆಟ್ಟಿಗರು
Poonam Pandey
ಮದನ್​ ಕುಮಾರ್​
|

Updated on: Feb 21, 2025 | 7:30 PM

Share

ನಟಿ, ಮಾಡೆಲ್ ಪೂನಂ ಪಾಂಡೆ ಅವರು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಾರೆ. ಅವರ ವಿಡಿಯೋಗಳು ಆಗಾಗ ವೈರಲ್ ಆಗುತ್ತವೆ. ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಪೂನಂ ಪಾಂಡೆ ಅವರು ಕೆಲವೊಂದು ವಿವಾದ ಕೂಡ ಮಾಡಿಕೊಂಡ ಉದಾಹರಣೆಗಳು ಇವೆ. ಈಗ ಅವರ ಒಂದು ವಿಡಿಯೋ ವೈರಲ್ ಆಗುತ್ತಿದೆ. ಮುಂಬೈನ ಬೀದಿಯಲ್ಲಿ ಪೂನಂ ಪಾಂಡೆಗೆ ಅಭಿಮಾನಿಯೊಬ್ಬ ಬಲವಂತವಾಗಿ ಕಿಸ್ ಮಾಡಲು ಬಂದಿದ್ದಾನೆ. ಆಗ ಪೂನಂ ಪಾಂಡೆ ಅವರು ಹೆದರಿಕೊಂಡು ಪಕ್ಕಕ್ಕೆ ಸರಿದಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಪೂನಂ ಪಾಂಡೆ ಇದ್ದಲ್ಲಿ ಪಾಪರಾಜಿಗಳು ಮುಗಿಬೀಳುತ್ತಾರೆ. ಅವರ ಫೋಟೋ ಮತ್ತು ವಿಡಿಯೋ ಸಲುವಾಗಿ ಕ್ಯಾಮೆರಾ ಹಿಡಿದು ಓಡೋಡಿ ಬರುತ್ತಾರೆ. ಇನ್ನು, ಅಭಿಮಾನಿಗಳು ಕೂಡ ಸೆಲ್ಫಿಗಾಗಿ ಹಾತೊರೆಯುತ್ತಾರೆ. ಶುಕ್ರವಾರ (ಫೆಬ್ರವರಿ 21) ಮುಂಬೈನಲ್ಲಿ ಹೀಗೆಯೇ ಆಯಿತು. ಪೂನಂ ಪಾಂಡೆ ಅವರು ಪಾಪರಾಜಿಗಳಿಗೆ ಪೋಸ್ ನೀಡುತ್ತಿದ್ದರು. ಆಗ ಒಬ್ಬ ಅಭಿಮಾನಿ ಎಂಟ್ರಿ ನೀಡಿದ.

ಪಾಪರಾಜಿಗಳು ಪೂನಂ ಪಾಂಡೆಯ ಫೋಟೋ ತೆಗೆಯುತ್ತಿದ್ದಾಗ ಅಭಿಮಾನಿಯೊಬ್ಬ ಸೆಲ್ಫಿ ಕೇಳಲು ಬಂದ. ಒಂದು ಅಡಿ ಅಂತರದಿಂದ ಸೆಲ್ಫಿ ನೀಡಲು ಪೂನಂ ಪಾಂಡೆ ಕೂಡ ಒಪ್ಪಿದರು. ಆದರೆ ಅಷ್ಟಕ್ಕೇ ಆ ವ್ಯಕ್ತಿ ಸುಮ್ಮನಾಗಲಿಲ್ಲ. ಇನ್ನೂ ಹತ್ತಿರ ಹತ್ತಿರ ಬರುತ್ತಾ ಪೂನಂ ಪಾಂಡೆಯ ಮುಖಕ್ಕೆ ಕಿಸ್​ ಮಾಡಲು ಪ್ರಯತ್ನಿಸಿದ. ಆಗ ಪೂನಂ ಪಾಂಡೆ ಗಾಬರಿಯಾಗಿ ಓಡಿ ಹೋದರು.

ವೈರಲ್ ಆಗಿರುವ ಈ ವಿಡಿಯೋ ನೋಡಿದ ಅನೇಕರಿಗೆ ಅನುಮಾನ ಮೂಡಿದೆ. ಇದು ಬೇಕಂತಲೇ ಮಾಡಿರುವ ಡ್ರಾಮಾ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಮೊದಲೇ ಪ್ಲ್ಯಾನ್ ಮಾಡಿಕೊಂಡು ಈ ರೀತಿ ನಾಟಕ ಮಾಡಲಾಗಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ವೈರಲ್ ಆಗಬೇಕು, ಸುದ್ದಿ ಆಗಬೇಕು ಎಂಬ ಉದ್ದೇಶದಿಂದಲೇ ಪೂನಂ ಪಾಂಡೆ ಇದನ್ನೆಲ್ಲ ಮಾಡುತ್ತಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ಅವರು ಪ್ರತಿಕ್ರಿಯೆ ನೀಡಬೇಕಿದೆ. ಸದ್ಯಕ್ಕಂತೂ ಈ ವಿಡಿಯೋ ತುಂಬಾ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಪೂನಂ ಪಾಂಡೆಗೆ ಹೆಚ್ಚಿದ ಸಂಕಷ್ಟ, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಪೂನಂ ಪಾಂಡೆ ಅವರ ಡ್ರಾಮಾ ಒಂದೆರಡಲ್ಲ. ಈ ಮೊದಲು ಅವರು ತಮ್ಮ ಸಾವಿನ ಸುಳ್ಳು ಸುದ್ದಿಯನ್ನು ಸ್ವತಃ ಹಬ್ಬಿಸಿದ್ದರು! ಬಳಿಕ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಆ ರೀತಿ ಮಾಡಿದ್ದಾಗಿ ತಿಳಿಸಿದ್ದರು. ಆಗ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್