ಮೂರೇ ದಿನದಲ್ಲಿ 100 ಕೋಟಿ ರೂಪಾಯಿ? ಹೃತಿಕ್ ‘ಫೈಟರ್’ಗೆ ಮನಸೋತ ಫ್ಯಾನ್ಸ್
‘ಫೈಟರ್’ ಸಿನಿಮಾ ಶುಕ್ರವಾರ 22.50 ಕೋಟಿ ರೂಪಾಯಿ ಬಾಚಿಕೊಂಡಿತು. ಮೊದಲ ದಿನ ಸಿನಿಮಾ ನೋಡಿದವರು ಮೆಚ್ಚುಗೆ ಸೂಚಿಸಿದರು. ಈ ಕಾರಣಕ್ಕೆ ಚಿತ್ರದ ಗಳಿಕೆ ಮಿತಿ ಮೀರಿ ಏರಿಕೆ ಆಗಿದೆ.
ಹೃತಿಕ್ ರೋಷನ್ ನಟನೆಯ ‘ಫೈಟರ್’ ಚಿತ್ರಕ್ಕೆ (Fighter Movie) ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಿನಿಮಾ ಬುಕ್ ಮೈ ಶೋ ಹಾಗೂ ಐಎಂಡಿಬಿಯಲ್ಲಿ ಒಳ್ಳೆಯ ರೇಟಿಂಗ್ ಪಡೆದುಕೊಂಡಿದೆ. ಹೀಗಾಗಿ, ಬಾಕ್ಸ್ ಆಫೀಸ್ನಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಮೊದಲ ದಿನ ಕೇವಲ 22.50 ಕೋಟಿ ರೂಪಾಯಿಗೆ ತೃಪ್ತಿಪಟ್ಟುಕೊಂಡಿದ್ದ ಈ ಚಿತ್ರ ಎರಡನೇ ದಿನ ಭರ್ಜರಿ ಗಳಿಕೆ ಮಾಡಿದೆ. ಈ ಚಿತ್ರ ಶುಕ್ರವಾರ (ಜನವರಿ 26) 39 ಕೋಟಿ ರೂಪಾಯಿ ಬಾಚಿಕೊಂಡಿದೆ.
‘ಫೈಟರ್’ ಚಿತ್ರದ ಮೇಲೆ ನಿರೀಕ್ಷೆ ಮೂಡಲು ಸಾಕಷ್ಟು ಕಾರಣಗಳು ಇದ್ದವು. ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಕಾಂಬಿನೇಷನ್ ಎನ್ನುವ ಕಾರಣಕ್ಕೆ ಜನರಿಗೆ ನಿರೀಕ್ಷೆ ಮೂಡಿತ್ತು. ‘ಪಠಾಣ್’ ಸಿನಿಮಾ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಸಿನಿಮಾ ಮೊದಲ ದಿನಕ್ಕಿಂತ ಎರಡನೇ ದಿನ ಒಳ್ಳೆಯ ಗಳಿಕೆ ಮಾಡಿದೆ. ಮೂರೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರೋ ಸಾಧ್ಯತೆ ಇದೆ.
‘ಫೈಟರ್’ ಸಿನಿಮಾ ಮೊದಲ ದಿನ 22.50 ಕೋಟಿ ರೂಪಾಯಿ ಬಾಚಿಕೊಂಡಿತು. ಮೊದಲ ದಿನ ಸಿನಿಮಾ ನೋಡಿದವರು ಮೆಚ್ಚುಗೆ ಸೂಚಿಸಿದರು. ಈ ಕಾರಣಕ್ಕೆ ಚಿತ್ರದ ಗಳಿಕೆ ಮಿತಿ ಮೀರಿ ಹೆಚ್ಚಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇತ್ತು. ಇದು ಕೂಡ ಸಿನಿಮಾಗೆ ಸಹಕಾರಿ ಆಗಿದೆ. ಹೀಗಾಗಿ, ಮೊದಲನೇ ದಿನಕ್ಕಿಂತ ಎರಡನೇ ದಿನದ ಗಳಿಕೆ ಶೇ.77 ಏರಿಕೆ ಕಂಡು, 39 ಕೋಟಿ ರೂಪಾಯಿ ಬಾಚಿಕೊಂಡಿತು. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 61.50 ಕೋಟಿ ರೂಪಾಯಿ ಆಗಿದೆ.
ಇದನ್ನೂ ಓದಿ: ಈ ಪುಟ್ಟ ಬಾಲಕಿ ಯಾರು ಗುರುತು ಸಿಕ್ಕಿತಾ? ಅಡ್ಡ ಹೆಸರು ‘ಫೈಟರ್’
ಆ್ಯಕ್ಷನ್ ಸಿನಿಮಾಗಳನ್ನು ಮಾಡಲು ನಿರ್ದೇಶಕ ಸಿದ್ದಾರ್ಥ್ ಆನಂದ್ ಮುಂದಿದ್ದಾರೆ. ಅವರು ‘ಫೈಟರ್’ ಸಿನಿಮಾ ಮೂಲಕ ಮತ್ತೊಮ್ಮೆ ಗೆದ್ದಿದ್ದಾರೆ. 39 ಕೋಟಿ ರೂಪಾಯಿ ಸೇರ್ಪಡೆ ಆದರೆ ಸಿನಿಮಾದ ಗಳಿಕೆ 100 ಕೋಟಿ ರೂಪಾಯಿ ದಾಟಲಿದೆ. ಫೈಟರ್ ಸಿನಿಮಾದಲ್ಲಿ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ, ಅನಿಲ್ ಕಪೂರ್, ಕರಣ್ ಸಿಂಗ್ ಗ್ರೋವರ್, ಅಕ್ಷಯ್ ಒಬೆರಾಯ್ ಮೊದಲಾದವರು ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ