Hrithik Roshan: ‘ಫೈಟರ್​’ ಟೀಸರ್​ನಲ್ಲಿ ಹೃತಿಕ್​ ರೋಷನ್​, ದೀಪಿಕಾ ಪಡುಕೋಣೆ ಕಮಾಲ್​

Fighter Teaser: ಈ ಹಿಂದೆ ಸಿದ್ದಾರ್ಥ್​ ಆನಂದ್​ ಮತ್ತು ಹೃತಿಕ್​ ರೋಷನ್​ ಅವರು ‘ವಾರ್​’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಅವರು ‘ಫೈಟರ್​’ ಸಿನಿಮಾ ಮೂಲಕ ಮತ್ತೊಮ್ಮೆ ಕಮಾಲ್​ ಮಾಡಲು ಬರುತ್ತಿದ್ದಾರೆ. ದೀಪಿಕಾ ಪಡುಕೋಣೆ ಅವರು ಈ ಸಿನಿಮಾದಲ್ಲಿ ಹೃತಿಕ್ ರೋಷನ್​ಗೆ ಜೋಡಿಯಾಗಿ ನಟಿಸಿದ್ದಾರೆ.

Hrithik Roshan: ‘ಫೈಟರ್​’ ಟೀಸರ್​ನಲ್ಲಿ ಹೃತಿಕ್​ ರೋಷನ್​, ದೀಪಿಕಾ ಪಡುಕೋಣೆ ಕಮಾಲ್​
ಹೃತಿಕ್​ ರೋಷನ್​
Follow us
ಮದನ್​ ಕುಮಾರ್​
|

Updated on:Dec 08, 2023 | 1:17 PM

ಬಹುನಿರೀಕ್ಷಿತ ‘ಫೈಟರ್’ ಚಿತ್ರದ ಟೀಸರ್ (Fighter teaser) ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಮತ್ತು ಅನಿಲ್ ಕಪೂರ್ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ‘ಪಠಾಣ್’ ಖ್ಯಾತಿಯ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರು ‘ಫೈಟರ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಚಿತ್ರವು ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂಬುದಕ್ಕೆ ಟೀಸರ್​ ಸಾಕ್ಷಿ ಒದಗಿಸುತ್ತಿದೆ. ವೀಕ್ಷಕರನ್ನು ‘ಫೈಟರ್’ ಪ್ರಪಂಚಕ್ಕೆ ಸ್ವಾಗತ ಕೋರುವ ರೀತಿಯಲ್ಲಿ ಟೀಸರ್​ ಮೂಡಿಬಂದಿದೆ. ಆಗಸದಲ್ಲಿ ವಿಮಾನಗಳ ಮೂಲಕ ಮೈನವಿರೇಳಿಸುವಂತಹ ಆ್ಯಕ್ಷನ್​ ದೃಶ್ಯಗಳು ಈ ಸಿನಿಮಾದಲ್ಲಿ ಇರಲಿವೆ. ಹೃತಿಕ್​ ರೋಷನ್​ (Hrithik Roshan) ಅವರ ವೃತ್ತಿ ಜೀವನದಲ್ಲಿ ಈ ಸಿನಿಮಾ ಡಿಫರೆಂಟ್​ ಆಗಿರಲಿದೆ.

ನಟಿ ದೀಪಿಕಾ ಪಡುಕೋಣೆ ಅವರು ‘ಫೈಟರ್’ ಸಿನಿಮಾದಲ್ಲಿ ಹೃತಿಕ್ ರೋಷನ್​ಗೆ ಜೋಡಿಯಾಗಿ ನಟಿಸಿದ್ದಾರೆ. ಟೀಸರ್​ನಲ್ಲಿ ಆ್ಯಕ್ಷನ್​ ದೃಶ್ಯಗಳ ಜೊತೆಗೆ ಹಾಟ್​ ದೃಶ್ಯಗಳು ಕೂಡ ಕಾಣಿಸಿವೆ. ಆ ಮೂಲಕ ಅಭಿಮಾನಿಗಳ ಮನದಲ್ಲಿ ಸಿಕ್ಕಾಪಟ್ಟೆ ಕೌತುಕ ನಿರ್ಮಾಣ ಆಗಿದೆ. 2023ರ ಆರಂಭದಲ್ಲಿ ನಿರ್ದೇಶಕ ಸಿದ್ದಾರ್ಥ್​ ಆನಂದ್​ ಮತ್ತು ನಟಿ ದೀಪಿಕಾ ಪಡುಕೋಣೆ ಅವರು ‘ಪಠಾಣ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದರು. 2024ರಲ್ಲಿ ಅದು ಮರುಕಳಿಸುವ ಸೂಚನೆ ಸಿಕ್ಕಿದೆ.

2024ರ ಜನವರಿ 25ರಂದು ‘ಫೈಟರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ 3ಡಿಯಲ್ಲಿ ಕೂಡ ತೆರೆಕಾಣಲಿದೆ ಎಂದು ಹೇಳಲಾಗುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರ ನಿರ್ಮಾಣ ಆಗಿದೆ. ಯುದ್ಧ ವಿಮಾನಗಳ ಮೂಲಕ ಸಾಹಸ ದೃಶ್ಯಗಳನ್ನು ತೋರಿಸಲಿರುವ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಭಿನ್ನ ಪ್ರಯತ್ನವಾಗಿ ಗಮನ ಸೆಳೆಯಲಿದೆ. ಟೀಸರ್​ ನೋಡಿದ ಅಭಿಮಾನಿಗಳು ಪಾಸಿಟಿವ್​ ಆಗಿ ಪ್ರತಿಕ್ರಿಯಿಸುತ್ತಿದ್ದಾರೆ.

3ಡಿ ವರ್ಷನ್​ನಲ್ಲಿ ಬರಲಿದೆ ಹೃತಿಕ್​ ರೋಷನ್​ ನಟನೆಯ ‘ಫೈಟರ್​’ ಸಿನಿಮಾ

ಈ ಹಿಂದೆ ಸಿದ್ದಾರ್ಥ್​ ಆನಂದ್​ ಮತ್ತು ಹೃತಿಕ್​ ರೋಷನ್​ ಅವರು ‘ವಾರ್​’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಅವರು ‘ಫೈಟರ್​’ ಸಿನಿಮಾ ಮೂಲಕ ಮತ್ತೊಮ್ಮೆ ಕಮಾಲ್​ ಮಾಡಲು ಬರುತ್ತಿದ್ದಾರೆ. ಟೀಸರ್​ನಲ್ಲಿ ಹೃತಿಕ್​ ರೋಷನ್​ ಅವರು ಭಾರತದ ಬಾವುಟ ಹಿಡಿದು ಬರುವ ದೃಶ್ಯ ಕಂಡು ಚಿತ್ರಮಂದಿರದಲ್ಲಿ ಅಭಿಮಾನಿಗಳು ಥ್ರಿಲ್​ ಆಗಲಿದ್ದಾರೆ ಎಂದು ಈಗಲೇ ಊಹಿಸಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:17 pm, Fri, 8 December 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್