AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ಮಾಡುವಾಗಲೇ ನಟಿಯರು ಈ ಬಗ್ಗೆ ಮಾತನಾಡಬೇಕು; ಕಂಗನಾ ನೇರ ಮಾತು

ಚಿತ್ರರಂಗದಲ್ಲಿ ನಾಯಕಿಯರನ್ನು ಅತಿಯಾಗಿ ಗ್ಲಾಮರೈಸ್ ಮಾಡುವ ಕುರಿತು ದೊಡ್ಡ ಚರ್ಚೆ ನಡೆಯುತ್ತಿದೆ. ಜಾನ್ವಿ ಕಪೂರ್ ಅವರ 'ಪೆದ್ದಿ' ಚಿತ್ರದ ಪಾತ್ರ ವಿವಾದಕ್ಕೆ ಕಾರಣವಾಗಿದೆ. ಕಂಗನಾ ರಣಾವತ್ ನಿರ್ದೇಶಕರು ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ವಸ್ತುವಾಗಿ ತೋರಿಸುವುದಿಲ್ಲ, ಆದರೆ ನಾಯಕಿಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು ಎನ್ನುತ್ತಾರೆ. 'ಪೆದ್ದಿ' ನಿರ್ದೇಶಕರು ಕ್ಷಮೆಯಾಚಿಸಿ ವಿವಾದಿತ ದೃಶ್ಯಗಳನ್ನು ಕತ್ತರಿಸಲು ನಿರ್ಧರಿಸಿದ್ದಾರೆ.

ಶೂಟಿಂಗ್ ಮಾಡುವಾಗಲೇ ನಟಿಯರು ಈ ಬಗ್ಗೆ ಮಾತನಾಡಬೇಕು; ಕಂಗನಾ ನೇರ ಮಾತು
ಕಂಗನಾ-ಜಾನ್ವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 09, 2026 | 11:22 AM

Share

ಚಿತ್ರರಂಗದಲ್ಲಿ ನಾಯಕಿಯರನ್ನು ಅತಿಯಾಗಿ ಗ್ಲಾಮರೈಸ್ ಮಾಡುವ ಹಾಗೂ ಕಾಮಪ್ರಚೋದಕವಾಗಿ ಬಿಂಬಿಸುವ ವಿಚಾರ ಸದ್ಯ ದೇಶಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರದಲ್ಲಿ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ತೋರಿಸಿರುವ ರೀತಿಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಈ ಚರ್ಚೆ ಮತ್ತಷ್ಟು ಜೋರಾಗಿದೆ. ಹಲವು ಹಿರಿಯ ನಟಿಯರು ಈ ಬಗ್ಗೆ ಮಾತನಾಡಿದ್ದರು. ಈಗ ಬಾಲಿವುಡ್ ನಟಿ ಹಾಗೂ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರನೌತ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸದ್ಯ ತಮ್ಮ ಮುಂಬರುವ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಕಂಗನಾ, ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಬಗ್ಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. ‘ನನ್ನ ಅನುಭವದ ಪ್ರಕಾರ, ಯಾವುದೇ ಚಲನಚಿತ್ರ ನಿರ್ದೇಶಕರು ಕೂಡ ಒಬ್ಬ ಮಹಿಳೆಯನ್ನು ಕೇವಲ ಒಂದು ವಸ್ತುವಾಗಿ ತೋರಿಸಬೇಕು ಎಂಬ ಉದ್ದೇಶದಿಂದ ಸಿನಿಮಾ ಮಾಡುವುದಿಲ್ಲ. ಸಿನಿಮಾ ಎನ್ನುವುದು ಹಲವು ದೃಷ್ಟಿಕೋನಗಳಿರುವ ಒಂದು ಸಾಮೂಹಿಕ ಪ್ರಯತ್ನ’ ಎಂದಿದ್ದಾರೆ.

‘ಚಿತ್ರೀಕರಣದ ಸಮಯದಲ್ಲಿ ನಾಯಕಿಯರಿಗೆ ತಮಗಾಗುವ ಮುಜುಗರದ ಬಗ್ಗೆ ಮುಕ್ತವಾಗಿ ಮಾತನಾಡಲು ಸ್ವಾತಂತ್ರ್ಯ ಇರುತ್ತದೆ. ತಮಗೆ ಸರಿ ಅನಿಸದ ವಿಷಯಗಳನ್ನು ನಿರ್ದೇಶಕರಿಗೆ ತಿಳಿಸಿದಾಗ, ಅವರು ಖಂಡಿತಾ ಒಪ್ಪಿಕೊಳ್ಳುತ್ತಾರೆ. ಹಲವು ಬಾರಿ ಪುರುಷರ ದೃಷ್ಟಿಕೋನದಿಂದ ಕಥೆ ಬರೆಯುವಾಗ ಇಂತಹ ತಪ್ಪುಗಳು ಅರಿಯದೇ ನಡೆದುಹೋಗುತ್ತವೆ. ಹಾಗಾಗಿ ಮಹಿಳೆಯರು ತಮ್ಮ ಮನಸ್ಸಿನ ಮಾತನ್ನು ನೇರವಾಗಿ ಹೇಳಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

ಇನ್ನೊಂದೆಡೆ, ಜಾನ್ವಿ ಕಪೂರ್ ಪಾತ್ರದ ಉಡುಪು ಹಾಗೂ ದೃಶ್ಯಗಳ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ‘ಪೆದ್ದಿ’ ಚಿತ್ರದ ನಿರ್ದೇಶಕ ಬುಚಿ ಬಾಬು ಸನಾ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಚಿತ್ರದಲ್ಲಿನ ಜಾನ್ವಿ ಕಪೂರ್ ಅವರ ವಿವಾದಿತ ದೃಶ್ಯಗಳನ್ನು ಬದಲಾಯಿಸಲಾಗುವುದು (ಟ್ರಿಮ್ ಮಾಡಲಾಗುವುದು) ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಹಿಳೆಯರನ್ನು ಅಗೌರವಿಸುವ ಯಾವುದೇ ಉದ್ದೇಶ ತಮಗಿರಲಿಲ್ಲ ಎಂದು ಹೇಳಿರುವ ನಿರ್ದೇಶಕರು, ಜಾನ್ವಿ ಅವರ ಪಾತ್ರದಿಂದ ಮನನೊಂದ ಎಲ್ಲ ಪ್ರೇಕ್ಷಕರಿಗೂ ಕ್ಷಮೆಯಾಚಿಸಿದ್ದಾರೆ. ಆದರೆ, ಈ ಇಡೀ ವಿವಾದದ ಕುರಿತು ನಟಿ ಜಾನ್ವಿ ಕಪೂರ್ ಅವರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು