ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಅವರ ಜೊತೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂದು ಬಯಸುವ ಕೋಟ್ಯಂತರ ಅಭಿಮಾನಿಗಳು (Salman Khan Fan) ಇದ್ದಾರೆ. ಆದರೆ ಅವಕಾಶ ಸಿಗುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಈಗ ಮುಂಬೈನಲ್ಲಿ ಮಹಿಳೆಯೊಬ್ಬರು ಸಲ್ಮಾನ್ ಖಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಬಳಿಕ ಖುಷಿಯಿಂದ ಮುತ್ತು ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ (Salman Khan Viral Video) ಆಗಿದೆ. ಅದನ್ನು ನೋಡಿ ಫ್ಯಾನ್ಸ್ ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ನಿರ್ಮಾಪಕ ಆನಂದ್ ಪಂಡಿತ್ ಅವರ 60ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಪಾರ್ಟಿಗೆ ಸಲ್ಮಾನ್ ಖಾನ್ ಅವರು ಅತಿಥಿಯಾಗಿ ಆಗಮಿಸಿದ್ದರು. ಬೇರೆ ಸೆಲೆಬ್ರಿಟಿಗಳು ಕೂಡ ಬಂದಿದ್ದರು. ಪಾರ್ಟಿ ಮುಗಿಸಿ ವಾಪಸ್ ಹೊರಡುವಾಗ ಅನೇಕ ಅಭಿಮಾನಿಗಳು ಸಲ್ಲು ಅವರನ್ನು ಮುತ್ತಿಕೊಂಡಿದ್ದಾರೆ. ಎಲ್ಲರೂ ಸಲ್ಮಾನ್ ಖಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದಾರೆ.
ಇದನ್ನೂ ಓದಿ: ವಯಸ್ಸಾದ ತಂದೆ-ತಾಯಿಯ ಕಾರಿಗೆ ಅಡ್ಡ ಬಂದವರಿಗೆ ಎಚ್ಚರಿಕೆ ನೀಡಿದ ಸಲ್ಮಾನ್ ಖಾನ್
ಸಲ್ಮಾನ್ ಖಾನ್ ಕೂಲ್ ಆಗಿದ್ದರೆ ಖುಷಿಯಿಂದ ಫೋಟೋಗೆ ಪೋಸ್ ನೀಡುತ್ತಾರೆ. ಆನಂದ್ ಪಂಡಿತ್ ಅವರ ಬರ್ತ್ಡೇ ಪಾರ್ಟಿ ಮುಗಿಸಿ ವಾಪಸ್ ಹೊರಡುವಾಗಲೂ ಸಲ್ಲು ತುಂಬ ಕೂಲ್ ಆಗಿದ್ದರು. ಈ ವೇಳೆ ಫೋಟೋ ಕೇಳಿದ ಮಹಿಳೆಯ ಜೊತೆ ಅವರು ಪೋಸ್ ನೀಡಿದ್ದಾರೆ.
ತಮ್ಮ ನೆಚ್ಚಿನ ನಟನ ಜೊತೆ ಫೋಟೋ ಸಿಕ್ಕ ಖುಷಿಗೆ ಆ ಮಹಿಳೆಯು ಸಲ್ಮಾನ್ ಖಾನ್ ಕೈಗೆ ಮುತ್ತು ಕೊಟ್ಟಿದ್ದಾರೆ. ಸ್ಥಳದಲ್ಲಿದ್ದ ಅನೇಕರು ಸಲ್ಲು ಜೊತೆ ಫೋಟೋ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಜೀವ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಆಪ್ತನ ಮೇಲೆ ರಾಡ್ನಿಂದ ಹಲ್ಲೆ..
ಎಲ್ಲೇ ಹೋದರೂ ಸಲ್ಮಾನ್ ಖಾನ್ ಅವರು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಯಾಕೆಂದರೆ, ಅವರಿಗೆ ಜೀವ ಬೆದರಿಕೆ ಇದೆ. ಅವರನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮುಂತಾದವರು ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಸಲ್ಮಾನ್ ಖಾನ್ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಇದರ ನಡುವೆಯೂ ಅಭಿಮಾನಿಗಳು ಹತ್ತಿರಕ್ಕೆ ಬಂದಾಗ ತಾಳ್ಮೆಯಿಂದ ಫೋಟೋಗೆ ಪೋಸ್ ನೀಡಿದ್ದನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:47 pm, Fri, 22 December 23