Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಜೊತೆ ಫೋಟೋ ತೆಗೆದುಕೊಳ್ಳಲು ಬಂದು ಕಿಸ್​ ಮಾಡಿದ ಮಹಿಳೆ

ಎಲ್ಲೇ ಹೋದರೂ ಸಲ್ಮಾನ್​ ಖಾನ್​ ಅವರು ಬಹಳ ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಯಾಕೆಂದರೆ, ಅವರಿಗೆ ಜೀವ ಬೆದರಿಕೆ ಇದೆ. ಹಾಗಾಗಿ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಇದರ ನಡುವೆಯೂ ಅಭಿಮಾನಿಗಳು ಹತ್ತಿರಕ್ಕೆ ಬಂದಾಗ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ.

ಸಲ್ಮಾನ್​ ಖಾನ್​ ಜೊತೆ ಫೋಟೋ ತೆಗೆದುಕೊಳ್ಳಲು ಬಂದು ಕಿಸ್​ ಮಾಡಿದ ಮಹಿಳೆ
ಸಲ್ಮಾನ್​ ಖಾನ್​
Follow us
ಮದನ್​ ಕುಮಾರ್​
|

Updated on:Dec 22, 2023 | 4:18 PM

ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಇರುವ ಫ್ಯಾನ್​ ಫಾಲೋಯಿಂಗ್​ ದೊಡ್ಡದು. ಅವರ ಜೊತೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂದು ಬಯಸುವ ಕೋಟ್ಯಂತರ ಅಭಿಮಾನಿಗಳು (Salman Khan Fan) ಇದ್ದಾರೆ. ಆದರೆ ಅವಕಾಶ ಸಿಗುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಈಗ ಮುಂಬೈನಲ್ಲಿ ಮಹಿಳೆಯೊಬ್ಬರು ಸಲ್ಮಾನ್​ ಖಾನ್​ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಬಳಿಕ ಖುಷಿಯಿಂದ ಮುತ್ತು ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ (Salman Khan Viral Video) ಆಗಿದೆ. ಅದನ್ನು ನೋಡಿ ಫ್ಯಾನ್ಸ್​ ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ನಿರ್ಮಾಪಕ ಆನಂದ್​ ಪಂಡಿತ್​ ಅವರ 60ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಪಾರ್ಟಿಗೆ ಸಲ್ಮಾನ್​ ಖಾನ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಬೇರೆ ಸೆಲೆಬ್ರಿಟಿಗಳು ಕೂಡ ಬಂದಿದ್ದರು. ಪಾರ್ಟಿ ಮುಗಿಸಿ ವಾಪಸ್​ ಹೊರಡುವಾಗ ಅನೇಕ ಅಭಿಮಾನಿಗಳು ಸಲ್ಲು ಅವರನ್ನು ಮುತ್ತಿಕೊಂಡಿದ್ದಾರೆ. ಎಲ್ಲರೂ ಸಲ್ಮಾನ್​ ಖಾನ್​ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದಾರೆ.

ಇದನ್ನೂ ಓದಿ: ವಯಸ್ಸಾದ ತಂದೆ-ತಾಯಿಯ ಕಾರಿಗೆ ಅಡ್ಡ ಬಂದವರಿಗೆ ಎಚ್ಚರಿಕೆ ನೀಡಿದ ಸಲ್ಮಾನ್​ ಖಾನ್​

ಸಲ್ಮಾನ್​ ಖಾನ್​ ಕೂಲ್​ ಆಗಿದ್ದರೆ ಖುಷಿಯಿಂದ ಫೋಟೋಗೆ ಪೋಸ್​ ನೀಡುತ್ತಾರೆ. ಆನಂದ್​ ಪಂಡಿತ್​ ಅವರ ಬರ್ತ್​ಡೇ ಪಾರ್ಟಿ ಮುಗಿಸಿ ವಾಪಸ್​ ಹೊರಡುವಾಗಲೂ ಸಲ್ಲು ತುಂಬ ಕೂಲ್​ ಆಗಿದ್ದರು. ಈ ವೇಳೆ ಫೋಟೋ ಕೇಳಿದ ಮಹಿಳೆಯ ಜೊತೆ ಅವರು ಪೋಸ್​ ನೀಡಿದ್ದಾರೆ.

ತಮ್ಮ ನೆಚ್ಚಿನ ನಟನ ಜೊತೆ ಫೋಟೋ ಸಿಕ್ಕ ಖುಷಿಗೆ ಆ ಮಹಿಳೆಯು ಸಲ್ಮಾನ್​ ಖಾನ್​ ಕೈಗೆ ಮುತ್ತು ಕೊಟ್ಟಿದ್ದಾರೆ. ಸ್ಥಳದಲ್ಲಿದ್ದ ಅನೇಕರು ಸಲ್ಲು ಜೊತೆ ಫೋಟೋ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಆಪ್ತನ ಮೇಲೆ ರಾಡ್​ನಿಂದ ಹಲ್ಲೆ..

ಎಲ್ಲೇ ಹೋದರೂ ಸಲ್ಮಾನ್​ ಖಾನ್​ ಅವರು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಯಾಕೆಂದರೆ, ಅವರಿಗೆ ಜೀವ ಬೆದರಿಕೆ ಇದೆ. ಅವರನ್ನು ಕೊಲ್ಲುವುದಾಗಿ ಲಾರೆನ್ಸ್​ ಬಿಷ್ಣೋಯ್​, ಗೋಲ್ಡಿ ಬ್ರಾರ್​ ಮುಂತಾದವರು ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಇದರ ನಡುವೆಯೂ ಅಭಿಮಾನಿಗಳು ಹತ್ತಿರಕ್ಕೆ ಬಂದಾಗ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:47 pm, Fri, 22 December 23

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ