ಕೊನೆಗೂ ಮಗುವಿನ ತಂದೆ ಯಾರೆಂದು ತೋರಿಸಿದ ಇಲಿಯಾನಾ; ಆದರೂ ಒಂದು ಗುಟ್ಟು ಹೊರಬರಲೇ ಇಲ್ಲ
ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾಗಲ್ಲಿ ನಟಿಸಿ ಫೇಮಸ್ ಆಗಿರುವ ಇಲಿಯಾನಾ ಕೆಲ ತಿಂಗಳ ಹಿಂದೆ ಪ್ರೆಗ್ನೆಂಟ್ ಎಂಬ ವಿಚಾರ ರಿವೀಲ್ ಮಾಡಿದ್ದರು. ಈಗ ಬಾಯ್ಫ್ರೆಂಡ್ ಫೋಟೋ ಹಂಚಿಕೊಂಡಿದ್ದಾರೆ.
ಇಲಿಯಾನಾ ಡಿಕ್ರೂಜ್ (Ileana D’Cruz) ಅವರು ತಾವು ಪ್ರೆಗ್ನೆಂಟ್ ಎನ್ನುವ ವಿಚಾರವನ್ನು ಇತ್ತೀಚೆಗೆ ರಿವೀಲ್ ಮಾಡಿದ್ದರು. ಇಲಿಯಾನಾ ಅವರು ಇನ್ನೂ ಮದುವೆ ಆಗಿಲ್ಲ. ಹೀಗಾಗಿ, ಈ ಮಗುವಿಗೆ ತಂದೆ ಯಾರು ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿತ್ತು. ಇಷ್ಟು ದಿನ ಬಾಯ್ಫ್ರೆಂಡ್ ಹೆಸರನ್ನು ಅವರು ಗುಟ್ಟಾಗಿ ಇಟ್ಟಿದ್ದರು. ಈಗ ಕೊನೆಗೂ ಪ್ರಿಯಕರನ ಮುಖವನ್ನು ಇಲಿಯಾನಾ ರಿವೀಲ್ ಮಾಡಿದ್ದಾರೆ. ಅಚ್ಚರಿ ಎಂದರೆ ಆ ವ್ಯಕ್ತಿಯ ಹೆಸರನ್ನು ಅವರು ಗುಟ್ಟಾಗಿಯೇ ಇಟ್ಟಿದ್ದಾರೆ.
ಸೆಲೆಬ್ರಿಟಿಗಳು ಬದುಕುವ ರೀತಿ ಬೇರೆಯದೇ ರೀತಿ ಇರುತ್ತದೆ. ಲವ್, ಡೇಟಿಂಗ್, ಬ್ರೇಕಪ್ ಸಾಮಾನ್ಯ. ಇದರ ಜೊತೆಗೆ ಮದುವೆ ಆಗದೆ ಮಗು ಪಡೆಯೋದು, ಮದುವೆ ಆದ ಕೆಲವೇ ತಿಂಗಳಿಗೆ ತಂದೆ/ ತಾಯಿ ಆಗೋದು ಕಾಮನ್. ಇಲಿಯಾನಾ ಕೂಡ ಇದೇ ಸಾಲಿಗೆ ಸೇರುತ್ತಾರೆ. ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ಅವರು ಕೆಲ ತಿಂಗಳ ಹಿಂದೆ ಪ್ರೆಗ್ನೆಂಟ್ ಎಂಬ ವಿಚಾರ ರಿವೀಲ್ ಮಾಡಿದ್ದರು. ಈಗ ಬಾಯ್ಫ್ರೆಂಡ್ ಫೋಟೋ ಹಂಚಿಕೊಂಡಿದ್ದಾರೆ.
ಇಲಿಯಾನಾ ಅವರು ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಪಕ್ಕ ಓರ್ವ ವ್ಯಕ್ತಿ ಇದ್ದಾರೆ. ಈ ಸ್ಟೇಟಸ್ಗೆ ‘ಡೇಟ್ ನೈಟ್’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ. ಈ ಮೂಲಕ ಇಷ್ಟು ದಿನ ಗುಟ್ಟಾಗಿ ಇಟ್ಟ ವಿಚಾರ ರಿವೀಲ್ ಮಾಡಿದ್ದಾರೆ. ಅವರ ಹೆಸರನ್ನು ಹೇಳದೇ ಇರೋದು ಅನೇಕರಿಗೆ ಅಚ್ಚರಿ ಮೂಡಿಸಿದೆ.
ಇಲಿಯಾನಾ ಅವರು ಅನೇಕರ ಜೊತೆ ಡೇಟಿಂಗ್ ಮಾಡಿದ್ದಾರೆ. ಈ ಮೊದಲು ಆಸ್ಟ್ರೇಲಿಯಾದ ಫೋಟೋಗ್ರಾಫರ್ ಆ್ಯಂಡ್ರ್ಯೂ ನೀಬೋನ್ ಜೊತೆ ಸುತ್ತಾಟ ನಡೆಸುತ್ತಿದ್ದರು. ಆದರೆ, ಇವರ ಸಂಬಂಧ ಮದುವೆವರೆಗೆ ಹೋಗಿಲ್ಲ. ನಟಿ ಕತ್ರಿನಾ ಕೈಫ್ ಸಹೋದರ ಸೆಬ್ಬಾಸ್ಟಿಯನ್ ಲೊರಾನ್ ಮಿಶಾಲ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಕೂಡ ಗಾಸಿಪ್ ಹಬ್ಬಿತ್ತು.
ಇದನ್ನೂ ಓದಿ: ತಾಯಿ ಆಗುತ್ತಿರುವ ನಟಿ ಇಲಿಯಾನಾ ಡಿಕ್ರೂಸ್ಗೆ ಖುಷಿಯೋ ಖುಷಿ; ತಂದೆ ಯಾರೆಂಬ ಸುಳಿವು ಇನ್ನೂ ಸಿಕ್ಕಿಲ್ಲ
2006ರಿಂದ ಇಲಿಯಾನಾ ಸಿನಿಮಾ ರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಸಿನಿಮಾ ಆಯ್ಕೆಯಲ್ಲಿ ಅವರು ಇತ್ತೀಚೆಗೆ ಚ್ಯೂಸಿ ಆಗಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಯರನ್ನು ಕೆಟ್ಟದಾಗಿ ತೋರಿಸುತ್ತಾರೆ ಎಂದು ಹೇಳಿಕೆ ನೀಡಿ ಅವರು ವಿವಾದ ಮಾಡಿಕೊಂಡಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:17 am, Mon, 17 July 23