ಬಾಲಿವುಡ್​ನ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್ ವಿರುದ್ಧ್​​ ಎಫ್​ಐಆರ್​ ದಾಖಲು

| Updated By: ರಾಜೇಶ್ ದುಗ್ಗುಮನೆ

Updated on: Oct 04, 2021 | 9:44 PM

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ

ಬಾಲಿವುಡ್​ನ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್ ವಿರುದ್ಧ್​​ ಎಫ್​ಐಆರ್​ ದಾಖಲು
ಜಾವೇದ್ ಅಖ್ತರ್
Follow us on

ಬಾಲಿವುಡ್​ನ ಖ್ಯಾತ ಗೀತರಚನಾಕಾರ, ಕವಿ ಜಾವೇದ್​ ಅಖ್ತರ್​ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS​) ಬಗ್ಗೆ ಅವರು ನೀಡಿದ ಹೇಳಿಕೆಗಳು ಅವಹೇಳನಕಾರಿಯಾಗಿವೆ ಎಂಬ ಆರೋಪದಡಿ ದೂರು ದಾಖಲಾಗಿತ್ತು. ಈಗ ಈ ಪ್ರಕರಣದಲ್ಲಿ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. 

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ. ವಕೀಲರೂ ಆಗಿರುವ  ಆರ್​ಎಸ್​ಎಸ್​ ಕಾರ್ಯಕರ್ತ ದೃಷ್ಟಿಮಾನ್​ ಜೋಶಿ ಅವರು ಕ್ರಿಮಿನಲ್​ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್​ಎಸ್ಎಸ್​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದರು.

‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದರು. ಈಗ ನ್ಯಾಯಾಲಯ ಅವರ ವಿರುದ್ಧ ಎಫ್​ಐಆರ್​​ ದಾಖಲು ಮಾಡಿಕೊಂಡಿದೆ.

ಇದನ್ನೂ ಓದಿ: Javed Akhtar ಮುಂಬೈಯಲ್ಲಿರುವ ಜಾವೇದ್ ಅಖ್ತರ್  ಮನೆಗೆ ಬಿಗಿ ಭದ್ರತೆ; ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಒತ್ತಾಯ

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ